Homeಮುಖಪುಟಯಾವುದೇ ಕಾರಣಕ್ಕೂ ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವಿಲ್ಲ: ಊಹಾಪೋಹಗಳಿಗೆ ಪವಾರ್ ಸ್ಪಷ್ಟನೆ

ಯಾವುದೇ ಕಾರಣಕ್ಕೂ ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವಿಲ್ಲ: ಊಹಾಪೋಹಗಳಿಗೆ ಪವಾರ್ ಸ್ಪಷ್ಟನೆ

- Advertisement -
- Advertisement -

ನಮ್ಮ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಭಾನುವಾರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಹೇಳಿದ್ದಾರೆ. ಅವರ ಕೆಲವು “ಹಿತೈಷಿಗಳು” ಎನ್‌ಸಿಪಿಯನ್ನು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಮನವೊಲಿಸುತ್ತಿದ್ದಾರೆ ಎಂದು ಹೇಳಲಾಗಿತ್ತು.

ಈ ಬಗ್ಗೆ ಸೋಲಾಪುರ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, ”ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷನಾಗಿ, ನನ್ನ ಪಕ್ಷವು ಬಿಜೆಪಿಯೊಂದಿಗೆ ಹೋಗುವುದಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ. ಬಿಜೆಪಿ ಹಾಗೂ ಎನ್‌ಸಿಪಿಯ ರಾಜಕೀಯ ಸಿದ್ದಾಂತಗಳು ಹೊಂದಿಕೆಯಾಗುವುದಿಲ್ಲ” ಎಂದು ಹೇಳಿದ್ದಾರೆ.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಅಜಿತ್ ಪವಾರ್ ನೇತೃತ್ವದ ಬಣವನ್ನು ಉಲ್ಲೇಖಿಸಿ, ”ನಮ್ಮ ಕೆಲವು ಹಿತೈಷಿಗಳು ನಮ್ಮ ನಿಲುವಿನಲ್ಲಿ ಏನಾದರೂ ಬದಲಾವಣೆಯಾಗಬಹುದೇ ಎಂದು ನೋಡಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿಯೇ ಅವರು ನಮ್ಮೊಂದಿಗೆ ಸೌಹಾರ್ದಯುತವಾಗಿ ಚರ್ಚಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಶರದ್ ಪವಾರ್ ಹೇಳಿದರು.

ಪುಣೆಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಒಂದು ದಿನದ ನಂತರ ಶರದ್ ಪವಾರ್ ಈ ಹೇಳಿಕೆ ನೀಡಿದ್ದಾರೆ.

ಈ ಭೇಟಿಯ ಬಗ್ಗೆ ಕೆಲವು ಊಹಾಪೋಹಗಳು ವರದಿಯಾದ ಬಗ್ಗೆ ಪ್ರತಿಕ್ರಿಯಿಸಿದ ಅವರು ”ನನ್ನ ಸಂಬಂಧಿಯನ್ನು ನಾನು ಭೇಟಿಯಾಗುವುದರಲ್ಲಿ ತಪ್ಪೇನು? ಒಂದು ಕುಟುಂಬದ ಹಿರಿಯ ವ್ಯಕ್ತಿಯು ಇನ್ನೊಬ್ಬ ಕುಟುಂಬದ ಸದಸ್ಯರನ್ನು ಭೇಟಿಯಾಗಲು ಬಯಸಿದರೆ, ಅದರಲ್ಲಿ ಯಾವುದೇ ಸಮಸ್ಯೆ ಇಲ್ಲ” ಎಂದರು.

ಭಾನುವಾರ, ದಿವಂಗತ ಶಾಸಕ ಗಣಪತ್ರಾವ್ ದೇಶಮುಖ್ ಅವರ ಪ್ರತಿಮೆಯನ್ನು ಅನಾವರಣಗೊಳಿಸುವ ಕಾರ್ಯಕ್ರಮದಲ್ಲಿ ಶರದ್ ಪವಾರ್, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ವೇದಿಕೆ ಹಂಚಿಕೊಂಡರು.

ಅಜಿತ್ ಪವಾರ್ ಅವರು ಪಕ್ಷದ ಎಂಟು ಬಂಡಾಯ ಶಾಸಕರೊಂದಿಗೆ ಜುಲೈನಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಏಕನಾಥ್ ಶಿಂಧೆ ಅವರ ಶಿವಸೇನೆ ಸಮ್ಮಿಶ್ರ ಸರ್ಕಾರಕ್ಕೆ ಸೇರ್ಪಡೆಗೊಂಡಿದ್ದರು. ಈ ಕ್ರಮವು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದೊಳಗೆ ವಿಭಜನೆಗೆ ಕಾರಣವಾಯಿತು, ಒಂದು ಬಣವು ಹಿರಿಯ ನಾಯಕ ಶರದ್ ಪವಾರ್ ಅವರನ್ನು ಬೆಂಬಲಿಸುತ್ತದೆ ಮತ್ತು ಇನ್ನೊಂದು ಬಣ ಅಜಿತ್ ಪವಾರ್ ಅವರನ್ನು ಬೆಂಬಲಿಸಿತು.

ಭಾನುವಾರದಂದು ಪವಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದ ಸಂಜಯ್ ರಾವುತ್, ಬಿಜೆಪಿಯ ಬಗ್ಗೆ ಶರದ್ ಪವಾರ್ ಅವರ ನಿಲುವಿನ ಬಗ್ಗೆ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ “ಸ್ಪಷ್ಟವಾದ ನಿಲುವು”ಗೆ ಆದ್ಯತೆ ನೀಡುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನಾನು ದಣಿದಿಲ್ಲ, ನಿವೃತ್ತಿಯಾಗಿಲ್ಲ’: ಅಜಿತ್ ಹೇಳಿಕೆಗೆ ಶರದ್ ಪವಾರ್ ತಿರುಗೇಟು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕವಿತಾಗೆ ಜಾಮೀನು ನೀಡಿದರೆ ತನಿಖೆಗೆ ಅಡ್ಡಿ: ಜಾರಿ ನಿರ್ದೇಶನಾಲಯ

0
ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ಜಾಮೀನು ಅರ್ಜಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ದೆಹಲಿ ಹೈಕೋರ್ಟ್‌ನಲ್ಲಿ ವಿರೋಧಿಸಿದೆ. "ಅವರ...