Homeಮುಖಪುಟಹೋರಾಟಗಾರ ಅಖಿಲ್ ಗೊಗೋಯ್‌ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಕೈಬಿಟ್ಟ ಎನ್‌ಐಎ ನ್ಯಾಯಾಲಯ

ಹೋರಾಟಗಾರ ಅಖಿಲ್ ಗೊಗೋಯ್‌ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಕೈಬಿಟ್ಟ ಎನ್‌ಐಎ ನ್ಯಾಯಾಲಯ

- Advertisement -
- Advertisement -

ಅಸ್ಸಾಮಿನ ಪ್ರಮುಖ ರೈತ ಸಂಘಟನೆಯಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (KMSS)ಯ ನಾಯಕ, ಶಾಸಕ ಅಖಿಲ್ ಗೊಗೋಯ್‌ ವಿರುದ್ಧ ಇದ್ದ ಎಲ್ಲಾ ಆರೋಪಗಳನ್ನು ಎನ್‌ಐಎ ನ್ಯಾಯಾಲಯ ತೆರವುಗೊಳಿಸಿದೆ.

ಡಿಸೆಂಬರ್ 2019 ರಲ್ಲಿ ಅಸ್ಸಾಂನಲ್ಲಿ ಹಿಂಸಾತ್ಮಕ ಸಿಎಎ ವಿರೋಧಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಶಿವ್‌ಸಾಗರ್ ಶಾಸಕ ಅಖಿಲ್ ಗೊಗೋಯ್‌ ವಿರುದ್ಧ ಯುಎಪಿಎ ಅಡಿಯಲ್ಲಿ ದಾಖಲಾಗಿದ್ದ ಎಲ್ಲಾ ಆರೋಪಗಳನ್ನು ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ವಿಶೇಷ ನ್ಯಾಯಾಲಯ ತೆರವುಗೊಳಿಸಿದೆ.

ಅಸ್ಸಾಂನಲ್ಲಿ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕಾಗಿ ರೈತ ಹೋರಾಟಗಾರ ಗೊಗೋಯ್‌ ಡಿಸೆಂಬರ್ 2019 ರಿಂದ ಬಂಧನಕ್ಕೊಳಗಾಗಿದ್ದಾರೆ. ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಅವರನ್ನು ಪ್ರಸ್ತುತ ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (ಜಿಎಂಸಿಎಚ್) ದಾಖಲಿಸಲಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

ಗುವಾಹಟಿಯ ಚಾಂದಮರಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಎನ್‌ಐಎ ನ್ಯಾಯಾಲಯ ಅಖಿಲ್ ಗೊಗೋಯ್‌ ಅವರನ್ನು ಬಿಡುಗಡೆ ಮಾಡಿದೆ. ದಿಬ್ರುಗಢ ಜಿಲ್ಲೆಯ ಚಾಬುವಾದಲ್ಲಿ ಎನ್ಐಎ ದಾಖಲಿಸಿದ ಇತರ ಪ್ರಕರಣದಲ್ಲಿ ನ್ಯಾಯಾಲಯವು ಈ ಹಿಂದೆಯೇ ಅವರನ್ನು ಬಿಡುಗಡೆ ಮಾಡಿದೆ ಎಂದು ಗೊಗೋಯ್‌  ಪರ  ವಕೀಲ ಶಾಂತನು ಬೋರ್ತಾಕೂರ್ ಹೇಳಿದ್ದಾರೆ.

ನಿಷೇಧಿತ ಸಿಪಿಐ (ಮಾವೋವಾದಿ)ಯೊಂದಿಗಿನ ಸಂಪರ್ಕವಿದೆ ಎಂದು ಆರೋಪಿಸಿ ದೇಶದ್ರೋಹದ ಆರೋಪದ ಮೇಲೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ, ಅಖಿಲ್ ಗೊಗೋಯ್‌  ವಿರುದ್ಧ ಎನ್‌ಐಎ ಎರಡು ಪ್ರಕರಣಗಳನ್ನು ದಾಖಲಿಸಿತ್ತು. ಈ ಹಿಂದೆ ಚಾಬುವಾ ಪ್ರಕರಣದಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ.


ಇದನ್ನೂ ಓದಿ: ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...