Homeಮುಖಪುಟನಿಜಾಮಾಬಾದ್‌: ರಿಯಾಜ್ ಎನ್‌ಕೌಂಟರ್ ನಂತರ ಹಿಂದುತ್ವ ಗುಂಪುಗಳಿಂದ ಸಂಭ್ರಮಾಚರಣೆ

ನಿಜಾಮಾಬಾದ್‌: ರಿಯಾಜ್ ಎನ್‌ಕೌಂಟರ್ ನಂತರ ಹಿಂದುತ್ವ ಗುಂಪುಗಳಿಂದ ಸಂಭ್ರಮಾಚರಣೆ

- Advertisement -
- Advertisement -

ಕಳ್ಳತನ ಆರೋಪಿ ಶೇಖ್ ರಿಯಾಜ್ ಪೊಲೀಸ್ ಎನ್‌ಕೌಂಟರ್ ನಂತರ ನಿಜಾಮಾಬಾದ್‌ನಲ್ಲಿ ವಿವಾದಾತ್ಮಕ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಹಿಂದುತ್ವ ಗುಂಪಿನ ಕಾರ್ಯಕರ್ತರು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್, ಪೊಲೀಸ್ ಆಯುಕ್ತ ಸಾಯಿ ಚೈತನ್ಯ (ಐಪಿಎಸ್) ಮತ್ತು ಶಿವಸೇನಾ ಸಂಸ್ಥಾಪಕ ಬಾಳಾ ಠಾಕ್ರೆ ಅವರ ಚಿತ್ರಗಳೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ.

ತೆಲಂಗಾಣ ಪೊಲೀಸರು, ಕಾನ್‌ಸ್ಟೇಬಲ್ ಪ್ರಮೋದ್ ಹತ್ಯೆಯ ಆರೋಪಿ ಶೇಖ್ ರಿಯಾಜ್ ಅವರನ್ನು ಗುಂಡಿಕ್ಕಿ ಕೊಂದ ನಂತರ ಈ ಘಟನೆ ಸಂಭವಿಸಿದೆ. ಎನ್‌ಕೌಂಟರ್ ನಂತರ, ಹಲವಾರು ಕಾರ್ಯಕರ್ತರು ಸಾರ್ವಜನಿಕವಾಗಿ ಡಿಜೆ ಸಂಗೀತ ನುಡಿಸುತ್ತಾ ಬೀದಿಗಳಲ್ಲಿ ನೃತ್ಯ ಮಾಡುತ್ತಾ ಸಂಭ್ರಮಾಚರಣೆ ನಡೆಸಿದರು. ಕಾರ್ಯಕ್ರಮದ ವೀಡಿಯೊಗಳು ಮತ್ತು ಫೋಟೋಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಪೊಲೀಸ್ ಆಯುಕ್ತ ಸಾಯಿ ಚೈತನ್ಯ ಮತ್ತು ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆ ಮತ್ತು ನಟ ಸಲ್ಮಾನ್ ಖಾನ್ ಅವರನ್ನು ಬೆದರಿಸುವುದು ಸೇರಿದಂತೆ 84 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಭಾವಚಿತ್ರಗಳನ್ನು ಹೊಂದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಆಚರಣೆಯ ಸಂದರ್ಭದಲ್ಲಿ ಬಿಷ್ಣೋಯ್ ಅವರಂತಹ ಅಪರಾಧಿಯನ್ನು ವೈಭವೀಕರಿಸುವ ಕೃತ್ಯವು ಕೆಲವು ಗುಂಪುಗಳಲ್ಲಿ ಗೊಂದಲದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕೆಲವರು ಹೇಳುತ್ತಾರೆ. ಇದು ಅಂತಹ ಸಾರ್ವಜನಿಕ ಪ್ರದರ್ಶನಗಳ ಸೂಕ್ತತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ, ವಿಶೇಷವಾಗಿ ಎನ್‌ಕೌಂಟರ್‌ ಕುರಿತು ಸಾರ್ವಜನಿಕವಾಗಿ ಹಲವಾರು ಅನುಮಾಣಗಳಿರುವ ಸಂದರ್ಭದಲ್ಲಿ ಈ ಈ ಸಂಭ್ರಮಾಚರಣೆ ನಡೆದಿದೆ.

ಆಚರಣೆಯ ಸಮಯದಲ್ಲಿ ಬಿಷ್ಣೋಯ್ ಅವರ ಚಿತ್ರಗಳನ್ನು ಪ್ರದರ್ಶಿಸಿದವರ ವಿರುದ್ಧ ಯಾವುದಾರೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆಯೇ ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.

ಅಸ್ಸಾಂ ಸರ್ಕಾರದಿಂದ ‘ಲವ್ ಜಿಹಾದ್’, ಬಹುಪತ್ನಿತ್ವ ಮಸೂದೆಗಳ ಮಂಡನೆ: ಹಿಮಂತ್ ಬಿಸ್ವಾ ಶರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...

ಎಸ್‌ಸಿ-ಎಸ್‌ಟಿ ಮತ್ತು ಮುಸ್ಲಿಮರ ಇತಿಹಾಸ, ಸಂಕಟ ಒಂದೇ, ಸಮಸಮಾಜ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಶೋಷಿತ ಸಮುದಾಯಗಳು ಒಂದಾಗಬೇಕಿದೆ: ರಿಜ್ವಾನ್ ಅರ್ಷದ್

ಸಮಾಜದಲ್ಲಿ ತಾರತಮ್ಯ ಮತ್ತು ಶೋಷಣೆಗೆ ಒಳಗಾದ ಸಮುದಾಯಗಳು ಒಗ್ಗಟ್ಟಾಗಿ ನಿಂತಾಗ ಮಾತ್ರ ಸಾಮಾಜಿಕ ನ್ಯಾಯ ಮತ್ತು ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್...

ಮಹಾರಾಷ್ಟ್ರ ಎಸ್‌ಐಆರ್‌ನಲ್ಲಿ ಹೆಸರು ಅಳಿಸಿದ ಬಳಿಕ ಮರು ನೋಂದಣಿ: ಮತದಾರರ ವಿರುದ್ಧ ಕ್ರಮವಿಲ್ಲ ಎಂದ ಸುಪ್ರೀಂ ಕೋರ್ಟ್ 

ನವದೆಹಲಿ: ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವೇಳೆ ಹೆಸರುಗಳನ್ನು ಅಳಿಸಿರುವ ಪ್ರಕರಣದಲ್ಲಿ, ಮರು ನೋಂದಣಿಗೆ ಅರ್ಜಿ ಸಲ್ಲಿಸುವ ಮತದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಸುಪ್ರೀಂ...

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಹಗರಣ: ತಮಿಳುನಾಡು ಮಾಜಿ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಬಂಧನ

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಮೌಲ್ಯದ ಹಗರಣವೊಂದಕ್ಕೆ ಸಂಬಂಧಿಸಿದಂತೆ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಹಾಗೂ ತಮಿಳುನಾಡಿನ ಮಾಜಿ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರನ್ನು...