Homeಮುಖಪುಟನ್ಯಾಯಾಂಗದ ಬಗ್ಗೆ ನಿಶಿಕಾಂತ್ ದುಬೆ ಹೇಳಿಕೆ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಒಪ್ಪಿಗೆ ಅಗತ್ಯವಿಲ್ಲ;...

ನ್ಯಾಯಾಂಗದ ಬಗ್ಗೆ ನಿಶಿಕಾಂತ್ ದುಬೆ ಹೇಳಿಕೆ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಒಪ್ಪಿಗೆ ಅಗತ್ಯವಿಲ್ಲ; ಸುಪ್ರೀಂ ಕೋರ್ಟ್

- Advertisement -
- Advertisement -

ಸುಪ್ರೀಂ ಕೋರ್ಟ್ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರನ್ನು ಟೀಕಿಸಿದ್ದಕ್ಕಾಗಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ತನ್ನ ಅನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ (ಏ.21) ಅರ್ಜಿದಾರರಿಗೆ ತಿಳಿಸಿದೆ.

ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯ ವಿಚಾರಣೆಗೆ ಬಂದಿತ್ತು.

ದುಬೆಯವರ ಹೇಳಿಕೆಗಳ ಕುರಿತ ಇತ್ತೀಚಿನ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅರ್ಜಿದಾರರ ಪರ ವಕೀಲರು, ನ್ಯಾಯಾಲಯದ ಅನುಮತಿಯೊಂದಿಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಬಯಸುವುದಾಗಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ, “ನೀವು ಅರ್ಜಿ ಸಲ್ಲಿಸಿ, ಅದಕ್ಕೆ ನಮ್ಮ ಅನುಮತಿ ಅಗತ್ಯವಿಲ್ಲ. ಆದರೆ, ಈ ವಿಷಯದಲ್ಲಿ ಅಟಾರ್ನಿ ಜನರಲ್ (ಎಜಿ) ಅವರಿಂದ ಅನುಮತಿ ಪಡೆಯಬೇಕಾಗಿದೆ. ಎಜಿ ಮುಂದೆ ಪ್ರಕರಣ ದಾಖಲಿಸಿ, ಅವರು ಅನುಮತಿ ನೀಡುತ್ತಾರೆ” ಎಂದು ಪ್ರತಿಕ್ರಿಯಿಸಿದ್ದಾಗಿ .barandbench.com ವರದಿ ಮಾಡಿದೆ.

ಸುಪ್ರೀಂ ಕೋರ್ಟ್ ಕಾನೂನುಗಳನ್ನು ರೂಪಿಸುವುದಾದರೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳನ್ನು ಮುಚ್ಚಿ ಎಂದು ಬಿಜೆಪಿ ಸಂಸದ ದುಬೆ ಶನಿವಾರ ವಾಗ್ದಾಳಿ ನಡೆಸಿದ್ದರು.

ದೇಶದಲ್ಲಿ “ಅಂತರ್ಯುದ್ಧ ಉಂಟಾದರೆ” ಸಿಜೆಐ ಖನ್ನಾ ಅವರೇ ಅದಕ್ಕೆ ಕಾರಣ ಎಂದು ಟೀಕಿಸಿದ್ದರು.

ಈ ತಿಂಗಳ ಆರಂಭದಲ್ಲಿ ಸಂಸತ್ತಿನ ಎರಡೂ ಸದನಗಳಲ್ಲಿ ಅಂಗೀಕರಿಸಲ್ಪಟ್ಟ ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಕಳೆದ ಬುಧವಾರ ವಿಚಾರಣೆ ನಡೆಸಿದೆ.

ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವುದು ಮತ್ತು ಬಳಕೆದಾರರಿಂದ ವಕ್ಫ್ ಆಸ್ತಿಗಳನ್ನು ತೆಗೆದು ಹಾಕಲು ಅವಕಾಶ ನೀಡುವಂತಹ ಕೆಲವು ನಿಬಂಧನೆಗಳು ಮೂಲಭೂತ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸುತ್ತವೆ ಎಂದು ಅರ್ಜಿದಾರರು ವಾದಿಸುತ್ತಿದ್ದಾರೆ. ಇದರಲ್ಲಿ ಸುಪ್ರೀಂ ಕೋರ್ಟ್ ಮಧ್ಯೆ ಪ್ರವೇಶಿಸುವುದನ್ನು ದುಬೆಯವರು ಪ್ರಶ್ನಿಸಿದ್ದಾರೆ.

