ದೆಹಲಿಯಲ್ಲಿ 2012ರ ಡಿಸೆಂಬರ್ ನಲ್ಲಿ ಪ್ಯಾರಮೆಡಿಕಲ್ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳಿಗೆ ಮರಣದಂಡನೆ ನಿಕ್ಕಿಯಾಗಿದೆ. ಅಪರಾದಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿ ವರದಿ ಮಾಡಿದೆ.
ಕೇಂದ್ರ ಗೃಹ ಸಚಿವಾಲಯ ಮುಕೇಶ್ ನ ಕ್ಷಮಾದಾನ ಅರ್ಜಿಯನ್ನು ಶಿಫಾರಸು ಮಾಡಿದ ಒಂದು ಗಂಟೆಯಲ್ಲೇ ರಾಷ್ಟ್ರಪತಿಗಳು ಅರ್ಜಿಯನ್ನು ತಿರಸ್ಕರಿಸಿದರು ಎಂದು ಅದು ತಿಳಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂತ್ರಸ್ಥೆಯ ತಂದೆ ಅಪರಾದಿಗಳಿಗೆ ಮರಣದಂಡ ವಿಧಿಸಲು ಅಸಕಾಶ ಸಿಕ್ಕಿದ್ದಕ್ಕೆ ಸಂತಸವಾಗಿದೆ. ಕ್ಷಮಾದಾನ ಅರ್ಜಿ ರಾಷ್ಟ್ರಪತಿಗಳಿಂದ ತಿರಸ್ಕೃತವಾಗುತ್ತದೆ ಎಂಬ ಖಚಿತತೆ ಇತ್ತು. ಅದು ಈಗ ಈಡೇರಿದೆ ಎಂದು ಹೇಳಿದ್ದಾರೆ.
ದೆಹಲಿ ಸರ್ಕಾರ ಬುಧವಾರ ತಾನೆ ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕಟಣದ ಅಪರಾಧಿ ಮುಕೇಶ್ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ಕ್ಷಮಾದಾನ ಅರ್ಜಿ ಬಾಕಿ ಇರುವುದರಿಂದ ಮರಣದಂಡನೆ ವಿಧಿಸಲು ಆಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಗೆ ಹೇಳಿತ್ತು. ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದು ಜನವರಿ 22ರಂದು ಬೆಳಗ್ಗೆ 7 ಗಂಟೆಗೆ ಮರಣದಂಡನೆ ವಿಧಿಸಬಹುದಾಗಿದೆ.
ಅಪರಾಧಿಗಳು ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವುದು ಸಂವಿಧಾನಬದ್ಧ ಹಕ್ಕು. ಮುಕೇಶ್ ತನಗೆ ಸಂವಿಧಾನ ನೀಡಿದ ಹಕ್ಕನ್ನು ಚಲಾಯಿಸಿದ್ದ. ಇದರಲ್ಲಿ ಮರಣದಂಡನೆ ಶಿಕ್ಷೆಯನ್ನು ಮುಂದೂಡುವ ಮತ್ತು ಇತರೆ ಯಾವುದೇ ಉದ್ದೇಶವಿರಲಿಲ್ಲ ಎಂದು ವಕೀಲೆ ವೃಂದಾ ಗ್ರೋವರ್ ಹೇಳಿದ್ದಾರೆ.


