Homeಕರ್ನಾಟಕಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

- Advertisement -
- Advertisement -

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ ‘ಪ್ರಿಸನರ್ ನಂ. 626710 ಈಸ್ ಪ್ರೆಸೆಂಟ್’ (Prisoner No. 626710 is Present) ಎಂಬ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಮುಂದೂಡಿದೆ. ಈ ಕಾರ್ಯಕ್ರಮವು ಸೆಪ್ಟೆಂಬರ್ 14ರಂದು ವಿಶ್ವವಿದ್ಯಾಲಯದಲ್ಲಿ ನಡೆಯಬೇಕಾಗಿತ್ತು ಮತ್ತು ಅದರ ನಂತರ ಮುಕ್ತ ಚರ್ಚೆಯನ್ನು ಹಮ್ಮಿಕೊಳ್ಳಲಾಗಿತ್ತು.

ಭಾನುವಾರ (ಸೆ.13) ರಾತ್ರಿ ತಡವಾಗಿ ಬಂದ ಅಪ್‌ಡೇಟ್‌ನಲ್ಲಿ, ವಿದ್ಯಾರ್ಥಿಗಳಿಗೆ ಇಮೇಲ್ ಕಳುಹಿಸಿರುವ ಲಾ ಅಂಡ್ ಸೊಸೈಟಿ ಕಮಿಟಿ, ‘ಸಾರಿಗೆ ಮತ್ತು ಭದ್ರತಾ ಕಾರಣಗಳನ್ನು’ ಉಲ್ಲೇಖಿಸಿ ಈ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಘೋಷಿಸಿದೆ. ಆದಾಗ್ಯೂ, ಇದೇ ತ್ರೈಮಾಸಿಕದಲ್ಲಿ ಈ ಕಾರ್ಯಕ್ರಮವನ್ನು ಖಂಡಿತವಾಗಿ ನಡೆಸಲಾಗುವುದು ಎಂದು ಸಮಿತಿಯು ಸ್ಪಷ್ಟಪಡಿಸಿದೆ ಎಂದು livelaw.in ವರದಿ ಮಾಡಿದೆ.

ಮತ್ತಷ್ಟು ಸ್ಪಷ್ಟನೆ ನೀಡಿರುವ ಕಮಿಟಿ, ಈ ಕಾರ್ಯಕ್ರಮವನ್ನು ಯಾರದ್ದೋ ‘ಒತ್ತಡಕ್ಕೆ ಮಣಿದು’ ಮುಂದೂಡುತ್ತಿಲ್ಲ ಎಂದು ತಿಳಿಸಿದೆ. ಈ ಮುಂದೂಡಿಕೆಯು ಕೇವಲ ಪ್ರದರ್ಶನವನ್ನು ‘ಸುರಕ್ಷಿತ ಮತ್ತು ಜವಾಬ್ದಾರಿಯುತ ರೀತಿಯಲ್ಲಿ’ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಂಡಿರುವ ಒಂದು ಕ್ರಮವಾಗಿದೆ ಎಂದು ಇಮೇಲ್‌ನಲ್ಲಿ ಸೇರಿಸಲಾಗಿದೆ.

ವಿದ್ಯಾರ್ಥಿ ಸಮೂಹದ ಹಿತರಕ್ಷಣೆಗೆ ಧಕ್ಕೆಯಾಗದಂತೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲು ತಾವು ಶ್ರಮಿಸುತ್ತಿರುವುದಾಗಿ ಸಮಿತಿಯು ಹೇಳಿಕೊಂಡಿದೆ. ಸಂವಿಧಾನಾತ್ಮಕ ಹಕ್ಕುಗಳು, ಕ್ರಿಮಿನಲ್ ಕಾನೂನು, ನಾಗರಿಕ ಸ್ವಾತಂತ್ರ್ಯಗಳು ಮತ್ತು ಸಾಂಸ್ಥಿಕ ಸ್ವಾತಂತ್ರ್ಯದಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಮರುನಿಗದಿಯಾಗಲಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕಮಿಟಿಯು ಮನವಿ ಮಾಡಿದೆ.

