ದುರದೃಷ್ಟಕರ ಘಟನೆಯಲ್ಲಿ, ಪಶ್ಚಿಮ ಸೌದಿ ಅರೇಬಿಯಾದ ಜಿಜಾನ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂಬತ್ತು ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ಜೆಡ್ಡಾದ ಭಾರತೀಯ ಮಿಷನ್ ಬುಧವಾರ ತಿಳಿಸಿದೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ಕಾನ್ಸುಲೇಟ್, “ಸೌದಿ ಅರೇಬಿಯಾ ಸಾಮ್ರಾಜ್ಯದ ಪಶ್ಚಿಮ ಪ್ರದೇಶದ ಜಿಜಾನ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 9 ಭಾರತೀಯ ಪ್ರಜೆಗಳ ದುರಂತ ನಷ್ಟಕ್ಕೆ ನಾವು ತೀವ್ರ ದುಃಖಿತರಾಗಿದ್ದೇವೆ” ಎಂದು ಹೇಳಿದೆ.
ಜೆಡ್ಡಾದ ಭಾರತೀಯ ಕಾನ್ಸುಲೇಟ್ ಜನರಲ್ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ, ಅಧಿಕಾರಿಗಳು ಮತ್ತು ಕುಟುಂಬಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಮಿಷನ್ ತಿಳಿಸಿದೆ. ಅಪಘಾತದಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ.
“ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ. ಹೆಚ್ಚಿನ ಪ್ರಶ್ನೆಗಳಿಗೆ ಮೀಸಲಾದ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ” ಎಂದು ಭಾರತೀಯ ಕಾನ್ಸುಲೇಟ್ ಹೇಳಿದೆ.
ಪೋಸ್ಟ್‌ಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವ ಎಸ್ ಜೈಶಂಕರ್, ಅಪಘಾತ ಮತ್ತು ಜೀವಹಾನಿಯ ಬಗ್ಗೆ ತಿಳಿದು ದುಃಖಿತನಾಗಿದ್ದನೆ ಎಂದು ಹೇಳಿದರು. “ಜೆಡ್ಡಾದ ನಮ್ಮ ಕಾನ್ಸುಲ್ ಜನರಲ್ ಜೊತೆ ಮಾತನಾಡಿದ್ದೇನೆ, ಅವರು ಸಂಬಂಧಪಟ್ಟ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಈ ದುರಂತ ಪರಿಸ್ಥಿತಿಯಲ್ಲಿ ಅವರು ಸಂಪೂರ್ಣ ಬೆಂಬಲವನ್ನು ನೀಡುತ್ತಿದ್ದಾರೆ” ಎಂದು ಜೈಶಂಕರ್ ಕಾನ್ಸುಲೇಟ್ ಪೋಸ್ಟ್ ಅನ್ನು ಉಲ್ಲೇಖಿಸಿ ಹೇಳಿದರು.
ಇದನ್ನೂ ಓದಿ; ಕುಂಭ ಮೇಳದಲ್ಲಿ ಕಾಲ್ತುಳಿತ | ಕನಿಷ್ಠ 15 ಜನರು ಸಾವು ; ವರದಿ


