Homeಮುಖಪುಟ10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ

10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಗುರುವಾರ (ನವೆಂಬರ್ 20) ದಾಖಲೆಯ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರು ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಬೋಧಿಸಿದರು. 2005, 2010 ಮತ್ತು 2015ರಲ್ಲಿ ಕೂಡ ಇದೇ ಮೈದಾನದಲ್ಲಿ ನಿತೀಶ್ ಕುಮಾರ್ ಪ್ರಮಾನವಚನ ಸ್ವೀಕರಿಸಿದ್ದರು.

1974ರಲ್ಲಿ ಜಯಪ್ರಕಾಶ್ ನಾರಾಯಣ್ ಅವರು ‘ಸಂಪೂರ್ಣ ಕ್ರಾಂತಿ’ಗೆ ಕರೆ ನೀಡಿದ್ದು ಇದೇ ಸ್ಥಳದಲ್ಲಾಗಿತ್ತು.

ನಿತೀಶ್ ಕುಮಾರ್ ಜೊತೆ ಹಿರಿಯ ಬಿಜೆಪಿ ನಾಯಕರಾದ ವಿಜಯ್ ಕುಮಾರ್ ಸಿನ್ಹಾ ಮತ್ತು ಸಾಮ್ರಾಟ್ ಚೌಧರಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚೌಧರಿ ಮತ್ತು ಸಿನ್ಹಾ, ಈ ಹಿಂದಿನ ಎನ್‌ಡಿಎ ಸರ್ಕಾರದಲ್ಲಿ ಕೂಡ ಉಪ ಮುಖ್ಯಮಂತ್ರಿಗಳಾಗಿದ್ದರು.

ವಿಧಾನಪರಿಷತ್ ಸದಸ್ಯರಾದ ನಿತೀಶ್ ಕುಮಾರ್ ಅವರ ಅತ್ಯಂತ ವಿಶ್ವಾಸಾರ್ಹ ಸಹಾಯಕ ಹಾಗೂ ಜೆಡಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಶೋಕ್ ಚೌಧರಿ, ಬಿಹಾರ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ ಪಕ್ಷದ ಮುಖ್ಯಸ್ಥ ಸಂತೋಷ್ ಕುಮಾರ್ ಸುಮನ್ ಅವರು ಹೊಸ ಸಂಪುಟ ಸೇರಿದ್ದಾರೆ.

ಜಮುಯಿಯಿಂದ ಸತತ ಎರಡನೇ ಅವಧಿಗೆ ಆಯ್ಕೆಯಾದ ಪ್ರಶಸ್ತಿ ವಿಜೇತ ಶೂಟರ್ ಶ್ರೇಯಸಿ ಸಿಂಗ್ ಅವರು ಹೊಸ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.

ಮುಝಫ್ಫರ್‌ಪುರದ ಮಾಜಿ ಸಂಸದ ಅಜಯ್ ನಿಶಾದ್ ಅವರ ಪತ್ನಿ ರಮಾ ನಿಶಾದ್ ಅವರಿಗೆ ನೂತನ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ಇವರು ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಗೆ ಸೇರಿ ಔರೈ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

ಜೆಡಿ(ಯು)ನಿಂದ ಒಂಬತ್ತನೇ ಬಾರಿಗೆ ಶಾಸಕರಾಗಿ ಆಯ್ಕೆಯಾರುವ ಬಿಜೇಂದ್ರ ಪ್ರಸಾದ್ ಯಾದವ್ ಅವರು ರಾಜ್ಯ ಸಚಿವ ಸಂಪುಟಕ್ಕೆ ಮರಳಿದ್ದಾರೆ.

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ(ಆರ್‌ವಿ) ಮತ್ತು ರಾಜ್ಯಸಭಾ ಸಂಸದ ಉಪೇಂದ್ರ ಕುಶ್ವಾಹ ಅವರ ಆರ್‌ಎಲ್‌ಎಂ ಪಕ್ಷದಿಂದ ಯಾರಿಗೂ ಸದ್ಯಕ್ಕೆ ಸಚಿವ ಸ್ಥಾನ ದೊರೆತಿಲ್ಲ. ಈ ಎರಡು ಪಕ್ಷಗಳು ಕ್ರಮವಾಗಿ 19 ಮತ್ತು 4 ಸ್ಥಾನಗಳನ್ನು ಹೊಂದಿವೆ.

ನಿರ್ಗಮಿತ ಸರ್ಕಾರದಲ್ಲಿ, ಬಿಜೆಪಿ 15 ಮಂತ್ರಿಗಳನ್ನು ಹೊಂದಿತ್ತು, ಸಿಎಂ ನಿತೀಶ್ ಕುಮಾರ್ ಸೇರಿದಂತೆ ಜೆಡಿಯುನ 12 ಮಂತ್ರಿಗಳಿದ್ದರು. ಹಿಂದೂಸ್ತಾನಿ ಅವಾಮ್ ಮೋರ್ಚಾದ (ಜಾತ್ಯತೀತ) ಒಬ್ಬರು ಮತ್ತು ಒಬ್ಬ ಸ್ವತಂತ್ರ ಶಾಸಕ ಸಚಿವರಾಗಿದ್ದರು.

ಜೆ.ಪಿ ನಡ್ಡಾ ಸೇರಿದಂತೆ ಹಿರಿಯ ಎನ್‌ಡಿಎ ನಾಯಕರು, ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ದೇವೇಂದ್ರ ಫಡ್ನವಿಸ್, ಎನ್. ಚಂದ್ರಬಾಬು ನಾಯ್ಡು ಮತ್ತು ಭೂಪೇಂದ್ರ ಪಟೇಲ್ ಅವರೊಂದಿಗೆ ಪ್ರಮಾಣವಚನ ಕಾರ್ಯಕ್ರಮಕ್ಕೆ ಗಾಂಧಿ ಮೈದಾನಕ್ಕೆ ಆಗಮಿಸುವ ಮೂಲಕ ನಿತೀಶ್ ಕುಮಾರ್ ಗಮನಸೆಳೆದರು ಎಂದು ವರದಿಗಳು ಹೇಳಿವೆ.

ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ನಾಗಾಲ್ಯಾಂಡ್ ಸಿಎಂ ನೆಫಿಯು ರಿಯೊ ಮತ್ತು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಇತರ ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಸಮಾರಂಭದಲ್ಲಿ ಹಾಜರಿದ್ದರು.

ನಿತೀಶ್ ಕುಮಾರ್ ಬುಧವಾರ ನಿರ್ಗಮಿತ ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಸಲ್ಲಿಸಿದ್ದರು. ಈ ವೇಳೆ ನಿತೀಶ್ ಕುಮಾರ್ ಜೊತೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್, ಆರ್‌ಎಲ್‌ಎಂ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಮತ್ತು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...