HomeUncategorizedಸಿಲ್ಚಾರ್‌ನ NITಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ, ಲಾಠೀ ಚಾರ್ಜ್‌

ಸಿಲ್ಚಾರ್‌ನ NITಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ, ಲಾಠೀ ಚಾರ್ಜ್‌

- Advertisement -
- Advertisement -

ಅಸ್ಸಾಂನ ಕ್ಯಾಚಾರ್ ಜಿಲ್ಲೆಯ ಸಿಲ್ಚಾರ್‌ನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ) ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಈ ವೇಳೆ ಪೊಲೀಸರ ನಡುವೆ ಘರ್ಷಣೆ ನಡೆದಿದೆ.

ಎಲೆಕ್ಟ್ರಿಕ್ ಇಂಜಿನಿಯರಿಂಗ್ ಕೋರ್ಸ್‌ನ ಮೂರನೇ ಸೆಮಿಸ್ಟರ್‌ನಲ್ಲಿದ್ದ ಅರುಣಾಚಲ ಪ್ರದೇಶದ ವಿದ್ಯಾರ್ಥಿ ಕೋಜ್ ಬುಕರ್ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದ. ಈ ಹಿನ್ನೆಲೆ ತನ್ನ ಬಾಕಿ ಉಳಿದ ವಿಷಯಗಳನ್ನು(ಪಠ್ಯ) ಪೂರ್ತಿಗೊಳಿಸಲು ಸಾಧ್ಯವಾಗದ ಕಾರಣ ಮನನೊಂದು ನೇಣು ಬಿಗಿದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿದ್ಯಾರ್ಥಿ ಆತ್ಮಹತ್ಯೆಗೆ ಮೊದಲು ಮುಂದಿನ ಸೆಮಿಸ್ಟರ್‌ಗೆ ನೋಂದಾಯಿಸಲು ಅವಕಾಶ ನೀಡುವಂತೆ ಕಾಲೇಜು ಅಧಿಕಾರಿಗಳಿಗೆ ಮನವಿ ಮಾಡಿದ್ದ ಎನ್ನಲಾಗಿದ್ದು, ಆದರೆ ಕಾಲೇಜು ಈ ಮನವಿಯನ್ನು ತಿರಸ್ಕರಿಸಿದೆ ಎಂದು ಸಹಪಾಠಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಮೃತ ವಿದ್ಯಾರ್ಥಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಕುರಿತು ಅಸಹಜ ಸಾವು ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿಯ ಕುಟುಂಬದ ಸದಸ್ಯರು ಅರುಣಾಚಲ ಪ್ರದೇಶದಿಂದ ಆಗಮಿಸಿದ್ದರು. ವಿದ್ಯಾರ್ಥಿಯ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ವಿದ್ಯಾರ್ಥಿಯ ಆತ್ಮಹತ್ಯೆಯ ಬಳಿಕ ಇತರ ವಿದ್ಯಾರ್ಥಿಗಳು ರಿಜಿಸ್ಟ್ರಾರ್ ಅವರ ಅಧಿಕೃತ ನಿವಾಸವನ್ನು ಸುತ್ತುವರೆದಿದ್ದು, ಧರಣಿ ನಡೆಸಿದ್ದರಿಂದ ಕ್ಯಾಂಪಸ್‌ನಲ್ಲಿ ಉದ್ವಿಗ್ನತೆ ಉಲ್ಬಣಗೊಂಡು ವಿದ್ಯಾರ್ಥಿಗಳನ್ನು ಚದುರಿಸಲು ಲಘುವಾಗಿ ಬಲಪ್ರಯೋಗ ಮಾಡಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಆದರೆ ಇಂದು ಹೆಚ್ಚಿನ ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಚಾಚಾರ್ ಜಿಲ್ಲೆಯ ಅಧಿಕಾರಿಗಳು, ಪೊಲೀಸರು ಮತ್ತು ಎನ್‌ಐಟಿ ಸಿಲ್ಚಾರ್‌ನ ಅಧಿಕಾರಿಗಳು ಪರಿಸ್ಥಿತಿಯ ಕುರಿತು ತುರ್ತು ಸಭೆ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಣದವರೆಗೆ ಕಾಲೇಜಿಗೆ ರಜೆ ನೀಡುವಂತೆ ಸೂಚಿಸಲಾಗಿದೆ ಎನ್ನಲಾಗಿದೆ.

ಈ ಕುರಿತು ಧರಣಿ ನಿರತ ವಿದ್ಯಾರ್ಥಿಯೊಬ್ಬರು ಮಾತನಾಡಿದ್ದು, ನಿನ್ನೆ ನಾವು NIT ಸಿಲ್ಚಾರ್ ನಿರ್ದೇಶಕರಿಗಾಗಿ ಇಡೀ ರಾತ್ರಿ ಕಾಯುತ್ತಿದ್ದೆವು, ಆದರೆ ಅವರು ನಮ್ಮನ್ನು ಭೇಟಿ ಮಾಡಲಿಲ್ಲ ಮತ್ತು ನಮ್ಮ ಎಲ್ಲಾ ವಿನಂತಿಗಳನ್ನು ತಿರಸ್ಕರಿಸಿದರು. ಪ್ರತಿದಿನ, ಸಂಸ್ಥೆಯು ವಿದ್ಯಾರ್ಥಿಗಳಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸುತ್ತಿದೆ. ವಿದ್ಯಾರ್ಥಿಗಳು ಅವರ ನಡವಳಿಕೆಯಿಂದ ತೊಂದರೆಗೆ ಒಳಗಾಗುತ್ತಿದ್ದಾರೆ. ಎನ್‌ಐಟಿ ಸಿಲ್ಚಾರ್‌ನ ಆಡಳಿತ ಮಂಡಳಿಯ ಈ ನೀತಿಗಳಿಂದ  ಖಿನ್ನತೆಗೊಳಗಾಗಿ ಇಂದು ಓರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳು ಸಂಸ್ಥೆಯ ನಿರ್ದೇಶಕರನ್ನು ಭೇಟಿಯಾಗಲು ಬಯಸಿದ್ದರು. ಆದರೆ ಅವರು ಅದಕ್ಕೆ ಅವಕಾಶ ನೀಡದೆ ಪೊಲೀಸ್ ಮೂಲಕ  ಲಾಠಿಚಾರ್ಜ್‌ ಮಾಡಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನು ಓದಿ: INDIA ಒಕ್ಕೂಟವು ಯಾವುದೇ ಪತ್ರಕರ್ತರನ್ನು ಬಹಿಷ್ಕರಿಸಿಲ್ಲ: ಪವನ್ ಖೇರಾ ಸ್ಪಷ್ಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಘೋರ ಅಪರಾಧದ ಆರೋಪದ ಹೊರತು ಜಾಮೀನು ರಹಿತ ವಾರಂಟ್‌ ಹೊರಡಿಸಬಾರದು: ಸುಪ್ರೀಂ ಕೋರ್ಟ್‌

0
ಜಾಮೀನು ರಹಿತ ವಾರಂಟ್‌ಗಳನ್ನು ನೀಡುವುದನ್ನು ವಾಡಿಕೆಯಾಗಿರಿಸಿರುವ ಬಗ್ಗೆ ಮೇ 1ರಂದು ನೀಡಿದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಆರೋಪಿಯ ಮೇಲೆ ಘೋರ ಅಪರಾಧದ ಆರೋಪ ಹೊರಿಸದ ಹೊರತು ಜಾಮೀನು ರಹಿತ ವಾರಂಟ್‌ಗಳನ್ನು...