Homeಮುಖಪುಟಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

ಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

’ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ಒಪ್ಪಿಸಿದೆ, ಆದರೆ ಗಂಭೀರ ಆರೋಪ ಎದುರಿಸುತ್ತಿರುವ ಜಿಲ್ಲಾಧಿಕಾರಿ ಹತ್ರಾಸ್‌ನಲ್ಲೇ ಇದ್ದಾಗ, ನಿಷ್ಪಕ್ಷಪಾತವಾಗಿ ತನಿಖೆ ಹೇಗೆ ಸಾಧ್ಯ?’ -ಮಾಯಾವತಿ

- Advertisement -
- Advertisement -

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆ ಕುಟುಂಬಕ್ಕೆ ಹತ್ರಾಸ್ ಜಿಲ್ಲಾಧಿಕಾರಿ ಒತ್ತಡ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂಬ ಗಂಭಿರ ಆರೋಪ ಕೇಳಿಬಂದಿದೆ. ಇಂತಹ ಆರೋಪವಿದ್ದರೂ ಹತ್ರಾಸ್ ಜಿಲ್ಲಾಧಿಕಾರಿ ವಿರುದ್ಧ ಕ್ರಮಕೈಗೊಳ್ಳದಿರುವುದಕ್ಕೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥ ಮಾಯಾವತಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ’ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತ ಕುಟುಂಬವು ಜಿಲ್ಲೆಯ ಡಿಎಂ ಮೇಲೆ ಬೆದರಿಸುವಿಕೆ ಇತ್ಯಾದಿಗಳ ಬಗ್ಗೆ ಅನೇಕ ಗಂಭೀರ ಆರೋಪಗಳನ್ನು ಮಾಡಿದೆ. ಇದರ ಬಗ್ಗೆ ಯುಪಿ ಸರ್ಕಾರದ ರಹಸ್ಯ ಮೌನ ದುಃಖಕರವಾಗಿದೆ ಜೊತೆಗೆ ತುಂಬಾ ಆತಂಕಕಾರಿಯಾಗಿದೆ’ ಎಂದಿದ್ದಾರೆ.

’ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿರುವುದೇನೋ ಸರಿ, ಆದರೆ ಗಂಭೀರ ಆರೋಪ ಎದುರಿಸುತ್ತಿರುವ ಜಿಲ್ಲಾಧಿಕಾರಿ ಹತ್ರಾಸ್‌ನಲ್ಲೇ ಇದ್ದಾಗ, ನಿಷ್ಪಕ್ಷಪಾತವಾಗಿ ತನಿಖೆ ಹೇಗೆ ನಡೆಯುತ್ತದೆ? ಎಂಬುದರ ಬಗ್ಗೆ ನನಗೆ ಚಿಂತೆಯಾಗಿದೆ‘ ಎಂದು ಮಾಯಾವತಿ ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

ನಿನ್ನೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹತ್ರಾಸ್‌ನ ಸಂತ್ರಸ್ಥೆಯ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದರು.

ವೈರಲ್ ಆಗಿರುವ ವಿಡಿಯೋದಲ್ಲಿ ಜಿಲ್ಲಾಧಿಕಾರಿ ಯುವತಿಯ ತಂದೆಯೊಂದಿಗೆ, “2-3 ದಿನಗಳಲ್ಲಿ ಮಾಧ್ಯಮಗಳು ಹೊರಡುತ್ತವೆ. ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ನಿಮ್ಮ ಹೇಳಿಕೆಯನ್ನು ಬದಲಾಯಿಸಲು ನೀವು ಬಯಸುತ್ತೀರಾ ಎಂಬುದು ನಿಮಗೆ ಬಿಟ್ಟದ್ದು” ಎಂದು ಒತ್ತಾಯಿಸುವುದನ್ನು ಕೇಳಬಹುದಾಗಿದೆ.

ಈ ಪ್ರಕರಣವನ್ನು ನಿಭಾಯಿಸುತ್ತಿರುವ ರೀತಿಗೆ ಉತ್ತರ ಪ್ರದೇಶ ಸರ್ಕಾರವು ತೀವ್ರ ದಾಳಿಗೆ ಒಳಗಾಗಿದೆ. ಕುಟುಂಬದ ಒಪ್ಪಿಗೆಯಿಲ್ಲದೆ ಮಧ್ಯರಾತ್ರಿ ಮೃತ ಸಂತ್ರಸ್ತೆಯ ಶವ ಸಂಸ್ಕಾರ, ಮಾಧ್ಯಮಗಳು ಮತ್ತು ವಿರೋಧ ಪಕ್ಷದ ಮುಖಂಡರು ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗುವುದನ್ನು ತಡೆದು, ಬಂಧಿಸಿದ್ದ ಕಾರಣ ದೇಶಾದ್ಯಂತ ತೀವ್ರ ಟೀಕೆ ಮತ್ತು ಭಾರಿ ಪ್ರತಿಭಟನೆಗೆ ಕಾರಣವಾಗಿದೆ.

ನಿನ್ನೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿರುವುದಾಗಿ ಪ್ರಕಟಿಸಿದ್ದರು.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಭಾಷಣ: ಮೋದಿಗೆ ಕಳುಹಿಸುವ ಬದಲು ‘ಜೆ.ಪಿ.ನಡ್ಡಾ’ಗೆ ನೊಟೀಸ್‌ ನೀಡಿದ ಚುನಾವಣಾ ಆಯೋಗ!

0
ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ದೂರುಗಳ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ನೋಟಿಸ್ ನೀಡಿದೆ. ಆದರೆ, ಈ ನೊಟೀಸ್‌ನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕಳುಹಿಸಲಾಗಿದ್ದು,...