Homeಮುಖಪುಟದಾವೂದ್ ಇಬ್ರಾಹಿಂ ಮಾಹಿತಿ ನೀಡಿದವರಿಗೆ 25 ಲಕ್ಷ ಬಹುಮಾನ ಘೋಷಿಸಿದ ಎನ್ಐಎ

ದಾವೂದ್ ಇಬ್ರಾಹಿಂ ಮಾಹಿತಿ ನೀಡಿದವರಿಗೆ 25 ಲಕ್ಷ ಬಹುಮಾನ ಘೋಷಿಸಿದ ಎನ್ಐಎ

- Advertisement -
- Advertisement -

1993 ರ ಮುಂಬೈ ಸ್ಫೋಟದ ಪ್ರಮುಖ ಆರೋಪಿ ದಾವೂದ್ ಇಬ್ರಾಹಿಂ ಕುರಿತು ನೀಡುವ ಮಾಹಿತಿಗೆ ಎನ್‌ಐಎ 25 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದೆ. ಇಷ್ಟೆ ಅಲ್ಲದೆ ದಾವೂದ್‌‌‌‌ನ  ಹೊಸ ಫೋಟೋವನ್ನು ಕೂಡ ಏಜೆನ್ಸಿ ಬಿಡುಗಡೆ ಮಾಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಾವೂದ್‌ ಮಾತ್ರವಲ್ಲದೆ, ಆತನ ಸಹಾಯಕ ಛೋಟಾ ಶಕೀಲ್‌ಗೆ 20 ಲಕ್ಷ ರೂಪಾಯಿ ಮತ್ತು ಇತರ ಸಹಚರರಾದ ಅನೀಸ್ ಇಬ್ರಾಹಿಂ, ಜಾವೇದ್ ಚಿಕ್ನಾ ಮತ್ತು ಟೈಗರ್ ಮೆಮನ್‌ಗೆ ತಲಾ 15 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದೆ. ಇವರೆಲ್ಲರೂ 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಾವೂದ್ ಇಬ್ರಾಹಿಂ ಮತ್ತು ಇತರರು ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್ ಮತ್ತು ಅಲ್ ಖೈದಾದೊಂದಿಗೆ ಸಕ್ರಿಯ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಎನ್ಐಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ!

ಶಸ್ತ್ರಾಸ್ತ್ರ ಕಳ್ಳಸಾಗಣೆ, ನಾರ್ಕೋ-ಭಯೋತ್ಪಾದನೆ, ಭೂಗತ ಪಾತಕಿ ಸಿಂಡಿಕೇಟ್ ಮತ್ತು ಮನಿ ಲಾಂಡರಿಂಗ್, ನಕಲಿ ಕರೆನ್ಸಿ ಚಲಾವಣೆ ಮತ್ತು ನಿಧಿ ಸಂಗ್ರಹಿಸಲು ಪ್ರಮುಖ ಆಸ್ತಿಗಳನ್ನು ಅನಧಿಕೃತವಾಗಿ ಹೊಂದಿರುವಂತಹ ವಿವಿಧ ಭಯೋತ್ಪಾದನೆ ಹಾಗೂ ಅಪರಾಧ ಚಟುವಟಿಕೆಗಳಲ್ಲಿ ದಾವೂದ್ ಮತ್ತು ಅವರ ಸಹಚರರು ತೊಡಗಿಸಿಕೊಂಡಿದ್ದಾರೆ ಎಂದು ಎನ್‌ಐಎ ಹೇಳಿದೆ.

ದಾವೂದ್‌‌ನನ್ನು ‘ವಿಶ್ವಸಂಸ್ಥೆ ಭದ್ರತಾ ನಿರ್ಣಯ-1267’ ರ ಅಡಿಯಲ್ಲಿ ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆಯಿಂದ ಗೊತ್ತುಪಡಿಸಲಾಗಿದೆ ಎಂದು ಎನ್‌ಐಎ ಹೇಳಿದ್ದು, “UAPA ಕಾಯಿದೆಯ ನಾಲ್ಕನೇ ವೇಳಾಪಟ್ಟಿಯ ಅಡಿಯಲ್ಲಿ ಆತನನ್ನು ಪಟ್ಟಿಮಾಡಲಾಗಿದೆ” ಎಂದು ಹೇಳಿದೆ.

ತನ್ನ ಸಹಚರರಾದ ಅನೀಸ್ ಇಬ್ರಾಹಿಂ, ಛೋಟಾ ಶಕೀಲ್, ಜಾವೇದ್ ಚಿಕ್ನಾ ಮತ್ತು ಟೈಗರ್ ಮೆಮನ್ ಸೇರಿದಂತೆ ಇತರರ ಸಹಾಯದಿಂದ ಅಂತರರಾಷ್ಟ್ರೀಯ ಭಯೋತ್ಪಾದನಾ ಜಾಲ ಡಿ ಕಂಪನಿಯನ್ನು ದಾವೂದ್ ಇಬ್ರಾಹಿಂ ನಡೆಸುತ್ತಿದ್ದಾನೆ ಎಂದು ಎನ್‌ಐಎ ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

ದಾವೂದ್ ಇಬ್ರಾಹಿಂ 1993 ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾಗಿದೆ. ಈ ದಾಳಿಯಲ್ಲಿ ಮುಂಬೈನ ವಿವಿಧ ಸ್ಥಳಗಳಲ್ಲಿ 12 ಬಾಂಬ್‌ಗಳು ಸ್ಫೋಟಗೊಂಡು, 257 ಜನರು ಸಾವನ್ನಪ್ಪಿದರು ಮತ್ತು 700 ಜನರು ಗಾಯಗೊಂಡರು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಮಿತಿಯಿಂದ ಜಾಗತಿಕ ಭಯೋತ್ಪಾದಕ ಎಂದು ಪಟ್ಟಿ ಮಾಡಲಾದ ದಾವೂದ್ ಇಬ್ರಾಹಿಂ ತಲೆಮರೆಸಿಕೊಂಡಿದ್ದು ಪಾಕಿಸ್ತಾನದಲ್ಲಿ ಅಡಗಿಕೊಂಡಿದ್ದಾನೆ ಎಂದು ನಂಬಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...