Homeಮುಖಪುಟಪಶ್ಚಿಮ ಬಂಗಾಳದಲ್ಲಿ ಎನ್‌ಐಎ ತಂಡದ ಮೇಲೆ ದಾಳಿ

ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ತಂಡದ ಮೇಲೆ ದಾಳಿ

- Advertisement -
- Advertisement -

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ಭೂಪತಿನಗರದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡದ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ತೃಣಮೂಲ ಕಾಂಗ್ರೆಸ್ ಮುಖಂಡರೊಬ್ಬರ ಮನೆಯಲ್ಲಿ 2022ರ ಸ್ಫೋಟ ಪ್ರಕರಣದ ತನಿಖೆಗಾಗಿ ತೆರಳಿದ್ದ ಎನ್‌ಐಎ ಅಧಿಕಾರಿಗಳ ಕಾರಿನ ಮೇಲೆ ಇಟ್ಟಿಗೆಗಳನ್ನು, ಕಲ್ಲುಗಳನ್ನು ಎಸೆಯಲಾಗಿದೆ. ಈ ವೇಳೆ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರಿನ ವಿಂಡ್‌ಸ್ಕ್ರೀನ್‌ಗೆ ಹಾನಿಯುಂಟಾಗಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗಳಾಗಿರುವ ಬಗ್ಗೆ ಈವೆರೆಗೆ ಮಾಹಿತಿ ಲಭ್ಯವಾಗಿಲ್ಲ. ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಡಿಸೆಂಬರ್ 3, 2022ರಂದು, ಭೂಪತಿನಗರದಲ್ಲಿ ಹುಲ್ಲಿನ ಮೇಲ್ಛಾವಣಿಯ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದರು. ಕಳೆದ ತಿಂಗಳು ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ 8 ತೃಣಮೂಲ ಕಾಂಗ್ರೆಸ್ ನಾಯಕರನ್ನು ವಿಚಾರಣೆಗೆ ಕರೆಸಿತ್ತು.

ಎನ್‌ಐಎ ಕ್ರಮವನ್ನು ಬಿಜೆಪಿ ಪಿತೂರಿ ಎಂದು ಟಿಎಂಸಿ ಆರೋಪಿಸಿದೆ. ಮಾರ್ಚ್ 28ರಂದು ನ್ಯೂ ಟೌನ್‌ನಲ್ಲಿರುವ ಎನ್‌ಐಎ ಕಚೇರಿಗೆ ಭೇಟಿ ನೀಡುವಂತೆ ಸೂಚಿಸಿದ ಹಿಂದಿನ ಸಮನ್ಸ್‌ಗಳನ್ನು ತಪ್ಪಿಸಿದ ನಂತರ ಕೇಂದ್ರ ತನಿಖಾ ಸಂಸ್ಥೆ ಎಂಟು ಮಂದಿಯನ್ನು ತನ್ನ ಅಧಿಕಾರಿಗಳ ಮುಂದೆ ಹಾಜರಾಗುವಂತೆ ಕೇಳಿಕೊಂಡಿತ್ತು. ಈ ಕ್ರಮದ ಹಿಂದೆ ಪ್ರತಿಪಕ್ಷ ಭಾರತೀಯ ಜನತಾ ಪಕ್ಷದ ಕೈವಾಡವಿದೆ ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಆರೋಪಿಸಿದ್ದಾರೆ. ಬಿಜೆಪಿಯು, ಪುರ್ಬಾ ಮೇದಿನಿಪುರ ಜಿಲ್ಲೆಯ ಟಿಎಂಸಿ ನಾಯಕರ ಪಟ್ಟಿಯನ್ನು ಎನ್‌ಐಎಗೆ ಒದಗಿಸಿದ್ದು, ಅವರನ್ನು ಬಂಧಿಸಲು ತಂತ್ರ ರೂಪಿಸಿದೆ ಎಂದು ಘೋಷ್ ಹೇಳಿದ್ದಾರೆ.

ಇತ್ತೀಚೆಗೆ ಪ್ರಸ್ತುತ ಬಂಧನದಲ್ಲಿರುವ ಪ.ಬಂಗಾಳ ರಾಜ್ಯದ ಆಹಾರ ಸಚಿವ ಜ್ಯೋತಿ ಪ್ರಿಯಾ ಮಲ್ಲಿಕ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಷಹಜಹಾನ್ ಶೇಖ್ ಅವರ ಮನೆ ಮೇಲೆ ದಾಳಿ ನಡೆಸಲು  ಹೋದಾಗ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡದ ಮೇಲೆ ಜನರ ಗುಂಪು ದಾಳಿ ನಡೆಸಿತ್ತು. ಇದಾದ  ಎರಡು ತಿಂಗಳ ಬಳಿಕ ಎನ್‌ಐಎ ಅಧಿಕಾರಿಗಳ ತಂಡದ ಮೇಲೆ ದಾಳಿ ನಡೆದಿದೆ. ‘ಇಡಿ’ ತಂಡದ ಜೊತೆಗಿದ್ದ ಕೇಂದ್ರ ಪಡೆ ಸಿಬ್ಬಂದಿ ಮೇಲೂ ದಾಳಿ ನಡೆಸಲಾಗಿತ್ತು, ಮೂವರು ‘ಇಡಿ’ ಅಧಿಕಾರಿಗಳು ಆಸ್ಪತ್ರೆಗೆ ದಾಖಲಾಗಿದ್ದರು. ‘ಇಡಿ’ ತಂಡದೊಂದಿಗೆ ಬಂದಿದ್ದ ಸಿಆರ್‌ಪಿಎಫ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಲು ಜನ ಸಮೂಹದ ಮೇಲೆ ಲಾಠಿ ಚಾರ್ಜ್‌ ನಡೆಸಿದ್ದರು.

ಇದನ್ನು ಓದಿ: ಚಂಡೀಗಢ: ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿದ್ದ ಚುನಾವಣಾಧಿಕಾರಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...