Homeಮುಖಪುಟಬಿಹಾರ ಚುನಾವಣೆಯ ನಂತರ ನಿತೀಶ್ ಕುಮಾರ್ ಮತ್ತೆ ಪಕ್ಷ ಬದಲಾಯಿಸಬಹುದು: ಪ್ರಶಾಂತ್ ಕಿಶೋರ್

ಬಿಹಾರ ಚುನಾವಣೆಯ ನಂತರ ನಿತೀಶ್ ಕುಮಾರ್ ಮತ್ತೆ ಪಕ್ಷ ಬದಲಾಯಿಸಬಹುದು: ಪ್ರಶಾಂತ್ ಕಿಶೋರ್

- Advertisement -
- Advertisement -

ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಲಿದ್ದಾರೆ. ಆದರೆ, ನಂತರ ಪಕ್ಷ ಬದಲಾಯಿಸಬಹುದು, ಅವರು ಮತ್ತೆ ಮುಖ್ಯಮಂತ್ರಿಯಾಗುವ ಭರವಸೆಯಲ್ಲಿದ್ದಾರೆ ಎಂದು ಚುನಾವಣಾ ತಂತ್ರಜ್ಞ ಹಾಗೂ ರಾಜಕಾರಣಿ ಪ್ರಶಾಂತ್ ಕಿಶೋರ್ ಬುಧವಾರ ಹೇಳಿದ್ದಾರೆ.

ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜನ ಸುರಾಜ್ ಪಕ್ಷದ ಸಂಸ್ಥಾಪಕ, “74 ವರ್ಷದ ನಾಯಕ ಯಾವ ಮೈತ್ರಿಕೂಟದ ಭಾಗವಾದರೂ ಪರವಾಗಿಲ್ಲ” ಎಂದು ಪ್ರತಿಪಾದಿಸಿದರು.

“ನವೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ಮುಗಿದ ನಂತರ, ನಿತೀಶ್ ಕುಮಾರ್ ಹೊರತುಪಡಿಸಿ ಯಾರಾದರೂ ಮುಖ್ಯಮಂತ್ರಿಯಾಗಬಹುದು. ನೀವು ಅದನ್ನು ನನ್ನಿಂದ ಲಿಖಿತವಾಗಿ ಪಡೆಯಬಹುದು. ನಾನು ತಪ್ಪು ಎಂದು ಸಾಬೀತಾದರೆ, ನಾನು ನನ್ನ ರಾಜಕೀಯ ಪ್ರಚಾರವನ್ನು ತ್ಯಜಿಸುತ್ತೇನೆ” ಎಂದು ಕಿಶೋರ್ ಹೇಳಿದರು.

ವಿಧಾನಸಭಾ ಚುನಾವಣೆಗೆ ಮುನ್ನ ಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲು ಹಿಂಜರಿಯುತ್ತಿರುವುದನ್ನು ಪರಿಗಣಿಸಿ, “ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಾರೆ. 2015 ರ ಚುನಾವಣೆಗಳನ್ನು ಹೊರತುಪಡಿಸಿ, ನಾನು ಅವರ ಪ್ರಚಾರವನ್ನು ನಿರ್ವಹಿಸಿದ್ದಾಗಲೂ ಅವರು ಹಾಗೆ ಮಾಡುತ್ತಲೇ ಬಂದಿದ್ದಾರೆ” ಎಂದು ಪ್ರಶಾಂತ್ ಕಿಶೋರ್ ಹೇಳಿದರು.

ನಿತೀಶ್ ಕುಮಾರ್ ಅವರ ಜನಪ್ರಿಯತೆ ಕಡಿಮೆಯಾಗುತ್ತಿರುವುದರಿಂದ ಅವರನ್ನು ಎನ್‌ಡಿಎಯ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಲು ಬಿಜೆಪಿ ಎಚ್ಚರದಿಂದಿತ್ತು ಎಂದು ಕಿಶೋರ್ ಹೇಳಿದ್ದಾರೆ.

“ಚುನಾವಣೆಯ ನಂತರ (ಎನ್‌ಡಿಎ ಅಧಿಕಾರಕ್ಕೆ ಬಂದರೆ) ನಿತೀಶ್ ಕುಮಾರ್ ಐದು ವರ್ಷಗಳ ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಘೋಷಿಸಲು ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸವಾಲು ಹಾಕುತ್ತೇನೆ. ಅವರು ಹಾಗೆ ಮಾಡಿದರೆ, ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದು ಕಷ್ಟವಾಗುತ್ತದೆ” ಎಂದು ಕಿಶೋರ್ ಹೇಳಿದರು.

