Homeಮುಖಪುಟಸರಿಯಾದ ಸಮಯಕ್ಕೆ ಬಂಧಿಸದ ಕಾರಣ ನೀರವ್ ಮೋದಿ, ಮಲ್ಯ, ಮೆಹುಲ್ ಚೋಕ್ಸಿ ಭಾರತದಿಂದ ಪಲಾಯನ...

ಸರಿಯಾದ ಸಮಯಕ್ಕೆ ಬಂಧಿಸದ ಕಾರಣ ನೀರವ್ ಮೋದಿ, ಮಲ್ಯ, ಮೆಹುಲ್ ಚೋಕ್ಸಿ ಭಾರತದಿಂದ ಪಲಾಯನ ಮಾಡಿದ್ರು: ಮುಂಬೈ ಕೋರ್ಟ್

- Advertisement -
- Advertisement -

ಉದ್ಯಮಿಗಳಾದ ನೀರವ್ ಮೋದಿ, ವಿಜಯ್ ಮಲ್ಯ ಮತ್ತು ಮೆಹುಲ್ ಚೋಕ್ಸಿ ಅವರನ್ನು ಸಮಯಕ್ಕೆ ಸರಿಯಾಗಿ ಬಂಧಿಸುವಲ್ಲಿ ತನಿಖಾ ಸಂಸ್ಥೆಗಳು ವಿಫಲವಾದ ಕಾರಣ ದೇಶದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಯಿತು ಎಂದು ಮುಂಬೈ ನ್ಯಾಯಾಲಯವು  ಹೇಳಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಯಡಿಯಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ, ವೃತ್ತಿಪರ ಉದ್ದೇಶಗಳಿಗಾಗಿ ವಿದೇಶಕ್ಕೆ ಪ್ರಯಾಣಿಸಲು ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಮನಿ ಲಾಂಡರಿಂಗ್ ಪ್ರಕರಣದ ಆರೋಪಿ ವ್ಯೋಮೇಶ್ ಶಾ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಅವಲೋಕನಗಳನ್ನು ಮಾಡಿದ್ದಾರೆ.

ಜಾರಿ ನಿರ್ದೇಶನಾಲಯದ(ಇಡಿ) ವಿಶೇಷ ಪ್ರಾಸಿಕ್ಯೂಟರ್, ವಕೀಲ ಸುನಿಲ್ ಗೊನ್ಸಾಲ್ವಿಸ್ ಅವರು ಅರ್ಜಿಯನ್ನು ವಿರೋಧಿಸಿ, ಅಂತಹ ಮನವಿಗೆ ಸಮ್ಮತಿಸುವುದು ‘ನೀರವ್ ಮೋದಿ, ವಿಜಯ್ ಮಲ್ಯ ಮತ್ತು ಮೆಹುಲ್ ಚೋಕ್ಸಿ’ಯವರು ದೇಶ ಬಿಟ್ಟು ಪಲಾಯನ ಮಾಡಿದ ಪರಿಸ್ಥಿತಿಯನ್ನು ಉಂಟುಮಾಡುತ್ತದೆ ಎಂದು ವಾದಿಸಿದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿಗಳು, ಮೂವರು ಉದ್ಯಮಿಗಳನ್ನು ಬಂಧಿಸುವಲ್ಲಿ ತನಿಖಾ ಏಜೆನ್ಸಿಗಳು ವಿಫಲವಾದ ಕಾರಣ ಅವರಿಗೆ ಭಾರತದಿಂದ ಪಲಾಯನ ಮಾಡಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ನಾನು ಈ ವಾದವನ್ನು ಚಿಂತನಶೀಲವಾಗಿ ಪರಿಶೀಲಿಸಿದ್ದೇನೆ ಮತ್ತು ಸೂಕ್ತ ಸಮಯದಲ್ಲಿ ಅವರನ್ನು ಬಂಧಿಸುವಲ್ಲಿ ತನಿಖಾ ಸಂಸ್ಥೆಗಳು ವಿಫಲವಾಗಿರುವುದರಿಂದ ಇವರು ಪಲಾಯನ ಮಾಡಿದ್ದಾರೆ ಎಂಬುದನ್ನು ಗಮನಿಸುವುದು ಅಗತ್ಯವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಪ್ರಸ್ತುತ ಯುಕೆಯಲ್ಲಿ ನೆಲೆಸಿರುವ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರನ್ನು ಮುಂಬೈ ನ್ಯಾಯಾಲಯಗಳು ಬೃಹತ್ ಆರ್ಥಿಕ ಹಗರಣಗಳಲ್ಲಿ ಪರಾರಿಯಾದ ಆರ್ಥಿಕ ಅಪರಾಧಿಗಳು ಎಂದು ಘೋಷಿಸಿವೆ. ಮೆಹುಲ್ ಚೋಕ್ಸಿ ಪ್ರಸ್ತುತ ಡೊಮಿನಿಕಾದಲ್ಲಿದ್ದಾರೆ ಮತ್ತು ಅವರನ್ನು ಎಫ್‌ಇಒ ಎಂದು ಘೋಷಿಸಲು ಇಡಿ ಅರ್ಜಿ ಸಲ್ಲಿಸಿದೆ.