ವಕ್ಫ್ ಕಾಯ್ದೆಯ ತಿದ್ದುಪಡಿಗಳನ್ನು ಪ್ರಶ್ನಿಸಿದ ದಾವೆದಾರರಲ್ಲಿ ಒಬ್ಬರ ಪರ ವಕೀಲರಾಗಿರುವ ಸುಪ್ರೀಂ ಕೋರ್ಟ್ ವಕೀಲ ಅನಸ್ ತನ್ವೀರ್, ಅಟಾರ್ನಿ ಜನರಲ್ ಆರ್ ವೆಂಕಟ್ರಮಣಿ ಅವರಿಗೆ ಪತ್ರ ಬರೆದು, ಸುಪ್ರೀಂ ಕೋರ್ಟ್‌ನ ಘನತೆಯನ್ನು ಕುಗ್ಗಿಸುವ ಗುರಿಯನ್ನು ಹೊಂದಿರುವ ಹೇಳಿಕೆಗಳಿಗಾಗಿ ಸಂಸದ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಒಪ್ಪಿಗೆ ಕೋರಿದ್ದಾರೆ.

“1975ರ ಸುಪ್ರೀಂ ಕೋರ್ಟ್ ನಿಂದನೆ ಪ್ರಕ್ರಿಯೆಗಳನ್ನು ನಿಯಂತ್ರಿಸುವ ನಿಯಮಗಳ ನಿಬಂದನೆ 3 (ಸಿ) ಯೊಂದಿಗೆ ಓದಲಾದ ನ್ಯಾಯಾಂಗ ನಿಂದನೆ ಕಾಯ್ದೆ, 1971 ರ ಸೆಕ್ಷನ್ 15 (1) (ಬಿ) ಅಡಿಯಲ್ಲಿ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ, ಜಾರ್ಖಂಡ್‌ನ ಗೊಡ್ಡಾ ಸಂಸದೀಯ ಕ್ಷೇತ್ರದ ಲೋಕಸಭಾ ಸದಸ್ಯ ನಿಶಿಕಾಂತ್ ದುಬೆ ಅವರು ಸಾರ್ವಜನಿಕವಾಗಿ ನೀಡಿದ ಹೇಳಿಕೆಗಳು ದಾರಿತಪ್ಪಿಸುವ ಮತ್ತು ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಘನತೆ ಮತ್ತು ಅಧಿಕಾರವನ್ನು ಕುಗ್ಗಿಸುವ ಗುರಿಯನ್ನು ಹೊಂದಿರುವ ಹೇಳಿಕೆಗಳಾಗಿವೆ. ಹಾಗಾಗಿ, ಅವರ ವಿರುದ್ದ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ನಿಮ್ಮ ಒಪ್ಪಿಗೆ ಕೋರುತ್ತೇನೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್‌ ವಿರುದ್ದದ ದುಬೆ ಅವರ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದ್ದು, ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಈ ಹೇಳಿಕೆಗಳನ್ನು ಅವರ ವೈಯಕ್ತಿಕ ಅಭಿಪ್ರಾಯಗಳು ಎಂದಿದ್ದಾರೆ.

ನ್ಯಾಯಾಂಗವು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ. ಅಂತಹ ಹೇಳಿಕೆಗಳನ್ನು ನೀಡದಂತೆ ಪಕ್ಷದ ನಾಯಕರಿಗೆ ನಿರ್ದೇಶನ ನೀಡಿದ್ದೇನೆ ಎಂದು ನಡ್ಡಾ ಹೇಳಿದ್ದಾರೆ.

ಬಿಹಾರ| ಪಾರ್ಕಿಂಗ್ ವಿಚಾರಕ್ಕೆ ಮದುವೆ ಮನೆಯಲ್ಲಿ ಗುಂಡಿನ ದಾಳಿ; ಇಬ್ಬರು ಸಾವು, ಐವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...