Homeಕರ್ನಾಟಕಬಿಹಾರ: 125 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದ ನಿತೀಶ್ ಕುಮಾರ್ : ಚುನಾವಣೆಗೆ ಮುನ್ನ ಮತದಾರರ...

ಬಿಹಾರ: 125 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದ ನಿತೀಶ್ ಕುಮಾರ್ : ಚುನಾವಣೆಗೆ ಮುನ್ನ ಮತದಾರರ ಓಲೈಕೆ?

- Advertisement -
- Advertisement -

ಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹತ್ವದ ಚುನಾವಣಾ ಅಸ್ತ್ರವನ್ನು ಪ್ರಯೋಗಿಸಿದ್ದಾರೆ. ರಾಜ್ಯದ ಎಲ್ಲಾ ಮನೆಗಳಿಗೆ 125 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಗುರುವಾರ ಘೋಷಿಸಿದ್ದು, ಇದು 1.67 ಕೋಟಿ ಕುಟುಂಬಗಳಿಗೆ ಆಗಸ್ಟ್ 1 ರಿಂದಲೇ ಅನ್ವಯಿಸಲಿದೆ.

ಜುಲೈ ಬಿಲ್‌ನಿಂದಲೇ, ರಾಜ್ಯದ ಎಲ್ಲ ಗೃಹಬಳಕೆ ಗ್ರಾಹಕರು 125 ಯೂನಿಟ್‌ಗಳವರೆಗಿನ ವಿದ್ಯುತ್‌ಗೆ ಯಾವುದೇ ಹಣವನ್ನು ಪಾವತಿಸಬೇಕಾಗಿಲ್ಲ ಎಂದು ನಾವು ಈಗ ನಿರ್ಧರಿಸಿದ್ದೇವೆ ಎಂದು ಬಿಹಾರ ಮುಖ್ಯಮಂತ್ರಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರ “200 ಯೂನಿಟ್ ಉಚಿತ ವಿದ್ಯುತ್” ಭರವಸೆಗೆ ಪ್ರತಿಯಾಗಿ ನಿತೀಶ್‌ರ ಈ ಘೋಷಣೆ ಬಂದಿದೆ.

ನಿತೀಶ್ ಕುಮಾರ್ ಅವರು “ಒಂದು ದೇಶ, ಒಂದು ಸುಂಕ” ನೀತಿಯ ಬಲವಾದ ಪ್ರತಿಪಾದಕರಾಗಿದ್ದು, ಪ್ರಸ್ತುತ ಬಿಹಾರವು ಗ್ರಿಡ್‌ನಿಂದ ದುಬಾರಿ ದರದಲ್ಲಿ ವಿದ್ಯುತ್ ಪಡೆಯುತ್ತಿದೆ ಎಂದು ವಾದಿಸುತ್ತಾರೆ.

ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಮುಂದಿನ ಮೂರು ವರ್ಷಗಳಲ್ಲಿ ಸೌರಶಕ್ತಿಯ ಮೂಲಕ 10,000 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಅವರು ಹಂಚಿಕೊಂಡಿದ್ದಾರೆ.

ಸರ್ಕಾರಿ ಅನುದಾನಿತ ‘ಕುಟೀರ್ ಜ್ಯೋತಿ ಯೋಜನೆ’ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಬಡವರ ಮನೆಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಯೋಜನೆ ಜಾರಿಯಲ್ಲಿದೆ.

ಈ ಘೋಷಣೆಯು ರಾಜ್ಯದ ಒಟ್ಟು 1 ಕೋಟಿ 67 ಲಕ್ಷ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿತೀಶ್‌ ಕುಮಾರ್‌ ಹೇಳಿದ್ದಾರೆ.

ಬಿಹಾರದಲ್ಲಿ ತಿಂಗಳಿಗೆ 400 ರೂ. ಪಿಂಚಣಿ ಪಡೆಯುವ ಸುಮಾರು 1.1 ಕೋಟಿ ಪಿಂಚಿಣಿದಾರರಿದ್ದಾರೆ. ಈಗ ಇವರ ಪಿಂಚಣಿಯನ್ನು ಮೂರು ಪಟ್ಟು ಅಂದರೆ 1,100 ರೂ.ಗೆ ಹೆಚ್ಚಳ ಮಾಡಿ ವಾರದ ಹಿಂದಷ್ಟೇ ಘೋಷಣೆ ಮಾಡಲಾಗಿದೆ. ಈ ಘೋಷಣೆ ನಂತರ ಈ ಉಚಿತ ವಿದ್ಯುತ್ ಘೋಷಣೆ ಹೊರಬಿದ್ದಿದೆ.

ದಮ್ಮು, ತಾಕತ್ ಇದ್ದರೆ ದಲಿತ ಗೋವಿಂದ ಕಾರಜೋಳ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿ: ವಿಜಯೇಂದ್ರಗೆ ಸಿದ್ದರಾಮಯ್ಯ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...