Homeಮುಖಪುಟಕೇರಳ: ಕ್ರಿಸ್‌ಮಸ್‌ಗೆ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಕುಸಿತ

ಕೇರಳ: ಕ್ರಿಸ್‌ಮಸ್‌ಗೆ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಕುಸಿತ

- Advertisement -
- Advertisement -

ಕೇರಳದ ನೆಯ್ಯಟ್ಟಿಂಕರ ಬಳಿಯ ಪೂವರ್‌ನಲ್ಲಿ ಕ್ರಿಸ್‌ಮಸ್ ಆಚರಣೆಯ ಅಂಗವಾಗಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆ ಕುಸಿದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಕ್ರಿಸ್ಮಸ್‌ ಸಂಭ್ರಮದಲ್ಲಿದ್ದ ತಿರುವನಂತಪುರಂನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಕ್ರಿಸ್‌ಮಸ್ ಆಚರಣೆಯ ಭಾಗವಾಗಿ ನಿರ್ಮಿಸಿದ ತಾತ್ಕಾಲಿಕ ಸೇತುವೆ ಕುಸಿತದ ಪರಿಣಾಮ 7 ರಿಂದ 8 ಜನರು ಗಾಯಗೊಂಡಿದ್ದು, ಅವರಲ್ಲಿ ಕೆಲವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇತುವೆಯ ಮೇಲೆ ನಿಂತಿದ್ದರು. ಇದರಿಂದಾಗಿ ಸೇತುವೆಯು ಭಾರ ತಡೆಯಲಾರದೆ ಒಂದು ಕಡೆ ವಾಲಿದ ಪರಿಣಾಮ ಆ ಬದಿಯಲ್ಲಿ ನಿಂತಿದ್ದವರೆಲ್ಲ ಉರುಳಿ ಬಿದ್ದಿದ್ದಾರೆ. ಏಕಾಏಕಿ ಸೇತುವೆ ಕುಸಿದ ಕಾರಣ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ತಂಡ ತೆರಳಿ ಆಂಬುಲೆನ್ಸ್‌ ವ್ಯವಸ್ಥೆ ಮಾಡುವ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಕ್ರಿಸ್‌ಮಸ್ ಆಚರಣೆಯ ಭಾಗವಾಗಿ ಯೇಸುವಿನ ವಿವಿಧ ಕಲಾಕೃತಿಗಳು, ವಿಭಿನ್ನ ಬಗೆಯ ಮೂರ್ತಿಗಳು, ಅಲಂಕಾರಿಕ ಪ್ರದರ್ಶನ ಏರ್ಪಡಿಸಲಾಗಿತ್ತು. ಒಂದು ಭಾಗದಿಂದ ಇನ್ನೊಂದು ಕಡೆಗೆ ತೆರಳಲು ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಲಾಗಿತ್ತು. ಈ ವೇಳೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇತುವೆ ಮೇಲೆ ನಿಂತಿದ್ದಾರೆ. ಅಧಿಕ ಭಾರದಿಂದಾಗಿ ತಾತ್ಕಾಲಿಕ ಸೇತುವೆ ಕುಸಿದಿದೆ ಎಂದು ಪೊಲೀಸರು ಹೇಳಿದ್ದಾರೆ.

ಕೇರಳದಲ್ಲಿ ಸೋಮವಾರ ಸಂಭ್ರಮದಿಂದ ಕ್ರಿಸ್‌ಮಸ್‌ ಆಚರಣೆ ಮಾಡಲಾಗಿದೆ. ತಡರಾತ್ರಿವರೆಗೆ ಚರ್ಚ್‌ಗಳಲ್ಲಿ ಪ್ರಾರ್ಥನೆಗಳು ನಡೆದಿದೆ. ಜನರು ಕೇಕ್‌ಗಳನ್ನು ಕತ್ತರಿಸಿ, ಶುಭಾಶಯಗಳನ್ನು ವಿನಿಮಯ ಮಾಡುತ್ತಾ ಕ್ರಿಸ್‌ಮಸ್‌ ಆಚರಣೆ ಮಾಡಿದ್ದಾರೆ. ತಿರುವನಂತಪುರಂನಲ್ಲಿರುವ ಸೇಂಟ್‌ ಮೇರಿ ಸೈರೋ ಮಲಂಕರ ಕ್ಯಾಥೋಲಿಕ್‌ ಚರ್ಚ್‌, ಲ್ಯಾಟಿನ್‌ ಕ್ಯಾಥೋಲಿಕ್‌ ಆರ್ಚ್‌ಡೈಯೋಸಿಸ್‌ ಸೇರಿ ಎಲ್ಲಾ ಚರ್ಚ್‌ಗಳಲ್ಲಿ ಕ್ರೈಸ್ತ ಸಮುದಾಯದವರು ಸಂಭ್ರಮದಿಂದ ಕ್ರಿಸ್‌ಮಸ್‌ ಆಚರಣೆ ಮಾಡಿದ್ದಾರೆ.

ಇದನ್ನು ಓದಿ: ವಾಮಾಚಾರದ ಶಂಕೆಯಲ್ಲಿ ಆದಿವಾಸಿ ಮಹಿಳೆಯ ಸಜೀವ ದಹನ: ಕೊನೆಗೊಳ್ಳದ ‘ಮಾಟಗಾತಿ’ ಹಣೆಪಟ್ಟಿಯ ಹತ್ಯೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...