Homeಮುಖಪುಟಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೆಡಿಯು ಶಾಸಕರು ಮತ್ತು ಸಂಸದರ ಸಭೆಯನ್ನು ಮಂಗಳವಾರ ಕರೆದಿದ್ದು, ಮಿತ್ರ ಪಕ್ಷ ಬಿಜೆಪಿಯೊಂದಿಗೆ ಹೆಚ್ಚುತ್ತಿರುವ ಬಿಕ್ಕಟ್ಟು ಮತ್ತೊಂದು ಹಂತಕ್ಕೆ ಮುಟ್ಟುವ ಸಾಧ್ಯತೆಗಳನ್ನು ರಾಜಕೀಯ ವಿಶ್ಲೇಷಣೆಗಳು ಹೇಳುತ್ತಿವೆ.

ಬಿಹಾರದಲ್ಲಿ ಜನತಾ ದಳ (ಯುನೈಟೆಡ್) ಅಥವಾ ಜೆಡಿಯು ಮೈತ್ರಿಕೂಟದ ಪಾಲುದಾರಿಕೆ ಹೊಂದಿರುವ ಬಿಜೆಪಿಯೊಂದಿಗೆ ನಿತೀಶ್‌‌ ಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಿತ್ರಪಕ್ಷಗಳ ಮಾತಿಗೆ ಬೆಲೆ ಕೊಡುತ್ತಿಲ್ಲ ಎಂಬುದು ಬಿಕ್ಕಟ್ಟಿಗೆ ಕಾರಣವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆಡಿಯು ತೊರೆದಿರುವ ಆರ್‌ಸಿಪಿ ಸಿಂಗ್‌ಗೆ ರಾಜ್ಯಸಭಾ ಸ್ಥಾನವನ್ನು ನೀಡಬಾರದೆಂದು ಜೆಡಿಯು ಆಗ್ರಹಿಸಿತು. ಆರ್‌ಸಿಪಿ ಸಿಂಗ್ ಅವರು ಕಳೆದ ವರ್ಷ ನಿತೀಶ್‌ಕುಮಾರ್‌ ಅವರನ್ನು ಸಂಪರ್ಕಿಸದೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸ್ಥಾನ ಪಡೆದಿದ್ದರು. ರಾಜ್ಯಸಭೆಯ ವಿಚಾರವಾಗಿ ಜೆಡಿಯುಗೆ ಆರ್‌ಸಿಪಿ ಸಿಂಗ್‌ ವಿದಾಯ ಹೇಳಿದ್ದರು.

“ನಾನು ಕೇಂದ್ರ ಸಚಿವನಾಗಿದ್ದಕ್ಕೆ ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿ ಸಿಂಗ್ ಆರೋಪಿಸಿದ್ದಾರೆ.

“ಅಸೂಯೆಗೆ ಚಿಕಿತ್ಸೆ ಇಲ್ಲ ಎಂದು ಹೇಳುತ್ತೇನೆ. ನಿತೀಶ್ ಕುಮಾರ್ ಅವರು ತಮ್ಮ ಏಳೇಳು ಜನ್ಮದಲ್ಲೂ ಪ್ರಧಾನಿಯಾಗುವುದಿಲ್ಲ, ಜೆಡಿಯು ಮುಳುಗುವ ಹಡಗು” ಎಂದು ಟೀಕಿಸಿದ್ದಾರೆ.

ತಮ್ಮ ಮೇಲೆ ಸಿಂಗ್ ಮಾಡಿರುವ ಆರೋಪಗಳಿಗೆ ಉತ್ತರಿಸಲು ನಿತೀಶ್‌ ಅವರು ಜೆಡಿಯು ಪಕ್ಷದ ಉನ್ನತ ನಾಯಕರನ್ನು ಕಳುಹಿಸಿದ್ದಾರೆ. ರಾಜಕೀಯ ಕದನಕ್ಕೆ ಕುಟುಂಬವನ್ನು ಎಳೆದು ತಂದಿರುವುದು ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಅವರು ಆರ್‌ಸಿಪಿ ಸಿಂಗ್ ಅವರ ವಿರುದ್ಧ ಹರಿಹಾಯ್ದಿದ್ದಾರೆ.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು” ಎಂದು ರಾಜೀವ್ ರಂಜನ್ ಸುದ್ದಿಗಾರರಿಗೆ ತಿಳಿಸಿದರು. “ಜೆಡಿಯು ಮುಂದಿನ ದಿನಗಳಲ್ಲಿಯೂ ಕೇಂದ್ರ ಸಚಿವ ಸಂಪುಟಕ್ಕೆ ಸೇರುವುದಿಲ್ಲ” ಎಂದು ಹೇಳಿರುವುದು, “ಸರಿಪಡಿಸಲಾಗದ ರಾಜಕೀಯ ಬಿರುಕು” ಎಂದೇ ಊಹಿಸಲಾಗುತ್ತಿದೆ.

