Homeಕರೋನಾ ತಲ್ಲಣರಾತ್ರಿ ಕರ್ಫ್ಯೂ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ರಾತ್ರಿ ಕರ್ಫ್ಯೂ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬಿಬಿಎಂಪಿ ಕೂಡಾ ಕ್ರಿಸ್ಮಸ್‌ ಹಾಗೂ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ

- Advertisement -
- Advertisement -

ರೂಪಾಂತರಿ ಕೊರೊನಾ ವೈರಸ್‌ ಕಂಡು ಬಂದಿರುವ ಹಿನ್ನಲೆಯಲ್ಲಿ ಗುರುವಾರ ರಾತ್ರಿಯಿಂದ ಜನವರಿ 2 ರ ಮುಂಜಾನೆಯವರೆಗೆ ’ರಾತ್ರಿ ಕರ್ಫ್ಯೂ’ವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿತ್ತು. ಇದೀಗ ಈ ರಾತ್ರಿ ಕರ್ಫ್ಯೂವಿನ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.

ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕಟ್ಟುನಿಟ್ಟಾಗಿ ಕರ್ಫ್ಯೂ ಜಾರಿಯಾಗಲಿದೆ. ದೀರ್ಘ ಪ್ರಯಾಣದ, ಬಸ್, ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಸರಕು ವಾಹನಗಳ ಸಂಚಾರಕ್ಕೆ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ. 50% ರಷ್ಟು ಮಾನವ ಶಕ್ತಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ರೀತಿಯ ಕೈಗಾರಿಕಾ ಸಂಸ್ಥೆಗಳಿಗೂ ರಾಜ್ಯ ಸರ್ಕಾರ ಸಡಿಲಿಕೆ ನೀಡಿದೆ. ಆದರೆ ಇದಕ್ಕೆ ಆ ಸಂಸ್ಥೆಯ ಗುರುತಿನ ಚೀಯನ್ನು ಇಟ್ಟುಕೊಳ್ಳುವುದು ಅವಶ್ಯಕವಾಗಿದೆ.

ಇದನ್ನೂ ಓದಿ: ರೂಪಾಂತರಿ ಕೊರೊನಾ ವೈರಸ್ ಭೀತಿ: ರಾತ್ರಿ ಕರ್ಫ್ಯೂ ದಿನಾಂಕ ಬದಲಿಸಿದ ಮುಖ್ಯಮಂತ್ರಿ!

ರಾತ್ರಿ 11 ರಿಂದ ಬೆಳಗ್ಗೆ 5 ರವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಜನರ ಪ್ರಯಾಣಕ್ಕೆ ನಿಷೇಧ ಹೇರಲಾಗಿದೆ. ದಿನದ 24 ಗಂಟೆ ಕರ್ತವ್ಯ ನಿರ್ವಹಿಸುತ್ತಿರುವ ಕೈಗಾರಿಕೆಗಳು, ಕಾರ್ಖಾನೆಗಳಿಗೆ ಯಾವುದೇ ರೀತಿಯ ನಿರ್ಬಂಧವಿಲ್ಲದೆ ನಿರಂತರ ಕಾರ್ಯಾಚರಣೆ ನಡೆಸಲು ಅನುಮತಿಯಿದೆ.

ಅಲ್ಲದೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಂದ ಪ್ರಯಾಣಿಕರನ್ನು ಕರೆತರಲು ಹಾಗೂ ಕರೆದೊಯ್ಯುವ ಟ್ಯಾಕ್ಸಿ ಹಾಗೂ ಆಟೋಗಳಿಗೆ ಅನುಮತಿಯಿದೆ. ಆದರೆ ಈ ವೇಳೆ ಪ್ರಯಾಣದ ಟಿಕೆಟ್​​ಅನ್ನು ಪ್ರಯಾಣಿಕರು ಹೊಂದಿರುವುದು ಕಡ್ಡಾಯವಾಗಿರುತ್ತದೆ.

