ನ್ಯೂಸ್‌ಕ್ಲಿಕ್ ವೆಬ್‌ಸೈಟ್‌ನ ಮುಖ್ಯ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಹೆಚ್‌ಆರ್ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ನಗರ ನ್ಯಾಯಾಲಯ ಆದೇಶವನ್ನು ಹೊರಡಿಸಿದೆ. ಈ ಆದೇಶವನ್ನು ಪ್ರಶ್ನಿಸಿ ನ್ಯೂಸ್‌ಕ್ಲಿಕ್ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ (UAPA) ಕಾಯ್ದೆಯಡಿ ದಾಖಲಿಸಲಾದ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಸುದ್ದಿ ವೆಬ್‌ಸೈಟ್ ಒತ್ತಾಯಿಸಿದೆ.
ಶುಕ್ರವಾರ ಪ್ರಕರಣದ ವಿಚಾರಣೆಗೆ ನ್ಯಾಯಾಲಯ ಒಪ್ಪಿಗೆ ನೀಡಿದೆ.
ಬುಧವಾರ ಪುರಕಾಯಸ್ಥ ಮತ್ತು ಚಕ್ರವರ್ತಿ ಅವರನ್ನು ಬುಧವಾರ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಚೀನಾ ಪರ ಪ್ರಚಾರ ಮಾಡಲು ಡಿಜಿಟಲ್ ಸುದ್ದಿ ಸಂಸ್ಥೆ ಹಣ ಪಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರ ವಿಶೇಷ ವಿಭಾಗ ಅವರನ್ನು ಬಂಧಿಸಿದೆ.
ಗುರುವಾರ ದೆಹಲಿ ನ್ಯಾಯಾಲಯವು ಪುರ್ಕಾಯಸ್ಥ ಮತ್ತು ಚಕ್ರವರ್ತಿ ಅವರಿಗೆ ಪ್ರಥಮ ಮಾಹಿತಿ ವರದಿಯ ಪ್ರತಿಯನ್ನು ನೀಡುವಂತೆ ಪೊಲೀಸರಿಗೆ ಸೂಚಿಸಿದೆ. ಪುರಕಾಯಸ್ಥ ಮತ್ತು ಚಕ್ರವರ್ತಿ ಅವರು ಪ್ರತಿಯನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪೊಲೀಸರು ವಿರೋಧಿಸಿದ್ದರು.
ಮಂಗಳವಾರ ಪುರ್ಕಾಯಸ್ಥ ಮತ್ತು ಚಕ್ರವರ್ತಿ ಅವರನ್ನು ಬಂಧಿಸುವ ಮೊದಲು, ದೆಹಲಿ ಪೊಲೀಸರು ನ್ಯೂಸ್‌ಕ್ಲಿಕ್‌ಗೆ ಸಂಬಂಧಿಸಿದ ಹಲವಾರು ಪತ್ರಕರ್ತರ ಮೇಲೆ ದಾಳಿ ನಡೆಸಿದರು.
ಬುಧವಾರದ ನ್ಯೂಸ್‌ಕ್ಲಿಕ್ ಸಂಸ್ಥೆಯು ಘಟನೆ ಬಗ್ಗೆ ಮಾತನಾಡಿದ್ದು, ”ನಮ್ಮ ಮೇಲೆ ಆರೋಪ ಹೊರಿಸಲಾದ ಅಪರಾಧಗಳ ನಿಖರವಾದ ವಿವರಗಳಿಲ್ಲ” ಎಂದು ಹೇಳಿದರು.
ಚೀನಾದ ಅಜೆಂಡಾವನ್ನು ಪ್ರಚಾರ ಮಾಡುವ ನೆಟ್‌ವರ್ಕ್‌ನಿಂದ ನ್ಯೂಸ್ ಕ್ಲಿಕ್ ಪೋರ್ಟಲ್ ಹಣವನ್ನು ಪಡೆದಿದೆ ಎಂದು ಆಗಸ್ಟ್ 5 ರಂದು ನ್ಯೂಯಾರ್ಕ್ ಟೈಮ್ಸ್ ವರದಿ ಬಿತ್ತರಿಸಿತ್ತು. ಈ ವರದಿ ಆಧರಿಸಿ ದೆಹಲಿ ಪೊಲೀಸರು ಆಗಸ್ಟ್ 17ರಂದು ಪ್ರಕರಣ ದಾಖಲಿಸಿದ್ದರು.
ಸಧ್ಯ 46ಜನರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಡಿಜಿಟಲ್ ಸಾಧನಗಳು, ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ನ್ಯೂಸ್‌ಕ್ಲಿಕ್ ಮೇಲಿನ ದಾಳಿ ಸರ್ವಾಧಿಕಾರಿ ಮನಸ್ಥಿತಿಯ ಪ್ರತೀಕ: ಕೇಂದ್ರದ ವಿರುದ್ಧ ಗುಂಡೂರಾವ್ ಆಕ್ರೋಶ


