HomeUncategorizedಸಿಲ್ಚಾರ್‌ನ NITಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ, ಲಾಠೀ ಚಾರ್ಜ್‌

ಸಿಲ್ಚಾರ್‌ನ NITಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ, ಲಾಠೀ ಚಾರ್ಜ್‌

- Advertisement -
- Advertisement -

ಅಸ್ಸಾಂನ ಕ್ಯಾಚಾರ್ ಜಿಲ್ಲೆಯ ಸಿಲ್ಚಾರ್‌ನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ) ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಈ ವೇಳೆ ಪೊಲೀಸರ ನಡುವೆ ಘರ್ಷಣೆ ನಡೆದಿದೆ.

ಎಲೆಕ್ಟ್ರಿಕ್ ಇಂಜಿನಿಯರಿಂಗ್ ಕೋರ್ಸ್‌ನ ಮೂರನೇ ಸೆಮಿಸ್ಟರ್‌ನಲ್ಲಿದ್ದ ಅರುಣಾಚಲ ಪ್ರದೇಶದ ವಿದ್ಯಾರ್ಥಿ ಕೋಜ್ ಬುಕರ್ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದ. ಈ ಹಿನ್ನೆಲೆ ತನ್ನ ಬಾಕಿ ಉಳಿದ ವಿಷಯಗಳನ್ನು(ಪಠ್ಯ) ಪೂರ್ತಿಗೊಳಿಸಲು ಸಾಧ್ಯವಾಗದ ಕಾರಣ ಮನನೊಂದು ನೇಣು ಬಿಗಿದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿದ್ಯಾರ್ಥಿ ಆತ್ಮಹತ್ಯೆಗೆ ಮೊದಲು ಮುಂದಿನ ಸೆಮಿಸ್ಟರ್‌ಗೆ ನೋಂದಾಯಿಸಲು ಅವಕಾಶ ನೀಡುವಂತೆ ಕಾಲೇಜು ಅಧಿಕಾರಿಗಳಿಗೆ ಮನವಿ ಮಾಡಿದ್ದ ಎನ್ನಲಾಗಿದ್ದು, ಆದರೆ ಕಾಲೇಜು ಈ ಮನವಿಯನ್ನು ತಿರಸ್ಕರಿಸಿದೆ ಎಂದು ಸಹಪಾಠಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಮೃತ ವಿದ್ಯಾರ್ಥಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಕುರಿತು ಅಸಹಜ ಸಾವು ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿಯ ಕುಟುಂಬದ ಸದಸ್ಯರು ಅರುಣಾಚಲ ಪ್ರದೇಶದಿಂದ ಆಗಮಿಸಿದ್ದರು. ವಿದ್ಯಾರ್ಥಿಯ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ವಿದ್ಯಾರ್ಥಿಯ ಆತ್ಮಹತ್ಯೆಯ ಬಳಿಕ ಇತರ ವಿದ್ಯಾರ್ಥಿಗಳು ರಿಜಿಸ್ಟ್ರಾರ್ ಅವರ ಅಧಿಕೃತ ನಿವಾಸವನ್ನು ಸುತ್ತುವರೆದಿದ್ದು, ಧರಣಿ ನಡೆಸಿದ್ದರಿಂದ ಕ್ಯಾಂಪಸ್‌ನಲ್ಲಿ ಉದ್ವಿಗ್ನತೆ ಉಲ್ಬಣಗೊಂಡು ವಿದ್ಯಾರ್ಥಿಗಳನ್ನು ಚದುರಿಸಲು ಲಘುವಾಗಿ ಬಲಪ್ರಯೋಗ ಮಾಡಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಆದರೆ ಇಂದು ಹೆಚ್ಚಿನ ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಚಾಚಾರ್ ಜಿಲ್ಲೆಯ ಅಧಿಕಾರಿಗಳು, ಪೊಲೀಸರು ಮತ್ತು ಎನ್‌ಐಟಿ ಸಿಲ್ಚಾರ್‌ನ ಅಧಿಕಾರಿಗಳು ಪರಿಸ್ಥಿತಿಯ ಕುರಿತು ತುರ್ತು ಸಭೆ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಣದವರೆಗೆ ಕಾಲೇಜಿಗೆ ರಜೆ ನೀಡುವಂತೆ ಸೂಚಿಸಲಾಗಿದೆ ಎನ್ನಲಾಗಿದೆ.

