ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ತಡರಾತ್ರಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಒಂದು ಗಂಟೆಗೂ ಹೆಚ್ಚು ಸಭೆ ನಡೆಸಿದರು.
ಒಂದು ವಾರದ ಒಳಗೆ ಸಿದ್ದರಾಮಯ್ಯ ಮತ್ತು ಖರ್ಗೆ ಅವರ ನಡುವಿನ ಎರಡನೇ ಸಭೆ ಇದಾಗಿದ್ದು, ಇದೇ ವಾರ ಆರಂಭದಲ್ಲಿ ಅವರು ದೆಹಲಿಯಲ್ಲಿ ಭೇಟಿಯಾಗಿದ್ದರು.
ಸಭೆಯ ನಂತರ ಖರ್ಗೆಯವರ ಸದಾಶಿವನಗರ ನಿವಾಸದಿಂದ ಹೊರಬಂದು ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ನಿಮ್ಮ ಮುಖ್ಯಮಂತ್ರಿ ಅವಧಿಯ ಬಗ್ಗೆ ಸ್ಪಷ್ಟತೆ ಇದೆಯೇ ಎಂದು ಕೇಳಲಾದ ಪ್ರಶ್ನೆಗೆ, ‘ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ ಅದನ್ನು ನಾನು ಪಾಲಿಸುತ್ತೇನೆ’, ಆದರೆ ನಾಯಕತ್ವ ಬದಲಾವಣೆಯ ಬಗ್ಗೆ ಕೇಳಿಬರುತ್ತಿರುವ ಸುದ್ದಿ ಕೇವಲ ಊಹಾಪೋಹ ಅದನ್ನು ನೀವು ಅಂದರೆ ಮಾಧ್ಯಮಗಳು ಸೃಷ್ಟಿಸಿದ್ದೀರಿ ಎಂದು ಹೇಳಿದ್ದಾರೆ.
ಖರ್ಗೆ ಅವರೊಂದಿಗಿನ “ಸೌಜನ್ಯದ” ಭೇಟಿ ಎಂದು ಹೇಳಿರುವ ಸಿದ್ದರಾಮಯ್ಯ “ನಾವು ಪಕ್ಷದ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಬೆಂಗಳೂರು ಪುರಸಭೆಗಳಿಗೆ ಮುಂಬರುವ ಚುನಾವಣೆಗಳ ಬಗ್ಗೆ ಮಾತನಾಡಿದ್ದೇವೆ”, ಸಚಿವ ಸಂಪುಟ ಪುನರ್ರಚನೆಯ ಯೋಜನೆಯನ್ನು ಖರ್ಗೆ ಅವರೊಂದಿಗೆ ಚರ್ಚಿಸಿಲ್ಲ ಎಂದು ಅವರು ಹೇಳಿದರು.
ರಾಷ್ಟ್ರ ರಾಜಧಾನಿಗೆ ಭೇಟಿ ನೀಡುವ ಕೆಲವು ಕಾಂಗ್ರೆಸ್ ಶಾಸಕರ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಹೇಳಿದರು. “ಶಾಸಕರು (ದೆಹಲಿಗೆ) ಹೋಗಬಹುದು. ಆದರೆ ಅಂತಿಮವಾಗಿ, ಎಲ್ಲಾ ನಾಯಕರು, ಸಚಿವರು, ಡಿಕೆ ಶಿವಕುಮಾರ್ ಮತ್ತು ನಾನು – ಹೈಕಮಾಂಡ್ ನಿರ್ಧರಿಸುವುದನ್ನು ಅನುಸರಿಸಬೇಕು” ಎಂದು ಹೇಳಿದರು. ಹೈಕಮಾಂಡ್ ಕರೆದಾಗ ನಾನು ಸಹ ದೆಹಲಿಗೆ ಹೋಗಬೇಕು ಎಂದು ಹೇಳಿದರು.
ನವೆಂಬರ್ 20 ರಂದು ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿತು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸರ್ಕಾರದ ಅಧಿಕಾರ ವಹಿಸಿಕೊಳ್ಳಲು ಬಯಸುತ್ತಿದ್ದಾರೆ ಎಂಬ ಸೂಚನೆಗಳನ್ನು ನೀಡಿದರು. ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟ ಪುನರ್ ರಚನೆಗೆ ಒತ್ತಾಯಿಸುತ್ತಿದ್ದರೆ, ಪಕ್ಷವು ಮೊದಲು ತಮ್ಮ ಭವಿಷ್ಯವನ್ನು ನಿರ್ಧರಿಸಬೇಕೆಂದು ಡಿ.ಕೆ. ಶಿವಕುಮಾರ್ ಪಟ್ಟು ಹಿಡಿದಿದ್ದಾರೆ.
ಇನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ವರದಿಗಳನ್ನು ತಳ್ಳಿಹಾಕಿದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಜೆಪಿಗೆ ಕಾಂಗ್ರೆಸ್ ಆಂತರಿಕ ವ್ಯವಹಾರಗಳಲ್ಲಿ ಆಸಕ್ತಿ ಇಲ್ಲ ಎಂದು ಶನಿವಾರ ಹೇಳಿದ್ದಾರೆ


