Homeಕರ್ನಾಟಕರಾತ್ರಿ ಕರ್ಫ್ಯೂ ವಾಪಸ್, ಸೊಮುವಾರದಿಂದ ಶಾಲೆ - ಕಾಲೇಜು ಆರಂಭ

ರಾತ್ರಿ ಕರ್ಫ್ಯೂ ವಾಪಸ್, ಸೊಮುವಾರದಿಂದ ಶಾಲೆ – ಕಾಲೇಜು ಆರಂಭ

- Advertisement -
- Advertisement -

ರಾಜ್ಯದಲ್ಲಿ ಕೊರೋನಾ ಮತ್ತು ಓಮಿಕ್ರಾನ್ ರೂಪಾಂತರಿ ಸೋಂಕು ತಡೆಗಟ್ಟುವ ನಿಟ್ಟನಲ್ಲಿ ರಾಜ್ಯಾದ್ಯಂತ ವಿಧಿಸಿದ್ದ ರಾತ್ರಿ ಕರ್ಫ್ಯೂವನ್ನು ವಾಪಸ್ ಪಡೆದಿದ್ದು, ಸೊಮುವಾರದಿಂದ ಶಾಲೆ – ಕಾಲೇಜು ಆರಂಭವಾಗಲಿವೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಕೋವಿಡ್- 19ಗೆ ಸಂಬಂಧಿಸಿದಂತೆ ಪರಿಶೀಲನಾ ಸಭೆ ನಡೆದಿದ್ದು ಜನವರಿ 31 ರಿಂದ ರಾತ್ರಿ ಕರ್ಫೂ ಅನ್ನು ಹಿಂತೆಗೆದುಕೊಳ್ಳುವುದಾಗಿ ಸರ್ಕಾರ ನಿರ್ಧರಿಸಿದೆ.

ತಜ್ಞರ ಸಭೆಯ ನಂತರ ಕಂದಾಯ ಸಚಿವ ಆರ್. ಅಶೋಕ್ ಮಾತನಾಡಿ, “ಜ.31ರಿಂದ ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಹಿಂತೆಗೆದುಕೊಳ್ಳಲಾಗುವುದು. ರೆಸ್ಟೋರಂಟ್, ಹೋಟೆಲ್‌ಗಳಲ್ಲಿ 50% ನಿಯಮ ತೆಗೆದುಹಾಕಲಾಗುವುದು. ಸಿನಿಮಾ ಮಂದಿರ, ಈಜುಕೊಳ, ಜಿಮ್‌ಗಳಲ್ಲಿ ಶೇ.50ರಷ್ಟು ಮಾತ್ರ ಭರ್ತಿಗೆ ಅವಕಾಶ ನೀಡಲಾಗಿದೆ. ಮಹಾರಾಷ್ಟ್ರ, ಗೋವಾ, ಕೇರಳದಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯ ನೆಗೆಟಿವ್ ವರದಿ ಇರಬೇಕು ಎಂದು ತಿಳಿಸಿದರು.

ಮದುವೆಗಳಿಗೆ ಒಳಾಂಗಣದಲ್ಲಿ 200 ಜನರಿಗೆ, ಹೊರಾಂಗಣದಲ್ಲಿ 300 ಜನರಿಗೆ ಅವಕಾಶ ನೀಡಲಾಗಿದೆ. ಮಂದಿರ, ಮಸೀದಿ, ಚರ್ಚ್‌ ಸೇರಿದಂತೆ ಧಾರ್ಮಿಕ ಕೇಂದ್ರಗಳಲ್ಲಿ ಸೇವೆ ಪುನಾರಂಭ ಮಾಡಬಹುದು. ಆದರೆ ಧಾರ್ಮಿಕ ಸ್ಥಳಗಳಲ್ಲಿ 50 ಜನ ಮಾತ್ರ ಒಂದೇ ಬಾರಿ ದರ್ಶನ ಪಡೆಯಬಹುದು. ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ ಹೇರಲಾಗಿದೆ ಎಂದು ಸಚಿವ ಆರ್. ಅಶೋಕ್ ಮಾಹಿತಿ ಹಂಚಿಕೊಂಡರು.

ಬೆಂಗಳೂರಿನಲ್ಲಿ ಶಾಲೆ-ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್

ಕಳೆದ ಕೆಲವು ವಾರಗಳ ಹಿಂದೆ ಕೊರೊನಾ ಸೋಂಕು ಪ್ರಕರಣಗಳ ಹೆಚ್ಚಳದಿಂದ ಬೆಂಗಳೂರಿನಲ್ಲಿ ಶಾಲೆ- ಕಾಲೇಜು ತರಗತಿಗಳನ್ನು ಬಂದ್ ಮಾಡಲಾಗಿತ್ತು. ಈಗ ಆರಂಭಕ್ಕೆ ತಜ್ಞರು ಮತ್ತು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದು, ಸೋಮವಾರದಿಂದ ಎಲ್ಲಾ ತರಗತಿಗಳು ಪ್ರಾರಂಭವಾಗಲಿವೆ. ಆದರೆ ಕೋವಿಡ್ ನಿಯಮಾವಳಿ ಪಾಲಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ರಾಜ್ಯದ ಇತರೆ ಶಾಲೆಗಳಿಗೆ ಇರುವ ಮಾರ್ಗಸೂಚಿಗಳು ಬೆಂಗಳೂರಿನ ಶಾಲೆಗಳಿಗೂ ಅನ್ವಯಿಸುತ್ತವೆ. ಯಾವುದಾದರೂ ವಿದ್ಯಾರ್ಥಿಗೆ ಪಾಸಿಟಿವ್ ಬಂದರೆ ಆ ತರಗತಿ ಮಾತ್ರ ಮುಚ್ಚುತ್ತದೆ. ತರಗತಿಯ ಎಲ್ಲಾ ಮಕ್ಕಳಿಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ಆ ತರಗತಿ ಎಷ್ಟು ದಿನ ಮುಚ್ಚಬೇಕು ಎಂದು ಸಂಬಂಧಿಸಿದ ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಉಳಿದಂತೆ ಶಾಲೆ ತೆರೆದಿರುತ್ತದೆ ಎಂದು ಅವರು ಮಾಹಿತಿ ನೀಡಿದರು.

ಪ್ರವಾಸಕ್ಕೆ ನಿರ್ಬಂಧವಿಲ್ಲ

ಪ್ರವಾಸಿತಾಣಗಳ ಭೇಟಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ಕೋವಿಡ್ ನಿಯಮ ಪಾಲಿಸಿ ಪ್ರವಾಸಿಗರು ಭೇಟಿ ನೀಡಬಹುದು. ರಾಜ್ಯದ ಪ್ರವಾಸಿ ತಾಣಗಳು ಪ್ರವಾಸಿಗರಿಗೆ ಮುಕ್ತವಾಗಿರಲಿವೆ. ಸಫಾರಿ ಸೇರಿದಂತೆ ಎಲ್ಲಾ ಚಟುವಟಿಕೆಗೆ ಅವಕಾಶ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಜಿಲ್ಲಾಧಿಕಾರಿ ಏಕೆ ಮೇಕಪ್‌ ಮಾಡಿಲ್ಲ?’- ಮನಕಲಕುವ ಕತೆ ಹಿಂದಿನ ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...