Homeಮುಖಪುಟಸೋನಿಯಾ ಗಾಂಧಿ ಭೇಟಿಯಾಗಲಿರುವ ನಿತೀಶ್ ಕುಮಾರ್, ಲಾಲು ಯಾದವ್; 2024 ರ ಚುನಾವಣೆಗೆ ಮಹಾಮೈತ್ರಿ?

ಸೋನಿಯಾ ಗಾಂಧಿ ಭೇಟಿಯಾಗಲಿರುವ ನಿತೀಶ್ ಕುಮಾರ್, ಲಾಲು ಯಾದವ್; 2024 ರ ಚುನಾವಣೆಗೆ ಮಹಾಮೈತ್ರಿ?

- Advertisement -
- Advertisement -

ಬಿಹಾರ ಮಹಾಮೈತ್ರಿಕೂಟದ ಇಬ್ಬರು ಉನ್ನತ ನಾಯಕರಾದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳದ ಲಾಲು ಯಾದವ್ ಅವರು ಭಾನುವಾರ ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ಆರು ವರ್ಷಗಳ ನಂತರ ಇದು ಅವರ ಮೊದಲ ಭೇಟಿಯಾಗಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿ ಕೂಡಾ ಹಾಜರಾಗಬೇಕು ಎಂದು ಅವರಿಬ್ಬರೂ ಆಶಿಸಿದ್ದರು ಎಂದು ಮೂಲಗಳು ತಿಳಿಸಿವೆ. ಆದರೆ ಭಾರತ್‌ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವ ರಾಹುಲ್‌ ಗಾಂಧಿಯವರು ಕೇರಳದಲ್ಲಿದ್ದು, ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿತೀಶ್ ಕುಮಾರ್ ಮತ್ತು ಸೋನಿಯಾ ಗಾಂಧಿ ಅವರು 2015 ರ ಬಿಹಾರ ಚುನಾವಣೆಯ ಮೊದಲು ರಂಜಾ‌ನ್‌ನ ಇಫ್ತಾರ್‌ನಲ್ಲಿ ಕೊನೆಯ ಬಾರಿ ಭೇಟಿಯಾಗಿದ್ದರು.

ಈ ತಿಂಗಳ ಆರಂಭದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರು ತಮ್ಮ ದೆಹಲಿ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದರು. ಆ ಸಮಯದಲ್ಲಿ ಸೋನಿಯಾ ಗಾಂಧಿ ವೈದ್ಯಕೀಯ ಚಿಕಿತ್ಸೆಗಾಗಿ ವಿದೇಶದಲ್ಲಿದ್ದರು.

ಇದನ್ನೂ ಓದಿ: ದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

ಲಾಲೂ ಪ್ರಸಾದ್‌ ಯಾದವ್‌ ಅವರು ಮೇವು ಹಗರಣದ ಪ್ರಕರಣಗಳಲ್ಲಿ 2018 ರಲ್ಲಿ ಜೈಲು ಪಾಲಾಗಿದ್ದರು. ಅನಾರೋಗ್ಯದ ಜಾಮೀನಿನ ಮೇಲೆ ಹೊರಗಿರುವ ಅವರು ಮುಂಬರುವ ವಾರಗಳಲ್ಲಿ ಮೂತ್ರಪಿಂಡ ಕಸಿಗಾಗಿ ಸಿಂಗಾಪುರಕ್ಕೆ ಹೋಗಲಿದ್ದಾರೆ.

ಸೋನಿಯಾ ಗಾಂಧಿಯನ್ನು ಬಿಹಾರದ ಇಬ್ಬರು ಪ್ರಮುಖ ರಾಜಕೀಯ ನಾಯಕರ ಭೇಟಿಯನ್ನು ಸೌಜನ್ಯದ ಭೇಟಿ ಎಂದು ಮೂಲಗಳು ಸೂಚಿಸಿದರೆ, ಮಹಾಮೈತ್ರಿಕೂಟವನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವುದು ಸೇರಿದಂತೆ ಕೆಲವು ಗಂಭೀರ ವಿಷಯಗಳ ಚರ್ಚೆ ನಡೆಯುವ ಸಾಧ್ಯತೆಯು ಇದೆ ಎಂದು ವರದಿಯಾಗಿದೆ.

ರಾಷ್ಟ್ರಮಟ್ಟದಲ್ಲಿ ಮಹಾಮೈತ್ರಿಕೂಟದ ಸಾಧ್ಯತೆಯನ್ನು ಬಿಹಾರದ ನಾಯಕರು ಪರಿಶೋಧಿಸುತ್ತಿದ್ದು, ವಿಶೇಷವಾಗಿ 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ವಿರುದ್ಧದ ಒಗ್ಗಟ್ಟಿನ ರಂಗಕ್ಕೆ ವಿರೋಧ ಪಕ್ಷವನ್ನು ಹೆಣೆಯುವಲ್ಲಿ ನಿತೀಶ್‌ ಕುಮಾರ್ ಕೆಲಸ ಮಾಡುತ್ತಿದ್ದಾರೆ.

ಕಾಂಗ್ರೆಸ್ ತನ್ನ ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಿದ್ಧತೆ ನಡೆಸುತ್ತಿರುವ ನಡುವೆ ಈ ಭೇಟಿ ನಡೆಯುತ್ತಿದೆ. ಗುರುವಾರದಿಂದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಇದನ್ನೂ ಓದಿ: ‘ಕಾಂಗ್ರೆಸ್ ಇನ್ನೂ ದೊಡ್ಡ ಪಕ್ಷ’: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌

ಆರಂಭದಲ್ಲಿ ಕೇರಳ ಸಂಸದ ಶಶಿ ತರೂರ್ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಡುವೆ ನಡೆಯಬಹುದೆಂದು ನಿರೀಕ್ಷಿಸಲಾದ ಸ್ಪರ್ಧೆಯು, ಇದೀಗ ಬಹುಕೋನ ಸ್ಪರ್ಧೆ ನಡೆಯುವ ಸಾಧ್ಯತೆ ಇರಬಹುದು ಎನ್ನಲಾಗಿದ್ದು, ಪಕ್ಷದ ಮತ್ತೊಬ್ಬ ನಾಯಕ ಮನೀಶ್ ತಿವಾರಿ ಹಾಗೂ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಸೇರಿದಂತೆ ಹಲವಾರು ನಾಯಕರು ಆಸಕ್ತಿ ವ್ಯಕ್ತಪಡಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬಿಹಾರದಲ್ಲಿ ಜೆಡಿಯು ಮುಖಂಡನ ಗುಂಡಿಟ್ಟು ಹತ್ಯೆ: ಭುಗಿಲೆದ್ದ ಪ್ರತಿಭಟನೆ

0
ಜೆಡಿಯು ಯುವ ಮುಖಂಡನನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ  ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಸೌರಭ್ ಕುಮಾರ್ ಹತ್ಯೆಗೀಡಾದ ಜೆಡಿಯು ಯುವ ಮುಖಂಡ....