Homeಮುಖಪುಟಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

- Advertisement -
- Advertisement -

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ. ಈ ಮೂಲಕ ಬಿಹಾರದಲ್ಲಿ ಸುಮಾರು ಎರಡು ದಶಕಗಳ ಅವರ ಸುದೀರ್ಘ ಆಡಳಿತ ಅಂತ್ಯಗೊಂಡಂತಾಗಿದೆ.

ಮಂಗಳವಾರ (ಏ.14) ಪಾಟ್ನಾದ ಮುಖ್ಯ ಸಚಿವಾಲಯದಲ್ಲಿ ನಡೆದ ತಮ್ಮ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ನಿತೀಶ್ ಕುಮಾರ್ ಅವರು ಸಚಿವ ಸಂಪುಟ ವಿಸರ್ಜನೆಯ ನಿರ್ಧಾರವನ್ನು ಸಹೋದ್ಯೋಗಿಗಳಿಗೆ ತಿಳಿಸಿದರು. ಇದು ರಾಜೀನಾಮೆ ಸಲ್ಲಿಸುವ ಮುನ್ನ ಅನುಸರಿಸಬೇಕಾದ ಸಾಂವಿಧಾನಿಕ ಪ್ರಕ್ರಿಯೆಯಾಗಿದೆ.

ಸಭೆಯಲ್ಲಿ ಮಾತನಾಡಿದ ಅವರು, “2005ರಲ್ಲಿ ನಾನು ಅಧಿಕಾರಕ್ಕೆ ಬಂದೆ, ನನ್ನ ಕೈಲಾದಷ್ಟು ಉತ್ತಮ ಕೆಲಸ ಮಾಡಿದ್ದೇನೆ. ಹೊಸ ಸರ್ಕಾರ ನನ್ನ ಮಾರ್ಗದರ್ಶನವನ್ನು ಪಡೆಯುತ್ತಲೇ ಇರುತ್ತದೆ” ಎಂದು ಹೇಳಿದರು. ಸಭೆಯ ನಂತರ ಸಚಿವರು ಭಾವುಕರಾದರು ಎಂದು ರಾಜ್ಯ ಸಚಿವ ರಾಮ್ ಕೃಪಾಲ್ ಯಾದವ್ ತಿಳಿಸಿದ್ದಾರೆ.

ಸಂಪುಟ ವಿಸರ್ಜನೆಯ ಶಿಫಾರಸಿನ ನಂತರ, ನಿತೀಶ್ ಕುಮಾರ್ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ.

ಇತ್ತೀಚೆಗೆ (ಮಾರ್ಚ್ 16, 2026) ರಾಜ್ಯಸಭೆಗೆ ಆಯ್ಕೆಯಾಗಿರುವ ನಿತೀಶ್ ಕುಮಾರ್ ಅವರು, ಏಪ್ರಿಲ್ 11ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಬಿಹಾರ ಮುಖ್ಯಮಂತ್ರಿ ಸ್ಥಾನ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ನಿತೀಶ್ ಕುಮಾರ್ ಅವರ ನಿರ್ಗಮನವು ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ಹಾದಿ ಮಾಡಿಕೊಟ್ಟಿದೆ. ಮುಂದಿನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅವರ ಹೆಸರು ಮುಂಚೂಣಿಯಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...