ಸ್ಟಾನ್ ಸ್ವಾಮಿ
Father Stan Swamy

ಭೀಮಾ ಕೋರೆಗಾಂವ್-ಎಲ್ಗರ್ ಪರಿಷತ್ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಆಯೋಗ (NIA) ಬಂಧನ ಮುಂದುವರೆದಿದ್ದು, 83 ವರ್ಷದ ಮಾನವ ಹಕ್ಕುಗಳ ಹೋರಾಟಗಾರ ಫಾದರ್‌ ಸ್ಟ್ಯಾನ್ ಸ್ವಾಮಿಯನ್ನು ಜಾರ್ಖಂಡ್‌‌ ರಾಂಚಿಯಲ್ಲಿ ಬಂಧಿಸಿದೆ.

ಕ್ಯಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದಾರೆ. ಸ್ಟ್ಯಾನ್ ಸ್ವಾಮಿ ಹಲವು ರೀತಿಯ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯಾಗಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

ಎರಡು ದಿನಗಳ ಮೊದಲು ಸ್ಟಾನ್ ಸ್ವಾಮಿ ವಿಡಿಯೋ ಹೇಳಿಕೆ ನೀಡಿ, ತಮ್ಮ ಬಂಧನ ಸಾಧ್ಯತೆಯ ಬಗ್ಗೆ ಮಾಹಿತಿ ನೀಡಿದ್ದರು.

ಸ್ಟ್ಯಾನ್ ಸ್ವಾಮಿ ವಿಸ್ತಾಪನ್ ವಿರೋಧಿ ಜನವಿಕಾಸ್ ಆಂದೋಲನ್ (ವಿ.ವಿ.ಜೆ.ಎ) ಸಂಘಟನೆಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಅವರು ಜಾರ್ಖಂಡ್‌ನ ಅತ್ಯಂತ ಶ್ರೇಷ್ಠ ಮಾನವ ಹಕ್ಕುಗಳ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

LEAVE A REPLY

Please enter your comment!
Please enter your name here