Homeಮುಖಪುಟಭಯೋತ್ಪಾದಕರೆಂದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ 9 ಜನರನ್ನು ಬಂಧಿಸಿದ NIA

ಭಯೋತ್ಪಾದಕರೆಂದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ 9 ಜನರನ್ನು ಬಂಧಿಸಿದ NIA

- Advertisement -
- Advertisement -

ಇಂದು ಮುಂಜಾನೆ ನಡೆಸಲಾದ ದಾಳಿಯಲ್ಲಿ ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ಒಂಬತ್ತು ಅಲ್-ಖೈದಾ ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (NIA) ಹೇಳಿದೆ.

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಮತ್ತು ಕೇರಳದ ಎರ್ನಾಕುಲಂನಲ್ಲಿ ಈ ದಾಳಿ ನಡೆಸಲಾಗಿದೆ ಎಂದು NIA ಹೇಳಿದ್ದು, “ಪಶ್ಚಿಮ ಬಂಗಾಳ ಮತ್ತು ಕೇರಳ ಸೇರಿದಂತೆ ಭಾರತದ ವಿವಿಧ ಸ್ಥಳಗಳಲ್ಲಿ ಅಲ್-ಖೈದಾ ಕಾರ್ಯಕರ್ತರ ಅಂತರ್-ರಾಜ್ಯ ಘಟಕಗಳ ಬಗ್ಗೆ ಎನ್ಐಎ ತಿಳಿದುಕೊಂಡಿತ್ತು. ಭಾರತದ ಪ್ರಮುಖ ಸ್ಥಳಗಳಲ್ಲಿ ಭಯೋತ್ಪಾದಕ ದಾಳಿಯನ್ನು ನಡೆಸಿ ಮುಗ್ಧ ಜನರನ್ನು ಕೊಲ್ಲುವ ಬಗ್ಗೆ ಈ ಗುಂಪು ಯೋಜಿಸುತ್ತಿತ್ತು” ಎಂದು ಹೇಳಿದೆ.

ಇದನ್ನೂ ಓದಿ: ಶಂಕಿತ ಭಯೋತ್ಪಾದಕ ದೇವೀಂದರ್‌ ಸಿಂಗ್ ವಿರುದ್ದ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌‌ಐಎ

ಆರು ಜನರನ್ನು ಪಶ್ಚಿಮ ಬಂಗಾಳದಿಂದ, ಮೂವರನ್ನು ಕೇರಳದಿಂದ ಬಂಧಿಸಲಾಗಿದೆ ಎಂದು NIA ಹೇಳಿದೆ. “ಡಿಜಿಟಲ್ ಸಾಧನಗಳು, ದಾಖಲೆಗಳು, ಜಿಹಾದಿ ಸಾಹಿತ್ಯ, ಶಸ್ತ್ರಾಸ್ತ್ರಗಳು, ದೇಶೀಯವಾಗಿ ನಿರ್ಮಿಸಿದ ಬಂದೂಕುಗಳು, ಸ್ಥಳೀಯವಾಗಿ ತಯಾರಿಸಿದ ದೇಹದ ರಕ್ಷಾಕವಚ ಮುಂತಾದವುಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಹೇಳಿದೆ.

“ಇವರು ನಿಧಿಸಂಗ್ರಹದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಗುಂಪಿನ ಕೆಲವು ಸದಸ್ಯರು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಲು ದೆಹಲಿಗೆ ಪ್ರಯಾಣಿಸಲು ಯೋಜಿಸುತ್ತಿದ್ದರು” ಎಂದು ಎಂದು NIA  ಹೇಳಿದೆ.

ಇದನ್ನೂ ಓದಿ: ಶೋಪಿಯಾನ ಯುವಕರ ಹತ್ಯೆಯಲ್ಲಿ ಸೈನಿಕರು ಕಾನೂನು ಉಲ್ಲಂಘನೆ ಮಾಡಿದ್ದಾರೆ: ಭಾರತೀಯ ಸೇನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಕ್ಕಳನ್ನು ಹೊಂದದೆ ಮೋದಿ, ಯೋಗಿ ನಿರುದ್ಯೋಗ ತಡೆದಿದ್ದಾರೆ ಎಂದ ಬಿಜೆಪಿ ಸಂಸದ!

0
ಯೂಟ್ಯೂಬರ್ ಒಬ್ಬರು ಉತ್ತರ ಪ್ರದೇಶದ ಬಿಜೆಪಿ ಸಂಸದನ ಬಳಿ ನಿರುದ್ಯೋಗ ಸಮಸ್ಯೆಯ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ, ವಿಚಿತ್ರವಾದ ಉತ್ತರ ನೀಡುವ ಮೂಲಕ ನಗೆ ಪಾಟಲಿಗೀಡಾಗಿದ್ದಾರೆ. ಯೂಟ್ಯೂಬರ್ ಜೊತೆ ಮಾತನಾಡಿರುವ ಆಝಂಘರ್ ಲೋಕಸಭಾ ಕ್ಷೇತ್ರದ ಬಿಜೆಪಿ...