Homeಮುಖಪುಟನೀತಿ ಆಯೋಗದ ಆರೋಗ್ಯ ಸೂಚ್ಯಂಕ: ಕೇರಳಕ್ಕೆ ಅಗ್ರ ಸ್ಥಾನ, ಉತ್ತರ ಪ್ರದೇಶ ಅತೀ ಕಳಪೆ

ನೀತಿ ಆಯೋಗದ ಆರೋಗ್ಯ ಸೂಚ್ಯಂಕ: ಕೇರಳಕ್ಕೆ ಅಗ್ರ ಸ್ಥಾನ, ಉತ್ತರ ಪ್ರದೇಶ ಅತೀ ಕಳಪೆ

- Advertisement -
- Advertisement -

ನೀತಿ ಆಯೋಗ ಬಿಡುಗಡೆ ಮಾಡಿರುವ ಆರೋಗ್ಯ ಸೂಚ್ಯಂಕದ ಪ್ರಕಾರ ಆರೋಗ್ಯ ಸೌಕರ್ಯಗಳ ನಿರ್ವಹಣೆಯಲ್ಲಿ ಕೇರಳ ಮತ್ತೆ ಮೊದಲ ಸ್ಥಾನದಲ್ಲಿದೆ. ಉತ್ತರ ಪ್ರದೇಶ ಅತೀ ಕಳಪೆ ಸಾಧನೆ ಮಾಡಿದ್ದು ಕೊನೆಯ ಸ್ಥಾನದಲ್ಲಿದೆ.

ನಾಲ್ಕನೇ ಆರೋಗ್ಯ ಸೂಚ್ಯಂಕ ಬಿಡುಗಡೆ ಮಾಡಿರುವ ನೀತಿ ಆಯೋಗ, ದೊಡ್ಡ ರಾಜ್ಯಗಳ ಒಟ್ಟಾರೆ ಆರೋಗ್ಯ ಸಾಧನೆಯಲ್ಲಿ ಕೇರಳ ಮತ್ತೆ ಅಗ್ರ ಶ್ರೇಯಾಂಕದ ರಾಜ್ಯವಾಗಿ ಹೊರಹೊಮ್ಮಿದೆ, ಆದರೆ ಉತ್ತರ ಪ್ರದೇಶವು ಅತ್ಯಂತ ಕೆಟ್ಟದಾಗಿದೆ ಎಂದು ತಿಳಿಸಿದೆ. ನಾಲ್ಕನೇ ಸುತ್ತಿನ ಆರೋಗ್ಯ ಸೂಚ್ಯಂಕವು 2019-20 ಅವಧಿಯನ್ನು ಗಣನೆಗೆ ತೆಗೆದುಕೊಂಡಿದೆ.

ಆರೋಗ್ಯದ ಮಾನದಂಡಗಳಲ್ಲಿ ತಮಿಳುನಾಡು ಮತ್ತು ತೆಲಂಗಾಣ ಕ್ರಮವಾಗಿ ಎರಡು ಮತ್ತು ಮೂರನೇ ಅತ್ಯುತ್ತಮ ರಾಜ್ಯಗಳಾಗಿ ಹೊರಹೊಮ್ಮಿವೆ ಎಂದು ಸರ್ಕಾರದ ವರದಿ ತಿಳಿಸಿದೆ.

ಇದನ್ನೂ ಓದಿ: ಉಡುಪಿ ದ್ವೇಷ ಭಾಷಣ: ಬೇಷರತ್‌‌ ಕ್ಷಮೆ ಕೇಳಿದ ತೇಜಸ್ವಿ ಸೂರ್ಯ

ಆದರೂ ಹಿಂದಿನ ವರ್ಷಕ್ಕೆ (2018-19) ಹೋಲಿಸಿಕೊಂಡರೆ ಈ ವರ್ಷಕ್ಕೆ (2019-20) ಆರೋಗ್ಯ ಮೂಲಸೌಕರ್ಯಗಳಲ್ಲಿ ಅತ್ಯಧಿಕ ಬದಲಾವಣೆಯನ್ನು ಮಾಡುವ ಮೂಲಕ ಉತ್ತರ ಪ್ರದೇಶವು ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವಿಷಯದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ವರದಿಯಲ್ಲಿ ಸೇರಿಸಲಾಗಿದೆ.

ಸಣ್ಣ ರಾಜ್ಯಗಳ ಪೈಕಿ, ಮಿಜೋರಾಂ ಒಟ್ಟಾರೆ ಕಾರ್ಯಕ್ಷಮತೆ ಮತ್ತು ಹೆಚ್ಚುತ್ತಿರುವ ಕಾರ್ಯಕ್ಷಮತೆಯಲ್ಲಿ ಅತ್ಯುತ್ತಮ ರಾಜ್ಯವಾಗಿ ಹೊರಹೊಮ್ಮಿದೆ.

ಕೇಂದ್ರಾಡಳಿತ ಪ್ರದೇಶಗಳಲ್ಲಿ, ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರಗಳು ಒಟ್ಟಾರೆ ಆರೋಗ್ಯ ಕಾರ್ಯಕ್ಷಮತೆಯ ವಿಷಯದಲ್ಲಿ ಕಳಪೆಯಾಗಿವೆ. ಆದರೆ, ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವಿಷಯದಲ್ಲಿ ಪ್ರಮುಖ ಪ್ರದೇಶಗಳಾಗಿವೆ ಎಂದು ನೀತಿ ಆಯೋಗದ ವರದಿ ತಿಳಿಸಿದೆ.

ನೀತಿ ಆಯೋಗ ಬಿಡುಗಡೆ ಮಾಡಿರುವ ವರದಿಯನ್ನು ವಿಶ್ವಬ್ಯಾಂಕ್‌ನ ತಾಂತ್ರಿಕ ನೆರವಿನೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಹಯೋಗದೊಂದಿಗೆ ಸಿದ್ಧಪಡಿಸಲಾಗಿದೆ.


ಇದನ್ನೂ ಓದಿ: ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು: ‘ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ’ಎಂದು ಎಚ್‌ಡಿಕೆ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಚುನಾವಣಾ ಆಯೋಗ

0
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್‌ನ್ನು ದಾಖಲಿಸಿದೆ. ಈ ಕುರಿತು ಚುನಾವಣಾ ಆಯೋಗ...