HomeಮುಖಪುಟIISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

IISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

- Advertisement -
- Advertisement -

2005 ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ನ್ಯಾಯಲಯ ಪ್ರಕರಣದ ಆರೋಪಿ ಮೊಹಮ್ಮದ್ ಹಬೀಬ್ ಅವರನ್ನು ಇಂದು ದೋಷಮುಕ್ತಗೊಳಿಸಿದೆ. ಮೊಹಮ್ಮದ್ ಹಬೀಬ್ ಅವರು UAPA ಕಾಯ್ದೆಯಡಿ ಕಳೆದ 4 ವರ್ಷಗಳಿಂದ ಜೈಲಿನಲ್ಲಿ ಬಂಧಿಯಾಗಿದ್ದರು.

2005 ರ ಡಿಸೆಂಬರ್‌ನಲ್ಲಿ ಬೆಂಗಳೂರಿನ IISC ಕ್ಯಾಂಪಸ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ವ್ಯಕ್ತಿ ಮೃತಪಟ್ಟು ಅನೇಕರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ 7 ನೇ ಆರೋಪಿಯಾಗಿ ಹಬೀಬ್ ಅವರನ್ನು 2017 ರಲ್ಲಿ ಬಂಧಿಸಲಾಗಿತ್ತು.

ಎನ್‌ಐಎ ವಿಶೇಷ ನ್ಯಾಯಾಧೀಶ ಕಾಸನಪ್ಪ ನಾಯ್ಕ್‌ ಮೊಹಮ್ಮದ್ ಹಬೀಬ್ ಅವರನ್ನು ಬಿಡುಗಡೆಗೊಳಿಸಿ ಆದೇಶ ನೀಡಿದ್ದಾರೆ. ಎನ್‌ಐಎ ಆರೋಪಿತರ ವಿರುದ್ಧದ ಆರೊಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ. NIA ಬಂಧಿತ ಆರೋಪಿ ಮೊಹಮ್ಮದ್ ಹಬೀಬ್ ಅವರ ವಿರುದ್ಧ ಯಾವುದೇ ಪ್ರಬಲ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಪ್ರಕರಣದ 7 ನೇ ಆರೋಪಿಯಾಗಿರುವ ಹಬೀಬ್ ವಿರುದ್ಧ IPC ಸೆಕ್ಷನ್ 121-A, 122, 123, 307, 302 ಇಂಡಿಯನ್ ಆರ್ಮ್ಸ್‌ ಆಕ್ಟ್‌ನ ಸೆಕ್ಷನ್‌ 25, 27 ಸೇರಿದಂತೆ ಬೇರೆ ಬೇರೆ ಕಾನೂನುಗಳಡಿ  NIA ಪ್ರಕರಣವನ್ನು ದಾಖಲಿಸಿತ್ತು.

ಆರೋಪಿಯು ತಾನು ಯಾವ ಕಾರಣಕ್ಕೆ ಬಂಧಿತನಾಗಿದ್ದೇನೆ ಎಂದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ನ್ಯಾಯಾಧೀಶರಾದ ಕಾಸನಪ್ಪ ನಾಯ್ಕ್ ಪ್ರಕರಣದ ವಿಚಾರಣೆ ವೇಳೆ ತಿಳಿಸಿದ್ದಾರೆ.

ಮೊಹಮ್ಮದ್ ಹಬೀಬ್ ಅವರನ್ನು ಎನ್‌ಐಎ ಪೊಲೀಸರು 2017 ರಲ್ಲಿ ತ್ರಿಪುರಾ ರಾಜ್ಯದ ಅಗರ್ತಲಾದಲ್ಲಿ ಬಂಧಿಸಿದ್ದರು.