ನಿತೀಶ್ ಕುಮಾರ್ ಅವರೊಂದಿಗಿನ ಜಗಳದಿಂದ 2020 ರಲ್ಲಿ ಪಕ್ಷದಿಂದ ಹೊರಹಾಕಲ್ಪಟ್ಟ ಮಾಜಿ ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷರು, ಆಡಳಿತ ಪಕ್ಷವು ತುಂಬಾ ಕೆಟ್ಟದಾಗಿದೆ ಎಂದು ಹೇಳಿಕೊಂಡಿದ್ದಾರೆ.

“ಬಿಜೆಪಿ ಮತ್ತೊಂದು ಅವಧಿಗೆ ನಿತೀಶ್ ಕುಮಾರ್ ಅವರನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟವಾದ ನಂತರ ನಿತೀಶ್ ಕುಮಾರ್ ಪಕ್ಷ ಬದಲಾಯಿಸಲು ಪ್ರಯತ್ನಿಸಬಹುದು. ಆದರೆ, ಜೆಡಿಯು ಗೆದ್ದ ಸ್ಥಾನಗಳ ಸಂಖ್ಯೆ ತುಂಬಾ ಕಳಪೆಯಾಗಿದ್ದು, ಅವರು ಯಾವುದೇ ಪಕ್ಷಕ್ಕೆ ಸೇರಿದರೂ ಅವರಿಗೆ ಉನ್ನತ ಹುದ್ದೆ ಸಿಗುವುದಿಲ್ಲ” ಎಂದು ಕಿಶೋರ್ ಭವಿಷ್ಯ ನುಡಿದರು.

“70 ವರ್ಷದ ಮುಖ್ಯಮಂತ್ರಿ ದೈಹಿಕವಾಗಿ ದಣಿದಿದ್ದಾರೆ, ಮಾನಸಿಕವಾಗಿ ನಿವೃತ್ತರಾಗಿದ್ದಾರೆ” ಎಂದು ಪ್ರಶಾಂತ್ ಆರೋಪಿಸಿದರು.

“ನಾನಲ್ಲ, ಆದರೆ ದಿವಂಗತ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ನಿತೀಶ್ ಕುಮಾರ್ ಗಂಭೀರ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದರು. ಒಂದು ಕಾಗದದ ತುಣುಕನ್ನು ನೋಡದೆ, ಅವರ ಸಂಪುಟದಲ್ಲಿರುವ ಸಚಿವರ ಹೆಸರುಗಳನ್ನು ಉಚ್ಚರಿಸುವಂತೆ ನಾನು ಬಹಳ ಸಮಯದಿಂದ ಅವರಿಗೆ ಸವಾಲು ಹಾಕುತ್ತಿದ್ದೇನೆ. ಅಧಿಕಾರಿಗಳ ಪ್ರೇರಣೆಯ ಹೊರತು ಅವರು ಪ್ರವಾಸ ಮಾಡುತ್ತಿರುವ ಜಿಲ್ಲೆಯ ಹೆಸರನ್ನು ಹೇಳಲು ಸಾಧ್ಯವಿಲ್ಲ. ಅಂತಹ ಮನಸ್ಥಿತಿಯೊಂದಿಗೆ ಅವರು ಬಿಹಾರವನ್ನು ಆಳುತ್ತಿರುವುದು ದುರದೃಷ್ಟಕರ” ಎಂದು ಗಂಭೀರ ಆರೋಪ ಮಾಡಿದ್ದಾರೆ.

“ಕಳೆದ ವರ್ಷ ಹೊಸ ಕೇಂದ್ರ ಸರ್ಕಾರ ಪ್ರಮಾಣವಚನ ಸ್ವೀಕರಿಸುವಾಗ, ಇತರ ಅನೇಕ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ, ನಿತೀಶ್ ಕುಮಾರ್ ಅವರು ಮೋದಿಯ ಪಾದಗಳನ್ನು ಮುಟ್ಟುವ ಮೂಲಕ ಬಿಹಾರಕ್ಕೆ ಅಪಖ್ಯಾತಿ ತಂದಿದ್ದಾರೆ” ಎಂದು ಅವರು ಸಮರ್ಥಿಸಿಕೊಂಡರು.