ಕ್ರಿಸ್ಮಸ್ ಆಚರಣೆಗೆ ಅವಕಾಶ ನೀಡಲಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಬಹುದು ಎಂದು ಮುಖ್ಯಮಂತ್ರಿ ಸಂಜೆ ಟ್ವೀಟ್ ಮಾಡಿ ತಿಳಿಸಿದ್ದರು.

ಇದನ್ನೂ ಓದಿ: ಇಂದಿನಿಂದ ರಾಜ್ಯದಲ್ಲಿ ’ರಾತ್ರಿ ಕರ್ಫ್ಯೂ’ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ

ಕ್ರಿಸ್ಮಸ್‌ ಹಾಗೂ ಹೊಸ ವರ್ಷಾಚರಣೆಗೆ ಬಿಬಿಎಂಪಿ ಮಾರ್ಗಸೂಚಿ

ಚರ್ಚ್‌, ದೇವಸ್ಥಾನ, ಮಸೀದಿ ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು, ಹಸ್ತಲಾಘವ ಮತ್ತು ಆಲಿಂಗನದಿಂದ ದೂರವಿರಬೇಕು ಎಂದು ಬಿಬಿಎಂಪಿ ತನ್ನ ಮಾರ್ಗಸೂಚಿಯಲ್ಲಿ ಹೇಳಿದೆ.

ಡಿಸೆಂಬರ್‌ 30 ರಿಂದ 2021ರ ಜನವರಿ 2 ರವರೆಗೆ ಕ್ಲಬ್‌, ಪಬ್, ರೆಸ್ಟೋರೆಂಟ್‌ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುವಿಕೆ, ವಿಶೇಷ ಡಿಜೆ, ನೃತ್ಯ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿಗಳನ್ನು ನಿಷೇಧಿಸಲಾಗಿದೆ. ಆದರೆ, ಕ್ಲಬ್‌, ಪಬ್‌, ರೆಸ್ಟೋರೆಂಟ್‌ಗಳು ಎಂದಿನಂತೆ ತೆರೆದಿರಲಿದೆ ಎಂದು ಬಿಬಿಎಂಪಿ ಆದೇಶದಲ್ಲಿ ತಿಳಿಸಿದೆ.

ಈ ಸಮಯದಲ್ಲಿ 65 ವರ್ಷದ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಿದ್ದು, ಹೋಟೆಲ್‌, ಮಾಲ್‌, ಪಬ್‌, ರೆಸ್ಟೋರೆಂಟ್‌ಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಮತ್ತು ಸ್ಯಾನಿಟೈಸರ್‌ ಬಳಕೆ ಕಡ್ಡಾಯ ಎಂದು ಹೇಳಿದೆ. ಅಲ್ಲದೆ ಆನ್‌ಲೈನ್‌ ಅಥವಾ ಟೋಕನ್‌ ಪದ್ಧತಿಯಲ್ಲಿ ಸ್ಥಳ ಕಾಯ್ದಿರಿಸಲು ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಲಂಡನ್‌ನಿಂದ ಬಂದಿದ್ದ 6 ಮಂದಿಗೆ ಕೊರೊನಾ ಸೋಂಕು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಮರುಮೌಲ್ಯಮಾಪನ ಮಾಡಿದಾಗ ಶೂನ್ಯಕ್ಕಿಳಿದ ಅಂಕ

0
ಪರೀಕ್ಷೆಗಳಿಗೆ ಬರೆದಿರುವ ಉತ್ತರಗಳ ಗುಣಮಟ್ಟದ ಆಧಾರದಲ್ಲಿ ಅಂಕಗಳನ್ನು ನೀಡಲಾಗುತ್ತದೆ. ಆದರೆ ಉತ್ತರಪ್ರದೇಶದ  ಜೌನ್‌ಪುರದಲ್ಲಿರುವ ವೀರ್‌ ಬಹದ್ದೂರ್‌ ಸಿಂಗ್‌ ಪೂರ್ವಾಂಚಲ ವಿಶ್ವವಿದ್ಯಾಲಯದಲ್ಲಿನ ಪರೀಕ್ಷೆಯಲ್ಲಿನ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಮತ್ತು ಕ್ರಿಕೆಟ್‌ ಆಟಗಾರರ ಹೆಸರುಗಳನ್ನು...