ವ್ಯೋಮೇಶ್ ಶಾ ವಿರುದ್ಧ ಇಡಿ ಚಾರ್ಜ್‌ಶೀಟ್‌ ಬಳಿಕ ನ್ಯಾಯಾಲಯವು ಶಾ ಅವರಿಗೆ ಸಮನ್ಸ್ ನೀಡಿತ್ತು. ಜೂನ್ 7, 2022ರಂದು ನ್ಯಾಯಾಲಯಕ್ಕೆ ಹಾಜರಾದ ನಂತರ ಶಾ ಅವರನ್ನು ಕೆಲವು ಷರತ್ತುಗಳಿಗೆ ಒಳಪಟ್ಟು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಇದರಲ್ಲಿ ವೈಯಕ್ತಿಕ ಬಾಂಡ್‌ಗಳು ಮತ್ತು ಶ್ಯೂರಿಟಿಗಳನ್ನು ಒದಗಿಸುವುದು ಸಹ ಸೇರಿದೆ. ನ್ಯಾಯಾಲಯದ ಅನುಮತಿಯಿಲ್ಲದೆ ದೇಶ ಬಿಟ್ಟು ಹೋಗಬಾರದು ಎಂದು ಆತನಿಗೆ ವಿಧಿಸಿದ ಷರತ್ತಿನಲ್ಲಿ ಹೇಳಲಾಗಿತ್ತು. ಅದನ್ನು ಮಾರ್ಪಾಡು ಮಾಡುವಂತೆ ಷಾ ಪ್ರಸ್ತುತ ಮನವಿ ಸಲ್ಲಿಸಿದ್ದಾರೆ.

ತನ್ನ ಕೆಲಸಕ್ಕಾಗಿ  ವಿವಿಧ ದೇಶಗಳಿಗೆ ತೆರಳಿ ಕೆಲಸ ಮಾಡಬೇಕಾಗಿರುವುದರಿಂದ ಪ್ರತಿ ಬಾರಿ ನ್ಯಾಯಾಲಯದ ಅನುಮತಿ ಪಡೆಯುವುದು ಕಷ್ಟಕರವಾಗಿದೆ ಎಂದು ಅವರು ಕೋರ್ಟ್‌ ಗಮನಕ್ಕೆ ತಂದಿದ್ದರು. ಶಾ ಪರ ಹಿರಿಯ ವಕೀಲರಾದ ಅಬದ್ ಪೊಂಡಾ, ಸಜಲ್ ಯಾದವ್ ಮತ್ತು ಆಯುಷಾ ಗೇರುಜಾ ವಾದ ಮಂಡಿಸಿದ್ದರು.

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳನ್ನು ಎರಡು ತಿಂಗಳ ಹಿಂದೆ ಮನೆಯಲ್ಲೇ ಕುಳಿತು ತಯಾರಿಸಲಾಗಿದೆ: ಮಮತಾ ಬ್ಯಾನರ್ಜಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...