“ಅವರಿಗೆ ಪ್ರಧಾನಿ ಮೇಲೆ ಅಷ್ಟೊಂದು ಗೌರವವಿದ್ದರೆ, ಅವರು ಖಾಸಗಿಯಾಗಿ ಅವರ ಪಾದ ಮುಟ್ಟಬಹುದಿತ್ತು. ಆದರೆ, ಅವರು ಕುರ್ಚಿಯಲ್ಲಿಯೇ ಉಳಿಯಲು ಮಾತ್ರ ಮುಖಸ್ತುತಿ ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಅಧಿಕಾರದಲ್ಲಿ ಉಳಿಯಲು ಜೆಡಿ(ಯು) ಬೆಂಬಲವನ್ನು ಅವಲಂಬಿಸಿರುವ ಬಿಜೆಪಿಯೊಂದಿಗಿನ ತಮ್ಮ ಪ್ರಭಾವವನ್ನು ಬಳಸಿಕೊಂಡು ಬಿಹಾರದಲ್ಲಿ ನಶಿಸಿ ಹೋಗಿರುವ ಸಕ್ಕರೆ ಉದ್ಯಮವನ್ನು ಪುನರುಜ್ಜೀವನಗೊಳಿಸಲು ಅವರು ಏಕೆ ಬಳಸುವುದಿಲ್ಲ” ಎಂದು ಅವರು ಪ್ರಶ್ನಿಸಿದರು.

ನಿತೀಶ್ ಕುಮಾರ್ ಮತ್ತು ಅವರ ಬದ್ಧವೈರಿ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ದಶಕಗಳಿಂದ ಒತ್ತೆಯಾಳುಗಳಾಗಿರಿಸಿಕೊಂಡಿರುವ ರಾಜಕೀಯ ಹಳಿಯಿಂದ ಬಿಹಾರವನ್ನು ಹೊರತರಲು ಜನ ಸುರಾಜ್ ಪಕ್ಷವು ಕಣಕ್ಕೆ ಇಳಿಯಲಿದೆ ಎಂದು ಅವರು ಹೇಳಿದರು.

ಆರ್‌ಜೆಡಿ ಹಲವು ವರ್ಷಗಳಿಂದ ಅಧಿಕಾರದಲ್ಲಿ ಉಳಿಯಲು ಸಹಾಯ ಮಾಡಿದ ಬಿಜೆಪಿ ಮತ್ತು ಕಾಂಗ್ರೆಸ್, ಬಿಹಾರದ ದುಃಸ್ಥಿತಿಗೆ ಹೊಣೆಯಾಗಿದೆ ಎಂದು ಅವರು ಆರೋಪಿಸಿದರು.

ರಾಜ್ಯದ ಬಹು ಪ್ರಚಾರ ಪಡೆದ ಮದ್ಯ ನಿಷೇಧ ನೀತಿಯನ್ನು ಟೀಕಿಸಿದ ಕಿಶೋರ್, ಬಿಹಾರದಲ್ಲಿ ಮದ್ಯ ನಿಷೇಧವು ಬಿಜೆಪಿಯ ದ್ವಂದ್ವತೆಗೆ ಮತ್ತೊಂದು ಉದಾಹರಣೆಯಾಗಿದೆ ಎಂದು ಹೇಳಿದರು.

“ಬಿಜೆಪಿ ಪಕ್ಕದ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಮತ್ತು ಅದರ ಆಳ್ವಿಕೆಯಲ್ಲಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳನ್ನು ಇದೇ ರೀತಿ ಘೋಷಿಸಲು ಏಕೆ ಕೇಳುವುದಿಲ್ಲ? ಇತರ ರಾಜ್ಯಗಳಲ್ಲಿ, ಅವರು ಬೆಳವಣಿಗೆ ಮತ್ತು ಹೂಡಿಕೆಗಳ ಬಗ್ಗೆ ಮಾತನಾಡುತ್ತಿದ್ದಾರೆ. ಬಿಹಾರದಲ್ಲಿ, ಐದು ಕೆಜಿ ಉಚಿತ ಪಡಿತರ ಮತ್ತು ಮದ್ಯ ನಿಷೇದಕ್ಕಿಂತ ಇನ್ನೇನೂ ಅಗತ್ಯವಿಲ್ಲ ಎಂದು ಅವರು ಭಾವಿಸುತ್ತಾರೆ” ಎಂದು ಅವರು ಹೇಳಿದರು.

ವಕ್ಫ್‌ ವಿವಾದ| ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೋರಾಟಕ್ಕೆ ಪ್ರತಿಯಾಗಿ ಹಿಂದುತ್ವ ಗುಂಪಿನಿಂದ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...