Homeಕರೋನಾ ತಲ್ಲಣಇಂದಿನಿಂದ ರಾಜ್ಯದಲ್ಲಿ ’ರಾತ್ರಿ ಕರ್ಫ್ಯೂ’ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ

ಇಂದಿನಿಂದ ರಾಜ್ಯದಲ್ಲಿ ’ರಾತ್ರಿ ಕರ್ಫ್ಯೂ’ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ

- Advertisement -
- Advertisement -

ಕೊರೊನಾದ ಹೊಸ ರೂಪದ ವೈರಸ್ ಹರಡುತ್ತಿರುವ ಕಾರಣ ರಾಜ್ಯದಲ್ಲಿ ಬುಧವಾರದಿಂದ ಜನವರಿ 2 ರವರೆಗೆ ’ರಾತ್ರಿ ಕರ್ಫ್ಯೂ’ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಕೊರೊನಾ ನಿಯಂತ್ರಣ ಕಾರ್ಯಪಡೆ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಮುಖ್ಯಮಂತ್ರಿ, “ಈ ಆದೇಶವು ಇಡೀ ರಾಜ್ಯಕ್ಕೆ ಅನ್ವಯವಾಗಲಿದ್ದು, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬುಧವಾರ ರಾತ್ರಿಯಿಂದಲೇ ಈ ಕ್ರಮ ಜಾರಿಗೆ ಬರಲಿದೆ” ಎಂದು ತಿಳಿಸಿದ್ದಾರೆ.

ವಿದೇಶಗಳಿಂದ ರಾಜ್ಯಕ್ಕೆ ಬರುವವರು ಆರ್‌ಟಿ-ಪಿಸಿಆರ್ ವಿಧಾನದಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡು, ನೆಗೆಟಿವ್ ವರದಿ ಹೊಂದಿರಬೇಕು. ಹೊರಗೆ ಓಡಾಡುವಾಗ 72 ಗಂಟೆಗಳ ಅವಧಿಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದಿದ್ದಾರೆ.

ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಲಂಡನ್‌ನಿಂದ ಬಂದಿದ್ದ 6 ಮಂದಿಗೆ ಕೊರೊನಾ ಸೋಂಕು

ಡಿಸೆಂಬರ್‌ 21 ರಂದು ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿದ್ದು, ಇಡೀ ವಿಶ್ವದಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿದೆ. ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಭಾರತದ ವಿಮಾನಯಾನ ಸಚಿವಾಲಯ ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31 ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಆದೇಶಿಸಿತ್ತು.

ಕಳೆದ ಸೆಪ್ಟೆಂಬರ್‌ನಲ್ಲಿ ಇಂಗ್ಲೆಂಡ್‌ನ ವಿಜ್ಞಾನಿಗಳು ರೋಗಿಯೊಬ್ಬರಲ್ಲಿ ಹೊಸ ರೂಪದ ಕೊರೊನಾ ವೈರಸ್ ಅನ್ನು ಕಂಡು ಹಿಡಿದಿದ್ದರು. ಬ್ರಿಟನ್‌ನಲ್ಲಿ ನವೆಂಬರ್‌ ತಿಂಗಳಲ್ಲಿ ಹೆಚ್ಚಾದ ಕೊರೊನಾ ಪ್ರಕರಣಗಳಲ್ಲಿ ಈ ವೈರಸ್ ಹೆಚ್ಚಾಗಿದ್ದರಿಂದ ಡಿಸೆಂಬರ್ 11 ರಂದು ಸರ್ಕಾರಕ್ಕೆ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಯುಕೆಯಿಂದ ಬಂದ ಪ್ರಯಾಣಿಕರಿಗಾಗಿಯೇ ಈ ಹೊಸ ಎಸ್‌ಒಪಿ ಮಾರ್ಗಸೂಚಿ ಸಿದ್ಧಪಡಿಸಿದ್ದು, ರಾಜ್ಯ ಸಕಾರಗಳಿಗೆ ನಿಗಾ ವಹಿಸುವಂತೆ ಸೂಚನೆ ನೀಡಿದೆ. ಆರೋಗ್ಯ ಸಚಿವಾಲಯವು ತನ್ನ ಎಸ್‌ಒಪಿಗಳಲ್ಲಿ 2020 ರ ನವೆಂಬರ್ 25 ರಿಂದ ಡಿಸೆಂಬರ್ 8 ರ ನಡುವೆ ಬ್ರಿಟನ್‌ನಿಂದ ಭಾರತಕ್ಕೆ ಆಗಮಿಸಿದ ಪ್ರಯಾಣಿಕರ ಮೇಲೆ ರಾಜ್ಯ ಸರ್ಕಾರ ನಿಗಾ ಇಟ್ಟು ಟೆಸ್ಟ್ ಮಾಡಿಸಲು ತಿಳಿಸಲಾಗಿದೆ. ಯುಕೆಯಿಂದ ಬಂದಿಳಿದಿರುವ ಪ್ರಯಾಣಿಕರನ್ನ ಆರ್​ಟಿಪಿಸಿಆರ್ ಟೆಸ್ಟ್​ಗೆ ಒಳಪಡಿಸುವುದು ಸೇರಿದಂತೆ ಹಲವು ನಿಯಮಗಳನ್ನು ಪರಿಚಯಿಸಿದೆ.

ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...