Homeಮುಖಪುಟಬನಾರಸ್‌ ಹಿಂದೂ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡಲಿರುವ ನೀತಾ ಅಂಬಾನಿ!

ಬನಾರಸ್‌ ಹಿಂದೂ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡಲಿರುವ ನೀತಾ ಅಂಬಾನಿ!

- Advertisement -
- Advertisement -

ರಿಲಯನ್ಸ್ ಫೌಂಡೇಶನ್ ಮುಖ್ಯಸ್ಥೆ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಕಾರ್ಯನಿರ್ವಾಹಕ ನಿರ್ದೇಶಕಿ ನೀತಾ ಅಂಬಾನಿ ಶೀಘ್ರದಲ್ಲೇ ಬನಾರಸ್‌ ಹಿಂದೂ ವಿಶ್ವವಿದ್ಯಾಯಲದಲ್ಲಿ ‘ಮಹಿಳಾ ಅಧ್ಯಯನ’ವನ್ನು ಪಾಠ ಮಾಡಲಿದ್ದಾರೆ.

ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ಮತ್ತು ಅಭಿವೃದ್ಧಿ ಕೇಂದ್ರವು ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಲು ಅವರಿಗೆ ಪ್ರಸ್ತಾಪವನ್ನು ಕಳುಹಿಸಿದೆ. ಈ ಪ್ರಸ್ತಾಪಕ್ಕೆ ಅವರು ಮೌಖಿಕ ಒಪ್ಪಿಗೆ ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ಮಾರ್ಚ್ 31ರ ವರೆಗೆ ನಿರ್ಬಂಧ

ಬನಾರಸ್‌ ಹಿಂದೂ ವಿಶ್ವವಿದ್ಯಾಯಲದ ಸಾಮಾಜ ವಿಜ್ಞಾನ ವಿಭಾಗವು ಮಾರ್ಚ್‌ 12 ರಂದು ಪ್ರಸ್ತಾಪವನ್ನು ಸಲ್ಲಿಸಿತ್ತು. ಪ್ರಸ್ತಾಪದಲ್ಲಿ, ಬನಾರಸ್ ಮತ್ತು ಪೂರ್ವಾಂಚಲ್ ಪ್ರದೇಶದ ಮಹಿಳೆಯರ ಜೀವನ ಮಟ್ಟವನ್ನು ಸುಧಾರಿಸಲು ಬೇಕಾಗಿ ವಿಶ್ವವಿದ್ಯಾಲಯಕ್ಕೆ ಸೇರಲು ಕೋರಲಾಗಿದೆ.

ನೀತಾ ಅಂಬಾನಿ ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ಅವರ ಪತ್ನಿಯಾಗಿದ್ದು, ಅವರು ಮುಂಬೈ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಪಡೆದಿದ್ದಾರೆ. 2014 ರಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. 2010 ರಲ್ಲಿ ಅವರು ರಿಲಯನ್ಸ್ ಫೌಂಡೇಶನ್‌ ಅನ್ನು ಪ್ರಾರಂಭಿಸಿದರು.

ವಿಶ್ವವಿದ್ಯಾನಿಲಯದ ಪ್ರಕಾರ, ಅವರು ಮಹಿಳಾ ಉದ್ಯಮಿಯಾದ ಕಾರಣ ನೀತಾ ಅಂಬಾನಿಯನ್ನು ‘ಮಹಿಳಾ ಅಧ್ಯಯನ’ ಬೋಧೀಸುವುದಕ್ಕಾಗಿ ಸಂದರ್ಶಕ ಪ್ರಾಧ್ಯಾಪಕರನ್ನಾಗಿ ಪ್ರಸ್ತಾಪ ಸಲ್ಲಿಸಿದ್ದಾರೆ. ಪ್ರಸ್ತಾಪದ ಪ್ರಕಾರ, ‘ರಿಲಯನ್ಸ್ ಫೌಂಡೇಶನ್ ಪೂರ್ವ ಯುಪಿಯಲ್ಲಿ ಮಹಿಳಾ ಉದ್ಯಮಿಗಳನ್ನು ಉತ್ತೇಜಿಸುತ್ತದೆ. ಅವರಿಗೆ ಉಪನ್ಯಾಸ ನೀಡುವುದರ ಜೊತೆಗೆ ಮಹಿಳೆಯರಿಗೂ ತರಬೇತಿ ನೀಡಲಾಗುತ್ತಿದೆ’.

ಇದನ್ನೂ ಓದಿ: ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ: ಜಗನ್ ಪಕ್ಷಕ್ಕೆ ಭಾರೀ ಮುನ್ನಡೆ

ಮಹಿಳಾ ಕೇಂದ್ರದ ಸಂಯೋಜಕರಾದ ಪ್ರೊ. ನಿಧಿ ಶರ್ಮಾ, “ಹೊಸ ಶಿಕ್ಷಣ ನೀತಿಯ ಪ್ರಕಾರ, ವಿದ್ಯಾರ್ಥಿಗಳನ್ನು ಉದ್ಯೋಗದೊಂದಿಗೆ ಸಂಪರ್ಕ ಏರ್ಪಡಿಸುವುದು ಶಿಕ್ಷಣ ಸಂಸ್ಥೆಗಳ ಉದ್ದೇಶವಾಗಿದೆ, ಇದನ್ನು ನೀತಾ ಅಂಬಾನಿಯ ವ್ಯವಹಾರ ಅನುಭವಗಳ ಮೂಲಕ ಸಾಧಿಸಬಹುದು” ಎಂದು ಹೇಳಿದ್ದಾರೆ.

ಅಂತರರಾಷ್ಟ್ರೀಯ ಮಹಿಳಾ ದಿನದಂದು, ನೀತಾ ಅಂಬಾನಿ ಮಹಿಳೆಯರನ್ನು ಸಬಲೀಕರಣಗೊಳಿಸಲು “ಹರ್ ಸರ್ಕಲ್” ಎಂಬ ಅಂತರ್ಜಾಲ ಮಾಧ್ಯಮ ವೇದಿಕೆಯನ್ನು ಪ್ರಾರಂಭಿಸಿದ್ದರು.

ಸಾಮಾಜ ವಿಜ್ಞಾನ ವಿಭಾಗದ ಡೀನ್ ಪ್ರೊ. ಕೌಶಲ್ ಮಿಶ್ರಾ, ನೀತಾ ಅಂಬಾನಿಯನ್ನು ಸಂದರ್ಶಕ ಪ್ರಾಧ್ಯಾಪಕರಾಗಿ ಇಲಾಖೆಗೆ ಸೇರಲು ಆಹ್ವಾನಿಸಲಾಗಿದೆ. ಇದರಿಂದಾಗಿ ಬಿಎಚ್‌ಯು ಸಂಶೋಧಕರು ಸಹ ಅವರ ಕೆಲಸ ಮತ್ತು ಅನುಭವದಿಂದ ಪ್ರಯೋಜನ ಪಡೆಯಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...