Homeಮುಖಪುಟರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ಇದು ಈಗಿನ ಮಂಡಿ ಮಾರುಕಟ್ಟೆ ವ್ಯವಸ್ತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ರೈತರು ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಬೇಕಾದ ದುಸ್ಥಿತಿಗೆ ತಲುಪುತ್ತಾರೆ ಎಂಬುದು ರೈತರ ಚಿಂತೆಯಾಗಿದೆ.

- Advertisement -
- Advertisement -

ಸೋಮವಾರದಿಂದ ಆರಂಭವಾಗಲಿರುವ ಮಾನ್ಸೂನ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಲು ಸಿದ್ಧವಾಗಿರುವ 3 ಸುಗ್ರಿವಾಜ್ಞೆಗಳ ವಿರುದ್ಧ ಪಂಜಾಬ್, ಉತ್ತರ ಪ್ರದೇಶ ಮತ್ತು ಹರಿಯಾಣದ ರೈತರು ತಿರುಗಿಬಿದ್ದಿದ್ದಾರೆ. ಅಧಿವೇಶನಕ್ಕೂ ಮುನ್ನವೇ ಕೊರೊನಾ ಸಾಂಕ್ರಾಮಿಕದ ನಡುವೆಯೂ ಭಾರೀ ಪ್ರತಿಭಟನೆ ನಡೆಸಿ ತಮ್ಮ ವಿರೋಧ ದಾಖಲಿಸಿದ್ದಾರೆ.

ಅವಶ್ಯಕ ಸಾಮಾಗ್ರಿಗಳ (ತಿದ್ದುಪಡಿ) ಸುಗ್ರಿವಾಜ್ಞೆ, ರೈತರ (ಸಶಕ್ತಿಕರಣ ಹಾಗೂ ರಕ್ಷಣೆ) ಬೆಲೆ ಖಾತರಿ ಒಪ್ಪಂದ ಹಾಗೂ ಕೃಷಿ ಸೇವೆಗಳ ಸುಗ್ರಿವಾಜ್ಞೆ-2020, ರೈತರ ಉತ್ಪನ್ನ ವ್ಯಾಪಾರ ಹಾಗೂ ವಾಣಿಜ್ಯ (ಉತ್ತೇಜನ ಹಾಗೂ ಸೌಕರ್ಯ) ಸುಗ್ರಿವಾಜ್ಞೆಗಳನ್ನು ಕೇಂದ್ರ ಸರ್ಕಾರ ಸಾಂಕ್ರಾಮಿಕ ಕಾಲದಲ್ಲಿ ಜಾರಿಗೊಳಿಸಿದೆ. ಅವುಗಳನ್ನು ಸಂಸತ್ತಿನ ಉಭಯ ಸದನಗಳಲ್ಲಿ ಪರಿಚಯಿಸಿ, ಅನುಮೋದಿಸಲು ಸಿದ್ದತೆ ನಡೆಸಿದೆ. ಆದರೆ ದೇಶಾದ್ಯಂತ ರೈತರು “ಈ ಸುಗ್ರಿವಾಜ್ಞೆಗಳು ಕೃಷಿಯನ್ನು ಕಾರ್ಪೋರೇಟ್ ಕೈಗೆ ಒಪ್ಪಿಸುವ ಹುನ್ನಾರವಾಗಿದ್ದು, ಒಂದು ವೇಳೆ ಅಂಗೀಕಾರಗೊಂಡಲ್ಲಿ ರೈತರು ತಮ್ಮ ಸ್ವಾಯುತ್ತತೆಯನ್ನು ಕಳೆದುಕೊಳ್ಳಲಿದ್ದಾರೆ” ಎಂದು ಆರೋಪಿಸಿದ್ದಾರೆ.

ರೈತರ ಉತ್ಪನ್ನ ವ್ಯಾಪಾರ ಹಾಗೂ ವಾಣಿಜ್ಯ (ಉತ್ತೇಜನ ಹಾಗೂ ಸೌಕರ್ಯ) ಸುಗ್ರಿವಾಜ್ಞೆಯು ರಾಜ್ಯಗಳ ಎಪಿಎಂಸಿ ಕಾಯ್ದೆಗಿಂತಲೂ ಮೇಲುಗೈ ಸಾಧಿಸುತ್ತದೆ. ಆಗ ಯಾವುದೇ ರಾಜ್ಯಗಳಲ್ಲಿ ಬೇಕಾದರೂ ಮುಕ್ತವಾಗಿ ಮಾರಬಹುದಾದ ವ್ಯವಸ್ಥೆಯಿಂದಾಗಿ ಸ್ಥಳೀಯ ಮತ್ತು ಸಣ್ಣ ಪುಟ್ಟ ರೈತರು ತೀವ್ರ ಸಂಕಷ್ಟಕ್ಕೊಳಗಾಗುತ್ತಾರೆ ಎಂಬುದು ರೈತರ ಆತಂಕವಾಗಿದೆ. ಇದು ಈಗಿನ ಮಂಡಿ ಮಾರುಕಟ್ಟೆ ವ್ಯವಸ್ತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ರೈತರೆಲ್ಲರೂ ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಬೇಕಾದ ದುಸ್ಥಿತಿಗೆ ತಲುಪುತ್ತಾರೆ ಎಂಬುದು ರೈತರ ಚಿಂತೆಯಾಗಿದೆ.


ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!


ಆದರೆ ಕೇಂದ್ರ ಸರ್ಕಾರ ಇದು ರೈತರು ತಮ್ಮ ಬೆಳೆಗಳನ್ನು ಸ್ಪರ್ಧಾತ್ಮಕ ಬೆಲೆಗೆ ಮಾರುವ ಅವಕಾಶ ನೀಡುವುದರಿಂದ ಇದು ರೈತ ಪರ ಎಂದು ಘೋಷಿಸಿದೆ. ಉತ್ಪಾದನೆ, ಸಾಗಾಟ, ಶೇಖರಣೆ ಮತ್ತು ಮಾರುಕಟ್ಟೆ ಸೇರಿದಂತೆ ಎಲ್ಲಾ ವಿಚಾರಗಳಿಗೂ ವಿದೇಶಿ ಹೂಡಿಕೆಯನ್ನು ಆಕರ್ಷಿಸುವ ಮೂಲಕ ಗುತ್ತಿಗೆ ಕೃಷಿಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಇದು ರೈತರಿಗೆ ವರವಾಗಿ ಪರಿಣಮಿಸಲಿದೆ ಎಂಬುದು ಕೇಂದ್ರದ ವಾದವಾಗಿದೆ.

ರೈತರು ಕೇಂದ್ರ ವಾದವನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ದೊಡ್ಡ ದೊಡ್ಡ ಕಾರ್ಪೋರೇಟ್‌ಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಕಿಡಿಕಾರಿದ್ದಾರೆ. ಗುರುವಾರದಿಂದ ಪ್ರತಿಭಟನೆ ಆರಂಭಿಸಿರುವ ಅವರು ಯಾವುದೇ ಕಾರಣಕ್ಕೂ ಸುಗ್ರೀವಾಜ್ಞೆ ಅಂಗೀಕಾರವಾಗಬಾರದು ಎಂದು ಪಟ್ಟು ಹಿಡಿದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ರೈತರು ಹರಿಯಾಣದ ಕುರುಕ್ಷೇತ್ರದಲ್ಲಿ ಹೆದ್ದಾರಿಗಳನ್ನು ಬಂದ್ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹರಿಯಾಣ ಪೊಲೀಸರು ಲಾಠಿಚಾರ್ಜ್ ಮಾಡಿ ಪ್ರತಿಭಟನೆ ಹತ್ತಿಕ್ಕಿದ್ದಾರೆ. ಹರಿಯಾಣದ ಬಿಜೆಪಿ ಮುಖ್ಯಸ್ಥ ಓಂ ಪ್ರಕಾಶ್ ಧನ್ಕಾರ್‌ರೊಂದಿಗೆ ಹಲವು ಸಂಸದರು ಪ್ರತಿಭಟನಾನಿರತ ರೈತರನ್ನು ಮಾತನಾಡಿಸಿ ಅವರ ಮನವೊಲಿಸುವ ವಿಫಲ ಯತ್ನ ನಡೆಸಿದ್ದಾರೆ.

ಈ ಕುರಿತು ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪೇಂದರ್ ಸಿಂಗ್ ಹೂಡಾ ಮಾತನಾಡಿ “ಇದು ರೈತರ ಹಿತಾಸಕ್ತಿಗಳಿಗೆ ವಿರುದ್ಧವಿರುವ ಸುಗ್ರಿವಾಜ್ಞೆಯಾಗಿದೆ. ಕೇಂದ್ರಕ್ಕೆ ನಿಜಕ್ಕೂ ರೈತರ ಬಗ್ಗೆ ಕಾಳಜಿಯಿದ್ದರೆ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಯಾವುದೇ ಉತ್ಪನ್ನಗಳನ್ನು ಕೊಳ್ಳುವಂತಿಲ್ಲ ಎಂಬ ಸುಗ್ರಿವಾಜ್ಞೆ ತರಲಿ” ಎಂದು ಆಗ್ರಹಿಸಿದ್ದಾರೆ.

ಈ ಮುಂಚೆಯೇ ಕರ್ನಾಟಕದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಾಗ ರಾಜ್ಯದ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇನ್ನು ನಾಳೆಯಿಂದ ಅಧಿವೇಶನ ಆರಂಭವಾಗಲಿದ್ದು ದೇಶಾದ್ಯಂತ ರೈತರು ಬೀದಿಗಳಿಯುವ ಸಾಧ್ಯತೆಯಿದೆ.


ಇದನ್ನೂ ಓದಿ: ಸಿದ್ದರಾಮಯ್ಯ ವಿಶೇಷ ಸಂದರ್ಶನ: ನಾನು ಸಿಎಂ ಆಗಿದ್ದಿದ್ದರೆ ಈ ಜನದ್ರೋಹಿ ಸುಗ್ರೀವಾಜ್ಞೆ ತರಲ್ಲ ಅಂತ ಕೇಂದ್ರದ ಮುಖಕ್ಕೆ ಹೇಳ್ತಿದ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...