Homeಮುಖಪುಟಲೋಕಸಭೆಯಿಂದ ಆದಾಯ ತೆರಿಗೆ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ

ಲೋಕಸಭೆಯಿಂದ ಆದಾಯ ತೆರಿಗೆ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ

- Advertisement -
- Advertisement -

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ (ಆ.8) ಲೋಕಸಭೆಯಲ್ಲಿ ಆದಾಯ ತೆರಿಗೆ ಮಸೂದೆ- 2025 ಅನ್ನು ಹಿಂತೆಗೆದುಕೊಂಡಿದ್ದಾರೆ.

ಈ ಮಸೂದೆಗೆ ಸಂಬಂಧಿಸಿದಂತೆ ಪರಿಶೀಲನಾ ಸಮಿತಿಯು ಸೂಚಿಸಿರುವ ಬದಲಾವಣೆಗಳನ್ನು ಸೇರ್ಪಡೆಗೊಳಿಸಿದ ನಂತರ, ಸರ್ಕಾರವು ಆ.11ರಂದು ಮತ್ತೆ ಮಂಡಿಸಲಿದೆ ಎಂದು ವರದಿಯಾಗಿದೆ.

ಮಸೂದೆಯಲ್ಲಿ ಇರುವ ಗೊಂದಲಗಳನ್ನು ನಿವಾರಿಸಿ, ಬದಲಾವಣೆಗಳನ್ನು ಸೇರಿಸಿ ಹೊಸದಾಗಿ ಮಂಡಿಸಲು ಹಿಂಪಡೆಯಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಆರು ದಶಕಗಳಷ್ಟು ಹಳೆಯದಾದ 1961ರ ಆದಾಯ ತೆರಿಗೆ ಕಾಯ್ದೆಯನ್ನು ಬದಲಿಸುವ ಉದ್ದೇಶದಿಂದ ಆದಾಯ ತೆರಿಗೆ ಮಸೂದೆಯನ್ನು 2025ರ ಫೆಬ್ರವರಿ 13ರಂದು ಲೋಕಸಭೆಯಲ್ಲಿ ಮಂಡಿಸಲಾಗಿತ್ತು ಮತ್ತು ಅದನ್ನು ಪರಿಶೀಲನಾ ಸಮಿತಿಗೆ ಕಳುಹಿಸಲಾಗಿತ್ತು.

ಬಿಜೆಪಿ ಸಂಸದ ಬೈಜಯಂತ್ ಪಾಂಡಾ ಅಧ್ಯಕ್ಷತೆಯ ಪರಿಶೀಲನಾ ಸಮಿತಿಯಲ್ಲಿ 31 ಸದಸ್ಯರಿದ್ದರು.

ಧಾರ್ಮಿಕ ಮತ್ತು ದತ್ತಿ ಟ್ರಸ್ಟ್‌ಗಳಿಗೆ ನೀಡುವ ಅನಾಮಧೇಯ ದೇಣಿಗೆಗಳ ಮೇಲಿನ ತೆರಿಗೆ ವಿನಾಯಿತಿಯನ್ನು ಹೊಸ ಕಾನೂನಿನಲ್ಲಿ ಮುಂದುವರಿಸುವುದು, ತೆರಿಗೆದಾರರು ಯಾವುದೇ ದಂಡ ಶುಲ್ಕವನ್ನು ಪಾವತಿಸದೆ ಐಟಿಆರ್ ಸಲ್ಲಿಸುವ ಅಂತಿಮ ದಿನಾಂಕದ ನಂತರವೂ ಟಿಡಿಎಸ್ ಮರುಪಾವತಿಯನ್ನು ಪಡೆಯಲು ಅವಕಾಶ ನೀಡುವುದು ಸೇರಿದಂತೆ ಮಸೂದೆಯಲ್ಲಿ ಹಲವು ಬದಲಾವಣೆಗಳನ್ನು ಪರಿಶೀಲನಾ ಸಮಿತಿ ಸೂಚಿಸಿದೆ ಎಂದು ವರದಿಗಳು ಹೇಳಿವೆ.

ಹೊಸ ಮಸೂದೆಯಲ್ಲಿ ಸರ್ಕಾರವು ಲಾಭರಹಿತ ಸಂಸ್ಥೆಗಳಿಗೆ (NPOs)ಧಾರ್ಮಿಕ ಟ್ರಸ್ಟ್‌ಗಳು ಪಡೆಯುವ ಅನಾಮಧೇಯ ದೇಣಿಗೆಗಳಿಗೆ ತೆರಿಗೆ ವಿಧಿಸುವುದರಿಂದ ವಿನಾಯಿತಿ ನೀಡಿದೆ.

ಆದರೆ, ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ನಡೆಸುವಂತಹ ಇತರ ದತ್ತಿ ಕಾರ್ಯಗಳನ್ನು ನಡೆಸುವ ಧಾರ್ಮಿಕ ಟ್ರಸ್ಟ್‌ ಪಡೆಯುವ ದೇಣಿಗೆಗಳಿಗೆ ತೆರಿಗೆ ವಿಧಿಸಲಾಗುತ್ತದೆ ಎಂದು ವರದಿಯಾಗಿದೆ.

2024ರಲ್ಲಿ ಭಾರತದ ಪೌರತ್ವ ತ್ಯಜಿಸಿದ 2 ಲಕ್ಷಕ್ಕೂ ಹೆಚ್ಚು ಮಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...