Homeಎಕಾನಮಿಸರಿಯಾಗಿ ಕೆಲಸ ಮಾಡುವುದನ್ನು ಬಿಟ್ಟು ವಿಪಕ್ಷಗಳನ್ನು ಟೀಕಿಸುತ್ತಾ ಕೂತರೆ ಸಮಸ್ಯೆಗಳು ಬರೆಹರಿಯುವುದಿಲ್ಲ; ಮನಮೋಹನ್‌ ಸಿಂಗ್‌

ಸರಿಯಾಗಿ ಕೆಲಸ ಮಾಡುವುದನ್ನು ಬಿಟ್ಟು ವಿಪಕ್ಷಗಳನ್ನು ಟೀಕಿಸುತ್ತಾ ಕೂತರೆ ಸಮಸ್ಯೆಗಳು ಬರೆಹರಿಯುವುದಿಲ್ಲ; ಮನಮೋಹನ್‌ ಸಿಂಗ್‌

- Advertisement -
- Advertisement -

ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಕೇಂದ್ರ ಸರ್ಕಾರ ಸುಖಾಸುಮ್ಮನೆ ವಿರೋಧ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಾಂಕೇಡೆ ಕ್ರೀಡಾಂಗಣಲ್ಲಿ  ಉದ್ಯಮಿಗಳು, ವೃತ್ತಿಪರರು ಮತ್ತು ಪತ್ರಕರ್ತರೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಪುಣೆಯಲ್ಲಿ ಆಟೋ ಮೊಬೈಲ್ ಕೇಂದ್ರದಲ್ಲಿ ಕತ್ತಲು ಆವರಿಸಿಕೊಂಡಿದೆ. ಉತ್ಪಾದನೆ ಕುಸಿತವಾಗಿದೆ. ಕೆಲಸ ಇಲ್ಲವಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ನಿಧಾನಗತಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರ್ಖಾನೆಗಳು ಬಾಗಿಲು ಮುಚ್ಚುತ್ತಿವೆ. ಆರ್ಧಿಕ ಪರಿಸ್ಥಿತಿ ಕೆಟ್ಟುಹೋಗಿದೆ. ಆದರೂ ಭಾರತ ಸರ್ಕಾರ ವಿರೋಧ ಪಕ್ಷಗಳನ್ನು ದೂರುತ್ತಿದೆ. ಆರ್ಥಿಕ ಸ್ಥಿತಿ ಪುನಶ್ಚೇನಕ್ಕೆ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಅದು ಆಗುತ್ತಿಲ್ಲ ಎಂದು ತಿಳಿಸಿದರು.

ಈ ಹಿಂದೆ ಮಹಾರಾಷ್ಟ್ರ ಹೂಡಿಕೆಯಲ್ಲಿ ಮೊದಲ ಸ್ಥಾನದಲ್ಲಿತ್ತು. ಈಗ ಇದೇ ರಾಜ್ಯ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಎಂದು ಸಿಂಗ್ ಟೀಕಿಸಿದ್ದಾರೆ.

ದೇಶದ ಪ್ರತಿ ಮೂವರು ಯುವಕರ ಪೈಕಿ ಒಬ್ಬರಿಗೆ ಉದ್ಯೋಗವಿಲ್ಲ. ನಿರುದ್ಯೋಗ ಸಮಸ್ಯೆಯಿಂದಾಗಿ ಹಳ್ಳಿಗಳ ಹೆಚ್ಚು ಜನರು ನಗರಗಳಿಗೆ ವಲಸೆ ಬರುತ್ತಿದ್ದಾರೆ. ಹಳ್ಳಿಗಳು ಸಂಕಷ್ಟ ಎದುರಿಸುತ್ತಿವೆ. ಎಂದರು.

ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್ ನಲ್ಲಿ ಅವ್ಯವಹಾರ ನಡೆದು ಬಿಕ್ಕಟ್ಟು ಎದುರಿಸುತ್ತಿದೆ. ಕೂಡಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್, ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತ್ತ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಪಿಎಂಸಿ ಬ್ಯಾಂಕ್ ಬಿಕ್ಕಟ್ಟಿನಿಂದ 16 ಲಕ್ಷ ಮಂದಿಗೆ ಸಂಕಷ್ಟ ಎದುರಿಸಬೇಕಾಗಿದೆ. ಅವರ ಕುಂದುಕೊರತೆ ಕೇಳಬೇಕಾದ ಸರ್ಕಾರಗಳು ಮೌನ ವಹಿಸಿದೆ. ಹೀಗಾಗಿ ತಕ್ಷಣವೇ ಪಿಎಂಸಿ ಬಿಕ್ಕಟ್ಟನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಅವರ ಹೇಳಿಕೆಗಳನ್ನು ಮತ್ತೆ ಹೇಳೋಕೆ ಇಷ್ಟಪಡುವುದಿಲ್ಲ. ಆರ್ಥಿಕತೆ ವಿಷಯದಲ್ಲಿ ವಿರೋಧ ಪಕ್ಷಗಳ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಅದನ್ನು ಸರಿಪಡಿಸುವ ಬಗ್ಗೆ ಚಿಂತನೆ ನಡೆಸಬೇಕು. ಆರ್ಥಿಕತೆ ಕುಸಿತಕ್ಕೆ ಕಾರಣಗಳು, ಆರ್ಥಿಕತೆ ಸುಧಾರಣೆಗೆ ಮಾರ್ಗೋಪಾಯಗಳನ್ನು ಹುಡುಕಿಕೊಳ್ಳುವ ಅಗತ್ಯವಿದೆ ಎಂದರು.

‘ಯುಪಿಎ ಆಡಳಿತವಿದ್ದಾಗಲೂ ಹಲವು ಸವಾಲುಗಳಿದ್ದವು. ಅವುಗಳಿಗೆ ನಾವು ಪರಿಹಾರ ಕಂಡುಕೊಂಡಿದ್ದೆವು. ಈಗ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ಹಿಂದಿನ ಐದು ವರ್ಷ ಸಹ ನಿಮ್ಮದೇ ಆಡಳಿತವಿತ್ತು. ಹೀಗಿರುವಾಗ ಸರಿಯಾದ ಮಾರ್ಗಸೂಚಿ ಕಂಡುಕೊಳ್ಳುವುದನ್ನು ಬಿಟ್ಟು ಸುಮ್ಮನೇ ನಮ್ಮತ್ತ ಬೊಟ್ಟು ಮಾಡುವುದರಲ್ಲಿ ಕಾಲಹರಣ ಮಾಡುತ್ತಿದ್ದೀರಿ’. ‘ಆರ್ಥಿಕ ಅಭಿವೃದ್ಧಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತ ಹೋದರೆ, ಭಾರತದ ಆರ್ಥಿಕತೆ 2024ರೊಳಗೆ 5 ಟ್ರಿಲಿಯನ್ ಡಾಲರ್ಸ್ ಗುರಿ ಮುಟ್ಟಲು ಸಾಧ್ಯವಿಲ್ಲ. ಆರ್ಥಿಕತೆಯ ಸುಧಾರಣೆಗೆ ಸೂಕ್ತ ತಂತ್ರಗಳನ್ನು ಹೆಣೆಯಬೇಕಿದೆ’ ಎಂದು ಕುಟುಕಿದರು.

ಇದಕ್ಕೂ ಮೊದಲು ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿರ್ಮಲಾ ಸೀತಾರಾಮನ್, ಸಾರ್ವಜನಿಕ ವಲಯದ ಬ್ಯಾಂಕುಗಳ ಕೆಟ್ಟ ಸ್ಥಿತಿಗೆ ಮನಮೋಹನ್ ಸಿಂಗ್ ಮತ್ತು ಮಾಜಿ ಆರ್‌ಬಿಐ ಗರ್ವನರ್‌ ರಘುರಾಮ್ ರಾಜನ್ ಕಾರಣ ಎಂದು ಆಪಾದಿಸಿದ್ದರು. ಇದಕ್ಕೆ ಇಂದು ಮನಮೋಹನ್ ಸಿಂಗ್ ತಕ್ಕ ಉತ್ತರ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...