Homeಚಳವಳಿದಲಿತ ವರನ ಕುದುರೆ ಸವಾರಿಗೆ ಅಡ್ಡಿಪಡಿಸಿದ್ದ 9 ಜನರಿಗೆ 5 ವರ್ಷ ಜೈಲು

ದಲಿತ ವರನ ಕುದುರೆ ಸವಾರಿಗೆ ಅಡ್ಡಿಪಡಿಸಿದ್ದ 9 ಜನರಿಗೆ 5 ವರ್ಷ ಜೈಲು

- Advertisement -
- Advertisement -

ದಲಿತ ಯುವಕನೊಬ್ಬ ತನ್ನ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರ ಮಾಡುವುದಕ್ಕೆ ಅಡ್ಡಿಪಡಿಸಿದ್ದ 9 ಜನರಿಗೆ ಐದು ವರ್ಷಗಳ ಜೈಲು ಶಿಕ್ಷೆ ನೀಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. 2018 ರ ಜೂನ್‌ನಲ್ಲಿ ಪಾರ್ಸಾ ಗ್ರಾಮದಲ್ಲಿ ನಡೆದಿದ್ದ ಈ ಘಟನೆಗೆ ಸಂಬಂಧಿಸಿ ಗಾಂಧಿನಗರದ ಸೆಷನ್ಸ್ ನ್ಯಾಯಾಲಯವು  ತೀರ್ಪು ನೀಡಿದೆ.

ನ್ಯಾಯಾಲಯವು ನಟ್ವರ್‌ಸಿನ್ಹಾ ಪರ್ಮಾರ್, ಕುಲ್‌ದೀಪ್‌ದಸಿಂಗ್ ಚೌಹಾಣ್, ಅನಿರುದ್ಧ್‌ಸಿನ್ಹಾ ರಾಥೋಡ್, ದೇವೇಂದ್ರಸಿನ್ಹಾ ಚಾವ್ಡಾ, ವಿಜಯಸಿನ್ಹಾ ಚೌಹಾಣ್, ವಿಪುಲ್ ಚೌಹಾಣ್, ಜಿಗರ್ಸಿಂಗ್ ಚೌಹಾಣ್, ನರೇಶ್ ಚೌಹಾಣ್ ಮತ್ತು ವೀರೇಂದ್ರಸಿನ್ಹಾ ಚೌಹಾಣ್ ಅವರಿಗೆ ಐದು ವರ್ಷಗಳ ಶಿಕ್ಷೆ ವಿಧಿಸಿದೆ.

ಘಟನೆ ಏನು…?

ಜೂನ್ 17, 2018 ರಂದು, ಪಾರ್ಸಾ ಗ್ರಾಮದ ಕ್ಷತ್ರಿಯ ಸಮುದಾಯದ ಯುವಕ ಗುಂಪೊಂದು, ದಲಿತ ಸಮುದಾಯದ ಪ್ರಶಾಂತ್ ಸೋಲಂಕಿ ಅವರು ತಮ್ಮ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವುದಕ್ಕೆ ಅಡ್ಡಿ ಪಡಿಸಿತ್ತು. ದಲಿತ ವರ ಸೋಲಂಕಿ ಕುದುರೆ ಸವಾರಿ ಮಾಡುವಂತಿಲ್ಲ. ಏಕೆಂದರೆ, ಕುದುರೆ ಸವಾರಿಯನ್ನು ಕೇವಲ ನಮ್ಮಂತಹ “ಧೈರ್ಯಶಾಲಿ ಜಾತಿಯವರು” ಮಾತ್ರ ಮಾಡಬೇಕು ಎಂದು ಯುವಕರು ಆಕ್ಷೇಪಿಸಿದ್ದರು.

ಇದನ್ನೂ ಓದಿ: ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಈ ಯುವಕರ ಗುಂಪಿನ ಬೆದರಿಕೆ ಬಳಿಕ ವರನ ಕುಟುಂಬವು ಪೊಲೀಸರಿಗೆ ಮಾಹಿತಿ ನೀಡಿತ್ತು. ಪೊಲೀಸರು ಗ್ರಾಮಕ್ಕೆ ಧಾವಿಸಿ ಪೊಲೀಸ್ ರಕ್ಷಣೆಯಲ್ಲಿ ಮೆರವಣಿಗೆ ನಡೆಸಲಾಗಿತ್ತು. ಒಂಬತ್ತು ಆರೋಪಿಗಳನ್ನು ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು.

ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ಪ್ರತಿಯೊಬ್ಬರಿಗೂ 10,000 ರೂಪಾಯಿಗಳ ದಂಡ ವಿಧಿಸಿದೆ.

ಮೇ 2019 ರಲ್ಲಿಯೂ ಕೂಡ, ಅರಾವಳ್ಳಿ ಜಿಲ್ಲೆಯ ಖಂಭಿಸರ್ ಗ್ರಾಮದಲ್ಲಿ, ದಲಿತ ವರನ ಕುದುರೆ ಸವಾರಿಯ ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆದಿತ್ತು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು.

ರಾಜ್ಯದಲ್ಲಿಯೂ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ, ಬರಗೂರ ದಾನಪ್ಪ ಮತ್ತು ಕಕ್ಕರಗೋಳ ರಾಘವೇಂದ್ರರ ಕೊಲೆ ಪ್ರಕರಣ ಸೇರಿ ಕನಕಗಿರಿ ವಿಧಾನಸಭಾ ವ್ಯಾಪ್ತಿಯಲ್ಲಿ ನಡೆದ ಎಲ್ಲಾ ಕೊಲೆ ಪ್ರಕರಣಗಳ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ  ಇಂದು (ಜುಲೈ 19) ದಲಿತ ದಮನಿತರ ಒಕ್ಕೂಟ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕೊಪ್ಪಳ ಚಲೋ ಬೃಹತ್ ಪ್ರತಿಭಟನೆ ನಡೆಯುತ್ತಿದೆ.


ಇದನ್ನೂ ಓದಿ: ಹರಿಯಾಣ: ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...