ಆರೋಪಿತ ಹಬೀಬ್ ಅವರ ಪರವಾಗಿ ವಾದಿಸಿದ ನ್ಯಾಯವಾದಿ ಮೊಹಮ್ಮದ್ ತಾಹೀರ್ ಪೊಲೀಸರು ಆರೋಪಿಯ ವಿರುದ್ಧ ಚಾರ್ಜ್‌ಶೀಟ್‌ನಲ್ಲಿ ಯಾವುದೇ ಆರೋಪಗಳನ್ನು ಮಾಡಿಲ್ಲ. ಜೊತೆಗೆ ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ಪಾತ್ರವನ್ನು ಸಾಬೀತುಪಡಿಸುವ ಯಾವೊಂದು ಸಾಕ್ಷಿಗಳನ್ನು ಇದುವರೆಗೆ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ಹೇಳಿದ್ದಾರೆ.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದೀನ್ 29.03.2008 ರಲ್ಲಿ ನೀಡಿದ್ದ ಹೇಳಿಕೆಯಲ್ಲಿ ತಾನು ಮೇ 2005 ರಲ್ಲಿ ಹಬೀಬ್ ಅವರನ್ನು ತ್ರಿಪುರಾದಲ್ಲಿ ಭೇಟಿಯಾಗಿದ್ದೆ. ಹಬೀಬ್ ಸಹಾಯದಿಂದ ಭಾರತದ ಗಡಿಯನ್ನು ದಾಟಿ ಬಾಂಗ್ಲಾದೇಶಕ್ಕೆ ಹೋಗಿ ಬಂದಿದ್ದೆ. ಎಲ್ಲೂ ನನ್ನ ಉದ್ಧೇಶವನ್ನು ಹಬೀಬ್‌ಗೆ ಹೇಳಿರಲಿಲ್ಲ ಎಂದು 35 ಪುಟಗಳ ಸ್ವಯಂ ಪ್ರೇರಿತ ಹೇಳಿಕೆ ನೀಡಿದ್ದರು. ಸಬಾಹುದ್ದಿನ್ ಹೇಳಿಕೆಯ ಆಧಾರದ ಮೇಲೆ ಎನ್‌ಐಎ ಪೊಲೀಸರು ಹಬೀಬ್ ಅವರನ್ನು ಬಂಧಿಸಿದ್ದರು.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದಿನ್ ತನ್ನ ಹೇಳಿಕೆಯಲ್ಲಿ ಅನೇಕರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಆಶ್ರಯ ನೀಡಿದವರು, ದಾಳಿಗೆ ಸಹಾಯ ಮಾಡಿದವರು, ಹೀಗೆ ಅನೆಕರ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರೆ ಎನ್‌ಐಎ ಪೊಲೀಸರು ಇವರೆಲ್ಲರ ಕುರಿತು ಸ್ಪಷ್ಟ ಮಾಹಿತಿಯಿದ್ದರೂ ಅವರನ್ನೆಲ್ಲ ಪ್ರಕರಣದ ಆರೊಪಿಗಳನ್ನಾಗಿ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಿಲ್ಲ. ಸಾಕ್ಷಿಗಳನ್ನಾಗಿಯೂ ಮಾಡಿಲ್ಲ. ಅದರೆ ಹಬೀಬ್ ಅವರನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ. ಹಾಗೇ 2017 ರ ಮಾರ್ಚ್‌ 23 ರಂದು ಹಬೀಬ್ ಅವರನ್ನು ಬಂಧಿಸಿದ ಎನ್‌ಐಎ ಅವರಿಂದ ಬಲವಂತವಾಗಿ ಹೇಳಿಕೆಯನ್ನು ಪಡೆದುಕೊಂಡಿದೆ. ಅದರೆ ಆ ಹೇಳಿಕೆಗೆ ಕಾನೂನಾತ್ಮಕವಾದ ಯಾವ ಮಾನ್ಯತೆಯೂ ಇಲ್ಲ ಎಂದು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಎನ್‌ಐಎ ನ್ಯಾಯಾಲಯವು ಸುದೀರ್ಘವಾಗಿ ಪ್ರಕರಣದ ವಿಚಾರಣೆಯನ್ನು ನಡೆಸಿ ಮುಖ್ಯ ಆರೋಪಿ ಸಬಾಹುದ್ದಿನ್ ತನ್ನ ಉದ್ಧೇಶಗಳನ್ನು ಮೊಹಮ್ಮದ್ ಹಬೀಬ್ ಅವರಿಗೆ ತಿಳಿಸಿರಲಿಲ್ಲ. ಜೊತೆಗೆ ಮೊಹಮ್ಮದ್ ಹಬೀಬ್ ಅವರಿಗೆ ಐಐಎಸ್‌ಸಿ ಬೆಂಗಳೂರಿನಲ್ಲಿ ದಾಳಿ ನಡೆಯುವ ಯಾವ ಮಾಹಿತಿಯೂ ಇರಲಿಲ್ಲ. ಸಬಾಹುದ್ದಿನ್‌ಗೆ ಲಷ್ಕರ್ ಏ ತೊಯ್ಬಾ ಉಗ್ರ ಸಂಘಟನೆಯ ನಂಟು ಇರುವುದು ಮೊಹಮ್ಮದ್ ಹಬೀಬ್ ಅವರಿಗೆ ಮಾಹಿತಿಯಿರಲಿಲ್ಲ. ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ವಯಕ್ತಿಕ ಪಾತ್ರ ಸಾಬೀತಾಗಿಲ್ಲ. ಹಾಗಾಗಿ ಬೆಂಗಳೂರು IISc ದಾಳಿ ಪ್ರಕರಣದ ಆರೊಪದಿಂದ ಮೊಹಮ್ಮದ್ ಹಬೀಬ್ ಅವರನ್ನು ದೋಷಮುಕ್ತಗೊಳಿಸಲಾಗಿದೆ ಎಂದು NIA ಕೋರ್ಟ್ ಹೇಳಿದೆ.


ಇದನ್ನೂ ಓದಿ : ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...