ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಹಾಗೂ ಬಿಜೆಪಿ ಕಚೇರಿ ವಿರುದ್ಧ ನಗರ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬುಧವಾರ ಮುಗಿಸಿರುವ ರಾಜ್ಯ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ತಿಲಕ್ ನಗರ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸಿ ದಾಖಲಿಸಲಾಗಿರುವ ಈ ಅರ್ಜಿಯಲ್ಲಿ ದೂರುದಾರರ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮತ್ತು ಅರ್ಜಿದಾರ ನಳೀನ್ ಕುಮಾರ್ ಕಟೀಲ್ ಪರ ಹಿರಿಯ ವಕೀಲ ಕೆ.ಜಿ. ರಾಘವನ್ ಅವರ ವಾದವನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಆದೇಶವನ್ನು ಕಾಯ್ದಿರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಜನಾಧಿಕಾರ ಸಂಘರ್ಷ ಪರಿಷತ್ತಿನ ಸಹ ಅಧ್ಯಕ್ಷರಾದ ಆದರ್ಶ್ ಆರ್. ಅಯ್ಯರ್ ಅವರು ಸಲ್ಲಿಸಿದ ಖಾಸಗಿ ದೂರಿನ ಮೇರೆಗೆ ಮ್ಯಾಜಿಸ್ಟ್ರೇಟ್ ನೀಡಿದ ಆದೇಶವನ್ನು ಆಧರಿಸಿ ಬೆಂಗಳೂರಿನ ತಿಲಕ್ ನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
2ನೇ ಆರೋಪಿಯಾಗಿರುವ ED ಭಯವನ್ನು ಹುಟ್ಟುಹಾಕಿ ಕೆಲವು ಕಂಪನಿಗಳು ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಿರುವ ಭಾರಿ ಪ್ರಕರಣ ಇದಾಗಿದೆ ಎಂದು ಪ್ರಶಾಂತ್ ಭೂಷಣ್ ಪ್ರತಿಪಾದಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಆರೋಪಿಗಳ ಪರ ವಕೀಲರಾದ ರಾಘವನ್, ಸುಲಿಗೆಯ ದೂರು ದಾಖಲಾಗಬೇಕಾದರೆ ದೂರುದಾರ ಬಲಿಪಶುವಾಗಿರಬೇಕು ಮತ್ತು ಆರೋಪಿಯು ಫಲಾನುಭವಿಯಾಗಿರಬೇಕಾಗಿದ್ದು, ಇಲ್ಲಿ ದೂರುದಾರರು ಬಲಿಪಶು ಅಲ್ಲ, ಜೊತೆಗೆ ಈ ಪ್ರಕರಣವನ್ನು ಮುಂದುವರಿಸಲು ಅನುಮತಿ ನೀಡಿದರೆ, ಇದು ಕಾನೂನು ಅಸಂಬದ್ಧ ಪರಿಸ್ಥಿತಿಗೆ ಕೊಂಡೊಯ್ಯುತ್ತದೆ ಎಂದು ವಾದಿಸಿದ್ದಾರೆ.
ಚುನಾವಣಾ ಬಾಂಡ್ ಮೂಲಕ ಸುಲಿಗೆ ಹಿನ್ನಲೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿತ್ತು. ಅದರಂತೆ ಪೊಲೀಸರು ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಫೆಬ್ರವರಿಯಲ್ಲಿ, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿತ್ತು. ಈ ವೇಳೆ ನ್ಯಾಯಾಲಯವು ಯೋಜನೆಯನ್ನು “ಅಸಂವಿಧಾನಿಕ” ಮತ್ತು ಇದು ನಾಗರಿಕರ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳಿತ್ತು. ಕೇಂದ್ರ ಸರ್ಕಾರವು 2018 ರಲ್ಲಿ ಯೋಜನೆಯನ್ನು ಪರಿಚಯಿಸಿ, ರಾಜಕೀಯ ಪಕ್ಷಗಳಿಗೆ ನಗದು ದೇಣಿಗೆಗಳನ್ನು ನೀಡುವ ನೀತಿಗೆ ಬದಲಾವಣೆ ತಂದಿತ್ತು.
ಇದನ್ನೂ ಓದಿ: ಚುನಾವಣಾ ಬಾಂಡ್ ಸುಲಿಗೆ | ನಿರ್ಮಲಾ ಸೀತಾರಾಮನ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಚುನಾವಣಾ ಬಾಂಡ್ ಸುಲಿಗೆ | ನಿರ್ಮಲಾ ಸೀತಾರಾಮನ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ


