Homeಮುಖಪುಟ'ನವ ಭಾರತ, ನವ ಬಿಹಾರ' ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

‘ನವ ಭಾರತ, ನವ ಬಿಹಾರ’ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

ಬಿಹಾರದಲ್ಲಿ ಶ್ರೀಮಂತ ಜನರು ಮಾತ್ರ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಪಡೆಯುವ ಸಮಯವಿತ್ತು. ಆದರೆ ಈಗ ಕೇಂದ್ರದ ಉಜ್ವಲ ಯೋಜನೆಯು ಜನರಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸಲು ಸಹಕಾರಿಯಾಗಿದೆ" ಎಂದು ಮೋದಿ ಹೇಳಿದರು.

- Advertisement -
- Advertisement -

ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ. ಬಿಹಾರ ವಿಧಾನಸಭೆಯ ಚುನಾವಣೆಗೆ ಇನ್ನೇನು ಕೆಲವು ದಿನಗಳಷ್ಟೇ ಬಾಕಿಯಿರುವಾಗ, ‘ನವ ಭಾರತ ಮತ್ತು ನವ ಬಿಹಾರ’ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಅವರ ಪಾತ್ರ ಮಹತ್ತರವಾದದ್ದು ಎಂದು ಮೋದಿ ಕರೆದಿದ್ದಾರೆ.

ಸುಮಾರು 900 ಕೋಟಿ ಮೊತ್ತದ ಬೃಹತ್ ಪೆಟ್ರೋಲಿಯಂ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ, “ಆಡಳಿತದಲ್ಲಿ ಸರಿಯಾದ ಸರ್ಕಾರ ಇದ್ದರೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂಬುದನ್ನು ಬಿಹಾರ ರಾಜ್ಯ ತೋರಿಸಿಕೊಟ್ಟಿದೆ. ಇದರಿಂದಲೇ ಪ್ರತಿಯೊಬ್ಬರಿಗೂ ಸೌಲಭ್ಯಗಳು ತಲುಪಿವೆ” ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ, ನಿತೀಶ್ ಕುಮಾರ್, ಸುಶೀಲ್ ಮೋದಿ ಮತ್ತು ಧರ್ಮೇಂದ್ರ ಪ್ರಧಾನ್ ಉಪಸ್ಥಿತರಿದ್ದರು.

“ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಬಿಹಾರವು ಹಲವು ವರ್ಷಗಳವರೆಗೆ ಅಭಿವೃದ್ಧಿಯನ್ನು ಕಾಣದೆ ಹಿಂದುಳಿದಿತ್ತು. ರಸ್ತೆ ಸಂಪರ್ಕ ಮತ್ತು ಇಂಟರ್ನೆಟ್ ಸೌಲಭ್ಯದ ಕುರಿತು ಚರ್ಚಿಸದ ಕಾಲವೊಂದಿತ್ತು. ಭೂ ಕುಸಿತದ ರಾಜ್ಯವಾಗಿ ಬಿಹಾರ ಅನೇಕ ಸವಾಲುಗಳನ್ನು ಎದುರಿಸಿದೆ. ಆದರೀಗ ನಮ್ಮ ಮಹತ್ವದ ಯೋಜನೆಯಾದ ‘ನವ ಭಾರತ ಮತ್ತು ನವ ಬಿಹಾರ’ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

“ಕೊರೊನಾದ ಬಿಕ್ಕಟ್ಟಿನಿಂದ ಸೃಷ್ಟಿಯಾದ ಕೆಲವು ಸವಾಲುಗಳೂ ಸಹ ಬಿಹಾರದ ಜನರನ್ನು ಹಿಮ್ಮೆಟ್ಟಿಸಲು ಸಾಧ್ಯವಾಗಲಿಲ್ಲ. ಜಾಗತಿಕ ಸಾಂಕ್ರಾಮಿಕ ರೊಗವು ದೇಶಕ್ಕೆ ಅನೇಕ ಸಮಸ್ಯೆಗಳನ್ನು ತಂದೊಡ್ಡಿತು. ಆದರೂ ದೇಶ ನಿಂತಿಲ್ಲ, ಬಿಹಾರ ನಿಂತಿಲ್ಲ” ಎಂದು ಮೋದಿ ಹೇಳಿದರು.

“ಮೂಲಭೂತ ಸೌಕರ್ಯಗಳ ವಿಷಯದಲ್ಲಿ ಬಿಹಾರವು ತುಂಬಾ ಮುಂದೆ ಸಾಗಿದೆ. ಬಿಹಾರದಲ್ಲಿ ವಿದ್ಯುತ್ ಪರಿಸ್ಥಿತಿಯ ಬಗ್ಗೆ ನಮಗೆ ಚೆನ್ನಾಗಿ ತಿಳಿದಿದೆ. ಒಂದು ಹಳ್ಳಿಗೆ 2-3 ಗಂಟೆಗಳ ಕಾಲ ವಿದ್ಯುತ್ ಸಿಕ್ಕರೆ ಸಾಕು ಎಂದು ಪರಿಗಣಿಸಲಾಗುತ್ತಿತ್ತು. ನಗರಗಳಿಗೂ ಸಹ 8-10 ಗಂಟೆಗಿಂತ ಹೆಚ್ಚಿನ ವಿದ್ಯುತ್ ಸಿಗುತ್ತಿರಲಿಲ್ಲ. ಆದರೆ ಇಂದು ಬಿಹಾರದಲ್ಲಿ ವಿದ್ಯುತ್ ಪೂರೈಕೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ” ಎಂದು ಪ್ರಧಾನಿ ಹೇಳಿದರು.

“ರಾಜ್ಯದ ಯುವಜನತೆಗೆ ಉತ್ತಮ ಶಿಕ್ಷಣದ ಅವಕಾಶಗಳಿವೆ. ಇಂದು ಬಿಹಾರದಲ್ಲಿ ಬೃಹತ್ ಶಿಕ್ಷಣ ಕೇಂದ್ರಗಳು ತೆರೆಯಲ್ಪಡುತ್ತಿವೆ. ಕೃಷಿ, ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆ ಹೆಚ್ಚುತ್ತಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಯುವಜನರ ಯಶಸ್ಸಿಗೆ ಸಹಾಯ ಮಾಡುತ್ತಿವೆ” ಎಂದು ಬಿಹಾರದಲ್ಲಿನ ಶಿಕ್ಷಣಾವಕಾಶಗಳನ್ನು ಮೋದಿ ಉಲ್ಲೇಖಿಸಿದರು.

ಇದನ್ನೂ ಓದಿ: ರೈಲ್ವೆ ಪ್ಲಾಟ್‌ಫಾರ್ಮ್‌ಗಳಲ್ಲಿ ಸಿಲುಕಿಕೊಂಡಿರುವ ಬಿಹಾರದ ಪ್ರವಾಹ ಪೀಡಿತರು!  

“ನಾವು ಬಿಹಾರದ ಪ್ರತಿಯೊಂದು ವಲಯದ ಅಭಿವೃದ್ಧಿಯನ್ನು ಕೈಗೆತ್ತಿಕೊಂಡಿದ್ದೇವೆ ಮತ್ತು ಪ್ರತಿ ವಲಯದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ. ಬಿಹಾರದಲ್ಲಿ ಶ್ರೀಮಂತ ಜನರು ಮಾತ್ರ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಪಡೆಯುವ ಸಮಯವಿತ್ತು. ಆದರೆ ಈಗ ಕೇಂದ್ರದ ಉಜ್ವಲ ಯೋಜನೆಯು ಜನರಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸಲು ಸಹಕಾರಿಯಾಗಿದೆ” ಎಂದು ಮೋದಿ ಹೇಳಿದರು.

ನಿತೀಶ್ ಕುಮಾರ್ ಅವರ ಜನತಾದಳ (ಸಂಯುಕ್ತ) ಪಕ್ಷವು ಬಿಹಾರದ ಆಡಳಿತ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಒಂದು ಘಟಕವಾಗಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ನೇತೃತ್ವದ ಹಿಂದೂಸ್ತಾನಿ ಅವಮ್ ಮೋರ್ಚಾ, ಈ ತಿಂಗಳ ಆರಂಭದಲ್ಲಿ ಮೈತ್ರಿಕೂಟಕ್ಕೆ ಸೇರಿತ್ತು. ಲೋಕ ಜನಶಕ್ತಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷ ಎನ್‌ಡಿಎಯ ಇತರ ಎರಡು ಮೈತ್ರಿ ಪಕ್ಷಗಳಾಗಿವೆ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...