Homeಮುಖಪುಟ'ಮೈತ್ರಿಯಿಂದ ಯಾವುದೇ ಪ್ರಯೋಜನವಾಗಿಲ್ಲ': ಪ.ಬಂಗಾಳದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಕೊನೆಗೊಳಿಸಿದ ಕೆಲವು ಎಡ ಪಕ್ಷಗಳು

‘ಮೈತ್ರಿಯಿಂದ ಯಾವುದೇ ಪ್ರಯೋಜನವಾಗಿಲ್ಲ’: ಪ.ಬಂಗಾಳದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಕೊನೆಗೊಳಿಸಿದ ಕೆಲವು ಎಡ ಪಕ್ಷಗಳು

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶ ಹೊರ ಬರುತ್ತಿದ್ದಂತೆ ಪ್ರತಿಕ್ರಿಯಿಸಿದ ಎಡರಂಗದ ಎರಡು ಪಕ್ಷಗಳು ಪ.ಬಂಗಾಳದಲ್ಲಿ ಕಾಂಗ್ರೆಸ್‌ ಜೊತೆಗಿನ ಮೈತ್ರಿಯಿಂದ ಯಾವುದೇ ಪ್ರಯೋಜನವಾಗಿಲ್ಲ. ಮುಂದೆ ರಾಜ್ಯದಲ್ಲಿ  ಕಾಂಗ್ರೆಸ್‌ ಜೊತೆ ಯಾವುದೇ ಮೈತ್ರಿಯನ್ನು ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ನಂತರ ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್(AIFB) ಮತ್ತು ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP) ಜೂನ್ 5ರಂದು ಭವಿಷ್ಯದಲ್ಲಿ ಎಡರಂಗ ಮತ್ತು ಕಾಂಗ್ರೆಸ್ ನಡುವೆ ಯಾವುದೇ ಮೈತ್ರಿ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಎಡರಂಗವು ಒಂದೇ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾಗಿದೆ. ಮಾಲ್ಡಾ ದಕ್ಷಿಣದಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನು ಮಾತ್ರ ಪಡೆದುಕೊಂಡಿದೆ. ತೃಣಮೂಲ ಕಾಂಗ್ರೆಸ್ 42ರಲ್ಲಿ 29 ಸ್ಥಾನಗಳನ್ನು ಗೆದ್ದುಕೊಂಡಿದೆ. ಎಡರಂಗವು 33 ಸ್ಥಾನಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿತ್ತು, ಉಳಿದ ಒಂಬತ್ತು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಎಐಎಫ್‌ಬಿ ರಾಜ್ಯ ಕಾರ್ಯದರ್ಶಿ ನರೇನ್ ಚಟರ್ಜಿ ಈ ಕುರಿತು ಮಾತನಾಡಿದ್ದು, 2019 ಮತ್ತು 2024ರ ಎರಡೂ ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳ ನಡುವಿನ ಮೈತ್ರಿ ಕೆಲಸ ಮಾಡಲಿಲ್ಲ. ಎಐಎಫ್‌ಬಿ ಸ್ಪರ್ಧಿಸಿದ್ದ ಬರಾಸತ್, ಪುರುಲಿಯಾ ಮತ್ತು ಕೂಚ್‌ಬೆಹಾರ್‌ಗಳ ಎಲ್ಲಾ ಮೂರು ಕ್ಷೇತ್ರಗಳಲ್ಲಿ ಸೋತಿದೆ. ಪಶ್ಚಿಮ ಬಂಗಾಳದಾದ್ಯಂತ 0.24% ಮತಗಳಿತ್ತು. ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದರೂ ಪುರುಲಿಯಾ ಮತ್ತು ಕೂಚ್‌ಬೆಹರ್ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದರು ಎಂದು ಹೇಳಿದ್ದಾರೆ.

ಎಡರಂಗ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆಯನ್ನು ಸಿಪಿಐ(ಎಂ) ನಿರ್ಧರಿಸಿದೆ, ನಮ್ಮನ್ನು ಸಂಪರ್ಕಿಸಿಲ್ಲ. ಈ ಹಿಂದೆ ಬಂಗಾಳದಲ್ಲಿ ಕಾಂಗ್ರೆಸ್ ಮಾಡಿರುವ ಕೆಲಸಗಳ ಹೊರೆಯನ್ನು ಎಡಪಕ್ಷಗಳಾದ ನಾವೇಕೆ ಹೊರಬೇಕು? ನಾವು ಮೈತ್ರಿ ಮಾಡಿಕೊಂಡರೆ, ಜವಾಬ್ದಾರಿಯನ್ನು ಹಂಚಿಕೊಳ್ಳುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಸೈದ್ಧಾಂತಿಕವಾಗಿ ವಿರೋಧಿಸುವ ಕಾಂಗ್ರೆಸ್ ಜೊತೆ ಸೀಟು ಹಂಚಿಕೊಳ್ಳುವ ಉದ್ದೇಶ ನಮ್ಮ ಪಕ್ಷಕ್ಕಿಲ್ಲ. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ಯಾವಾಗಲೂ ಜಗಳವಾಡುತ್ತಿವೆ. ನಾವು ಇದನ್ನು ಸಂಪೂರ್ಣವಾಗಿ ಎಡರಂಗ ಮತ್ತು ವಿಶೇಷವಾಗಿ ಸಿಪಿಐ(ಎಂ) ಜೊತೆ ಚರ್ಚಿಸುತ್ತೇವೆ ಮತ್ತು ಈ ಮೈತ್ರಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಹೇಳುತ್ತೇವೆ ಎಂದು ಚಟರ್ಜಿ ಹೇಳಿದ್ದಾರೆ.

ಇದನ್ನು ಓದಿ: ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಗೆ ವಾಪಾಸ್ಸಾಗಲು ಮುಂದಾದ ಅಜಿತ್‌ ಬಣದ ಬಹುಪಾಲು ಶಾಸಕರು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...