ಈ ಕುರಿತು ಧರಣಿ ನಿರತ ವಿದ್ಯಾರ್ಥಿಯೊಬ್ಬರು ಮಾತನಾಡಿದ್ದು, ನಿನ್ನೆ ನಾವು NIT ಸಿಲ್ಚಾರ್ ನಿರ್ದೇಶಕರಿಗಾಗಿ ಇಡೀ ರಾತ್ರಿ ಕಾಯುತ್ತಿದ್ದೆವು, ಆದರೆ ಅವರು ನಮ್ಮನ್ನು ಭೇಟಿ ಮಾಡಲಿಲ್ಲ ಮತ್ತು ನಮ್ಮ ಎಲ್ಲಾ ವಿನಂತಿಗಳನ್ನು ತಿರಸ್ಕರಿಸಿದರು. ಪ್ರತಿದಿನ, ಸಂಸ್ಥೆಯು ವಿದ್ಯಾರ್ಥಿಗಳಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸುತ್ತಿದೆ. ವಿದ್ಯಾರ್ಥಿಗಳು ಅವರ ನಡವಳಿಕೆಯಿಂದ ತೊಂದರೆಗೆ ಒಳಗಾಗುತ್ತಿದ್ದಾರೆ. ಎನ್‌ಐಟಿ ಸಿಲ್ಚಾರ್‌ನ ಆಡಳಿತ ಮಂಡಳಿಯ ಈ ನೀತಿಗಳಿಂದ  ಖಿನ್ನತೆಗೊಳಗಾಗಿ ಇಂದು ಓರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳು ಸಂಸ್ಥೆಯ ನಿರ್ದೇಶಕರನ್ನು ಭೇಟಿಯಾಗಲು ಬಯಸಿದ್ದರು. ಆದರೆ ಅವರು ಅದಕ್ಕೆ ಅವಕಾಶ ನೀಡದೆ ಪೊಲೀಸ್ ಮೂಲಕ  ಲಾಠಿಚಾರ್ಜ್‌ ಮಾಡಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನು ಓದಿ: INDIA ಒಕ್ಕೂಟವು ಯಾವುದೇ ಪತ್ರಕರ್ತರನ್ನು ಬಹಿಷ್ಕರಿಸಿಲ್ಲ: ಪವನ್ ಖೇರಾ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್...

ವಿದ್ಯಾರ್ಥಿಗಳ ಪ್ರತಿಭಟನೆ: ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಸರ್ಕಾರ ಮೀಸಲಾತಿ ನೀತಿಯನ್ನು ತರ್ಕಬದ್ಧಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆ & ಕೆ ವಿದ್ಯಾರ್ಥಿಗಳು ಪ್ರತಿಭಟನೆ ಘೋಷಿಸುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸಂಸದ ಮತ್ತು ಪೀಪಲ್ಸ್...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು...

ತ್ರಿಪುರಾ: ಮಸೀದಿಗೆ ಮದ್ಯದ ಬಾಟಲಿಗಳನ್ನು ಇಟ್ಟು ಬೆಂಕಿ ಹಚ್ಚಲು ಯತ್ನ: ಬಜರಂಗದಳ ಧ್ವಜ ಕಟ್ಟಿದ ದುಷ್ಕರ್ಮಿಗಳು

ತ್ರಿಪುರಾದ ಧಲೈ ಜಿಲ್ಲೆಯ ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದನ್ನು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಬೆದರಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ನಿವಾಸಿಗಳು ಮತ್ತು ಮಸೀದಿ ಅಧಿಕಾರಿಗಳು ಹೇಳಿದ್ದಾರೆ.  ಮನು-ಚೌಮಾನು ರಸ್ತೆಯಲ್ಲಿರುವ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

"ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು" ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ. ಡಿಸೆಂಬರ್...

“ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ 

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ...

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ದೇಶದ ಜನರು ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ ಈ ಕುರಿತು ಸ್ವಯಂ ಪ್ರೇರಿತ (Suo Motu...