Homeಕರ್ನಾಟಕರಾಜ್ಯಕ್ಕಾಗಿರುವ ಅನ್ಯಾಯವನ್ನು ನಿರ್ಮಲಾ ಸೀತಾರಾಮನ್ ಒಪ್ಪಿಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯಕ್ಕಾಗಿರುವ ಅನ್ಯಾಯವನ್ನು ನಿರ್ಮಲಾ ಸೀತಾರಾಮನ್ ಒಪ್ಪಿಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದು, ಅವರಿಗೆ ಧನ್ಯವಾದಗಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ನಿವಾಸಿಗಳ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದರು’ ಎಂದರು.

‘ನಾವು ಬರ ಪರಿಹಾರ ನೀಡುವಂತೆ ಮನವಿ ನೀಡಿ ಎಷ್ಟು ತಿಂಗಳುಗಳಾಗಿವೆ? ನಾವು ಬರ ಪರಿಹಾರ ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗದ ನಿರ್ಬಂಧ ಇರಲಿಲ್ಲ. ಈಗ ಚುನಾವಣಾ ಆಯೋಗದ ನೆಪ ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರದ ಅಕ್ಷಮ್ಯ ಅಪರಾಧದ ಬಗ್ಗೆ ಜನರಿಗೂ ಅರಿವಾಗಿದೆ. ಈ ಮೂಲಕ ಡಿ.ಕೆ. ಸುರೇಶ್ ಅವರ ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ಪಾಲಿನ ಹೋರಾಟ ಒಪ್ಪಿಕೊಂಡಿದ್ದಾರೆ; ಅವರಿಗೆ ಧನ್ಯವಾದಗಳು’ ಎಂದು ತಿರುಗೇಟು ಕೊಟ್ಟರು.

ಮೇಕೆದಾಟು ಯೋಜನೆ ವಿಚಾರವಾಗಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಇಲ್ಲಿನ ಜನರ ಕಷ್ಟಕ್ಕೆ ಪರಿಹಾರ ನೀಡಿ ಧೈರ್ಯ ತುಂಬುವವರು ನಾವು. ಬೇರೆ ಅಭ್ಯರ್ಥಿಗಳು ನಮ್ಮಂತೆ ಜನರಿಗೆ ಅಭಯ ನೀಡುವುದಿಲ್ಲ. ಕುಮಾರಸ್ವಾಮಿ ಅವರು ಈಗ ಮೇಕೆದಾಟು, ಮಹದಾಯಿ ಯೋಜನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಅಧಿಕಾರ ಇದ್ದಾಗ ಈ ವಿಚಾರದಲ್ಲಿ ಏನೂ ಮಾಡದವರು ಈಗ ಏನು ಮಾಡುತ್ತಾರೆ. ನಾನು ಮೇಕೆದಾಟು ಪಾದಯಾತ್ರೆ ಮಾಡುವಾಗ ಅವರು ಕೊಟ್ಟಿರುವ ಹೇಳಿಕೆ ನೋಡಿ. ನಮ್ಮ ಪಾದಯಾತ್ರೆ ಸಂದರ್ಭದಲ್ಲಿ ಕಬಾಬ್ ತಿನ್ನೋಕೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದಿದ್ದ ಕುಮಾರಸ್ವಾಮಿ ಅವರು, ಈಗ ಪಾದಯಾತ್ರೆ ಬಗ್ಗೆ ಮಾತಾಡುತ್ತಿದ್ದಾರೆ. ಮಂಡ್ಯಕ್ಕೆ ಬಂದ ನಂತರ ಅವರಿಗೆ ಬಿಸಿ ತಟ್ಟಿರುವಂತೆ ಕಾಣುತ್ತಿದೆ’ ಎಂದರು.

‘ನಾವು ಹೋರಾಟ ಮಾಡಿದ್ದು ರಾಜ್ಯದ ಜನತೆಗಾಗಿ; ರಾಜಕಾರಣದಲ್ಲಿ ಅದು ನಮ್ಮ ಬದ್ಧತೆ. ಅದನ್ನು ಅವರಿಂದ ಸಹಿಸಲು ಆಗಲಿಲ್ಲ. ಅವರು ಏನಾದರೂ ಮಾಡಿಕೊಳ್ಳಲಿ. ಕಾವೇರಿ ಜಲಾನಯನ ಪ್ರದೇಶದ ಜನರಿಗೆ, ಬೆಂಗಳೂರು ಜನರಿಗೆ ಕುಡಿಯುವ ನೀರು ಪೂರೈಸಲು ನಾನು ನೀರಾವರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ’ ಎಂದು ಹೇಳಿದರು.

‘ನಾನು ಕೊಟ್ಟ ಮಾತಿನಂತೆ ನಡೆಯುತ್ತೇನೆ ಎಂದು ಜನರಿಗೆ ನಂಬಿಕೆ ಇದೆ. ಅವರ ನಂಬಿಕೆಗೆ ತಕ್ಕಂತೆ ನಡೆಯುತ್ತೇನೆ. ಇದು ಮತದಾರರಿಗೆ ಮನವರಿಕೆಯಾಗಿದೆ’ ಎಂದು ತಿಳಿಸಿದರು.

ಇದನ್ನೂ ಓದಿ; ಸ್ಫೋಟ ಪ್ರಕರಣದಲ್ಲಿ ಟಿಎಂಸಿ ಮುಖಂಡನ ಬಂಧನ; ‘ಬಿಜೆಪಿ-ಎನ್‌ಐಎ ಮೈತ್ರಿ’ ಎಂದ ಅಭಿಷೇಕ್ ಬ್ಯಾನರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...