Homeಮುಖಪುಟನ್ಯೂಸ್‌ ಕ್ಲಿಕ್ ಪ್ರಕರಣ: ಸರ್ಕಾರಿ ಸಾಕ್ಷಿಯಾಗಲು ಅನುಮತಿ ಕೋರಿ ಕೋರ್ಟ್‌ ಮೊರೆ ಹೋದ ಅಮಿತ್ ಚಕ್ರವರ್ತಿ

ನ್ಯೂಸ್‌ ಕ್ಲಿಕ್ ಪ್ರಕರಣ: ಸರ್ಕಾರಿ ಸಾಕ್ಷಿಯಾಗಲು ಅನುಮತಿ ಕೋರಿ ಕೋರ್ಟ್‌ ಮೊರೆ ಹೋದ ಅಮಿತ್ ಚಕ್ರವರ್ತಿ

- Advertisement -
- Advertisement -

ಚೀನಾ ಪರ ಪ್ರಚಾರ ಮಾಡಲು ಹಣ ಪಡೆಯಲಾಗಿದೆ ಎಂದು ಆರೋಪಿಸಿ ಸುದ್ದಿ ಸಂಸ್ಥೆ ನ್ಯೂಸ್ ಕ್ಲಿಕ್ ಪೋರ್ಟಲ್ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಂಬಂಧ ಸರ್ಕಾರಿ ಸಾಕ್ಷಿಯಾಗಲು ಅನುಮತಿ ಕೋರಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ದೆಹಲಿ ಕೋರ್ಟ್‌ ಮೊರೆ ಹೋಗಿದ್ದಾರೆ.

ಪ್ರಕರಣ ಸಂಬಂಧ ಕ್ಷಮೆಯಾಚಿಸಿ ತನ್ನಲ್ಲಿರುವ ಮಾಹಿತಿಯನ್ನು ದೆಹಲಿ ಪೊಲೀಸರಿಗೆ ಒದಗಿಸಲು ಸಿದ್ದ ಎಂದು ಅಮಿತ್ ಚಕ್ರವರ್ತಿ ವಿಶೇಷ ನ್ಯಾಯಾಧೀಶ ಹರ್ದೀಪ್ ಕೌರ್ ಮುಂದೆ ಅರ್ಜಿ ಸಲ್ಲಿಸಿದ್ದಾರೆ. ಚಕ್ರವರ್ತಿ ಅವರ ಹೇಳಿಕೆಯನ್ನು ದಾಖಲಿಸಲು ನ್ಯಾಯಾಧೀಶರು ಮ್ಯಾಜಿಸ್ಟ್ರಿಯಲ್ ನ್ಯಾಯಾಲಯಕ್ಕೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಚಕ್ರವರ್ತಿ ಮತ್ತು ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ವಿರುದ್ಧದ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ದೆಹಲಿ ಪೊಲೀಸರಿಗೆ 60 ದಿನಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ನ್ಯೂಸ್ ಕ್ಲಿಕ್‌ಗೆ ಸಂಬಂಧಿಸಿದ ಪತ್ರಕರ್ತರ ನಿವಾಸಗಳು ಸೇರಿದಂತೆ ಹಲವು ಸ್ಥಳಗಳ ಮೇಲೆ ಪೊಲೀಸರು ದಾಳಿ ನಡೆಸಿದ ಬಳಿಕ ಸಂಸ್ಥೆಯ ಸಂಸ್ಥಾಪಕ ಮತ್ತು ಮಾನವ ಸಂಪನ್ಮೂಲ ಮುಖ್ಯಸ್ಥ ಇಬ್ಬರನ್ನೂ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಇಬ್ಬರ ಮೇಲೂ ಮೇಲೆ ಭಯೋತ್ಪಾದನೆ ಆರೋಪ ಹೊರಿಸಲಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ಕೂಡ ನ್ಯೂಸ್‌ ಕ್ಲಿಕ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಶೋಧ ಕಾರ್ಯ ನಡೆಸಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಅಡಿಯಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಕೂಡ ಪ್ರಕರಣ ದಾಖಲಿಸಿಕೊಂಡಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿಪಿಸಿ) ಯ ಪ್ರಚಾರದ ಅಂಗದೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆ ಮತ್ತು ಯುಎಸ್ ಮೂಲದ ಮಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್‌ನಿಂದ ನ್ಯೂಸ್‌ಕ್ಲಿಕ್ ₹38 ಕೋಟಿ ಪಡೆದಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದ ನಂತರ ಸಂಸ್ಥೆಯ ವಿರುದ್ಧ ತನಿಖೆ ಪ್ರಾರಂಭಸಲಾಗಿದೆ.

ಇದನ್ನೂ ಓದಿ : ತಮಿಳುನಾಡಿನಲ್ಲಿ ED-ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳ ನಡುವೆ ಮುಂದುವರಿದ ಫೈಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ದೆಹಲಿ ಜನರು ನಮಗೆ 56% ಮತ ನೀಡಿದ್ದಾರೆ, ಅವರು ಪಾಕಿಸ್ತಾನಿಗಳೇ..?’; ಅಮಿತ್‌ ಶಾ ವಿರುದ್ಧ...

0
'ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಕಾರಣ ಅವರು ಅಹಂಕಾರಿಯಾಗಿದ್ದಾರೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್...