ರಾಜೀವ್ ರಂಜನ್ ಅವರಂತಹ ನಿತೀಶ್‌ ಕುಮಾರ್‌ ಅವರ ಆಪ್ತರ ಪ್ರತಿಕ್ರಿಯೆಯು ಹಲವು ರಾಜಕೀಯ ಲೆಕ್ಕಾಚಾರಕ್ಕೆ ಅವಕಾಶ ನೀಡಿದೆ. ಮುಖ್ಯಮಂತ್ರಿಯವರ ಬೇಡಿಕೆಗಳಿಗೆ ಮಣಿಯಲು ಬಿಜೆಪಿಯ ಮೇಲೆ ಒತ್ತಡ ಹೇರುವ ತಂತ್ರವೂ ಇದೆಂದು ವಿಶ್ಲೇಷಿಸಲಾಗುತ್ತಿದೆ.

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಪದಚ್ಯುತಗೊಳಿಸಬೇಕೆಂಬ ಒತ್ತಡವೂ ಈ ತಂತ್ರಗಾರಿಕೆಯಲ್ಲಿದೆ. ಸಿನ್ಹಾ ಅವರು ಅಧಿಕಾರದಲ್ಲಿ ಮುಂದುವರಿಯುವುದು ನಿತೀಶ್ ಕುಮಾರ್ ಅವರಿಗೆ ಇಷ್ಟವಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ರಹಸ್ಯವಾಗಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್‌, ಕಳೆದ ವಾರ ನಡೆದ ನೀತಿ ಆಯೋಗ್‌ನ ಸಭೆಗೆ ಹೋಗಲಿಲ್ಲ. ಆರೋಗ್ಯ ಸಮಸ್ಯೆಯ ಕಾರಣಗಳನ್ನು ಹೇಳಿ ದೂರ ಉಳಿದಿದ್ದರು. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ 23 ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಗೈರುಹಾಜರಿಯ ಮೂಲಕ ನಿತೀಶ್‌ ತಮ್ಮ ಕೋಪವನ್ನು ಹೊರಹಾಕಿದ್ದರು.

ಇದನ್ನೂ ಓದಿರಿ: ಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ…

ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯಲು ಮೋದಿ ಸರ್ಕಾರದೊಂದಿಗೆ ನೇರವಾಗಿ ಮಾತುಕತೆ ನಡೆಸಿರುವ ಆರೋಪವನ್ನು ಸಿಂಗ್ ನಿರಾಕರಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿತೀಶ್ ಅವರೊಂದಿಗೆ ಮಾತನಾಡಿದ್ದಾರೆ. ನಿತೀಶ್ ಅವರ ಶರತ್ತಿನ ಮೇಲೆ ನನಗೆ ಅವಕಾಶ ನೀಡಲಾಯಿತು ಎಂದು ಪ್ರತಿಪಾದಿಸಿದ್ದಾರೆ.

ಆಸ್ತಿ ವ್ಯವಹಾರಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಜೆಡಿಯು ಆರೋಪಗಳನ್ನು ಸಿಂಗ್ ನಿರಾಕರಿಸಿದ್ದಾರೆ. “ಈ ಆಸ್ತಿಗಳು ನನ್ನ ಪತ್ನಿ ಮತ್ತು ಇತರ ಅವಲಂಬಿತರಿಗೆ ಸೇರಿದ್ದು, ಅವರು 2010ರಿಂದಲೂ ತೆರಿಗೆ ಪಾವತಿಸುತ್ತಿದ್ದಾರೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...