ವಿದ್ಯಾರ್ಥಿಗಳನ್ನುದ್ದೇಶಿಸಿ ಕಳುಹಿಸಲಾಗಿರುವ ಇಮೇಲ್ ಪ್ರಕಾರ, ಸೆಪ್ಟೆಂಬರ್ 13ರಂದು ಆಚರಿಸುವ ‘ರಾಜಕೀಯ ಕೈದಿಗಳ ದಿನದ’ ಅಂಗವಾಗಿ ಸಾಕ್ಷ್ಯಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು ಎಂದು livelaw.in ವರದಿ ಉಲ್ಲೇಖಿಸಿದೆ.

ಇಮೇಲ್ ಪ್ರಕಾರ, ವಿಚಾರಣಾ ಪೂರ್ವ ಬಂಧನ, ಜಾಮೀನು, ಭಿನ್ನಾಭಿಪ್ರಾಯ, ರಾಜಕೀಯ ಜೈಲುವಾಸ ಮತ್ತು ಕ್ರಿಮಿನಲ್ ಕಾನೂನು ಹಾಗೂ ಪ್ರಜಾಪ್ರಭುತ್ವದ ಸ್ವಾತಂತ್ರ್ಯಗಳ ನಡುವಿನ ಸಂಬಂಧದಂತಹ ವಿಶಾಲವಾದ ಕಾನೂನು ಪ್ರಶ್ನೆಗಳ ಕುರಿತು ಚರ್ಚೆಗಳನ್ನು ಉತ್ತೇಜಿಸಲು ಈ ಸಾಕ್ಷ್ಯಚಿತ್ರ ಪ್ರದರ್ಶನವನ್ನು ಬಳಸಿಕೊಳ್ಳಲು ಸಮಿತಿಯು ಉದ್ದೇಶಿಸಿತ್ತು. ಅಲ್ಲದೆ, ಈ ಸೆಪ್ಟೆಂಬರ್ ತಿಂಗಳು ಉಮರ್ ಖಾಲಿದ್ ಅವರ ಜೈಲುವಾಸದ ಆರು ವರ್ಷಗಳನ್ನು ಪೂರೈಸುತ್ತದೆ ಎಂಬುದನ್ನು ಆಯೋಜಕರು ಕಳುಹಿಸಿದ ಇಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು ಎಂದು ವರದಿ ವಿವರಿಸಿದೆ.

ಪ್ರಸ್ತಾವಿತ ಈ ಕಾರ್ಯಕ್ರಮಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ತೀವ್ರ ವಿರೋಧ ವ್ಯಕ್ತಪಡಿಸಿದೆ. ನಿನ್ನೆ NLSIU ಕುಲಪತಿಗಳಿಗೆ ಪತ್ರ ಬರೆದಿರುವ ಎಬಿವಿಪಿ, ‘ರಾಜಕೀಯ ಅಥವಾ ಸೈದ್ಧಾಂತಿಕ ಪ್ರಚಾರಕ್ಕಾಗಿ’ ಶೈಕ್ಷಣಿಕ ಸಂಸ್ಥೆಯ ಆವರಣವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಬೇಕೆಂದು ಆಡಳಿತ ಮಂಡಳಿಯನ್ನು ಒತ್ತಾಯಿಸಿದೆ. ಅಷ್ಟೇ ಅಲ್ಲದೆ, ವಿಶ್ವವಿದ್ಯಾಲಯದ ಶೈಕ್ಷಣಿಕ ವಾತಾವರಣವು ರಾಜಕೀಯ ಧ್ರುವೀಕರಣಕ್ಕೆ ಒಳಗಾಗದಂತೆ ರಕ್ಷಿಸಲು ಈ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ನೀಡಲಾಗಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಕುಲಪತಿಗಳಿಗೆ ಆಗ್ರಹಿಸಿದೆ.







ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...