Homeಮುಖಪುಟಕ್ಷಮೆ ಕೇಳುವುದಿಲ್ಲ, ದಂಡ ಕಟ್ಟುವುದಿಲ್ಲ: ಕಾಮಿಡಿಯನ್ ಕುನಾಲ್ ಕಮ್ರ

ಕ್ಷಮೆ ಕೇಳುವುದಿಲ್ಲ, ದಂಡ ಕಟ್ಟುವುದಿಲ್ಲ: ಕಾಮಿಡಿಯನ್ ಕುನಾಲ್ ಕಮ್ರ

"ನನ್ನ ಟ್ವೀಟ್‌ಗಳನ್ನು ಹಿಂತೆಗೆದುಕೊಳ್ಳುವ ಅಥವಾ ಅವರಲ್ಲಿ ಕ್ಷಮೆಯಾಚಿಸುವ ಉದ್ದೇಶ ನನಗಿಲ್ಲ. ಅವು ತಮ್ಮಷ್ಟಕ್ಕೇ ಹೇಳಬೇಕಾದುದ್ದನ್ನು ಹೇಳುತ್ತವೆ ಎಂದು ನಾನು ನಂಬುತ್ತೇನೆ"

- Advertisement -
- Advertisement -

ಸುಪ್ರೀಂಕೋರ್ಟ್‌ ಕಾರ್ಯವಿಧಾನವನ್ನು ಟೀಕಿಸಿ ಮಾಡಿರುವ ಟ್ವೀಟ್‌ಗಳನ್ನು ಡಿಲೀಟ್ ಮಾಡುವುದಿಲ್ಲ. ನ್ಯಾಯಾಂಗ ನಿಂದನೆ ಪ್ರಕರಣದ ಸಂಬಂಧ ಕ್ಷಮೆ ಯಾಚಿಸುವುದಿಲ್ಲ, ದಂಡ ಕಟ್ಟುವುದಿಲ್ಲ ಎಂದು ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರ ಸ್ಪಷ್ಟಪಡಿಸಿದ್ದಾರೆ.

ವಂಚನೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದನ್ನು ಟೀಕಿಸಿ ಕಮ್ರ ಟ್ವೀಟ್ ಮಾಡಿದ್ದರು. ಈ ಸಂದರ್ಭದಲ್ಲಿ ದೇಶದಲ್ಲಿ ನೂರಾರು ಹೋರಾಟಗಾರರು ಹಲವಾರು ವರ್ಷಗಳಿಂದ ರಾಜಕೀಯ ಖೈದಿಗಳಾಗಿ ಜೈಲಿನಲ್ಲಿದ್ದರೂ ಅವರಿಗೆ ಏಕೆ ಜಾಮೀನು ನೀಡಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಖ್ಯಾತ ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರ ಸುಪ್ರೀಂ ತೀರ್ಪನ್ನು ಟ್ರೋಲ್ ಮಾಡಿದ್ದರು.

“ನನ್ನ ಟ್ವೀಟ್‌ಗಳನ್ನು ಹಿಂತೆಗೆದುಕೊಳ್ಳುವ ಅಥವಾ ಅವರಲ್ಲಿ ಕ್ಷಮೆಯಾಚಿಸುವ ಉದ್ದೇಶ ನನಗಿಲ್ಲ. ಅವು ತಮ್ಮಷ್ಟಕ್ಕೇ ಹೇಳಬೇಕಾದುದ್ದನ್ನು ಹೇಳುತ್ತವೆ ಎಂದು ನಾನು ನಂಬುತ್ತೇನೆ” ಎಂದು ಮುಂಬೈ ಮೂಲದ ಕುನಾಲ್ ಕಮ್ರ ಟ್ವೀಟ್‌ ಮಾಡಿದ್ದಾರೆ. ಜೊತೆಗೆ “ವಕೀಲರು ಇಲ್ಲ, ಕ್ಷಮಾಪಣೆ ಇಲ್ಲ, ದಂಡ ಕಟ್ಟಲ್ಲ, ಸಮಯ ಹಾಳು ಮಾಡಲ್ಲ” ಎಂದು ತಮ್ಮ ಪತ್ರದೊಂದಿಗೆ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕುನಾಲ್ ಕಮ್ರ ವಿರುದ್ಧ ಎಂಟು ಜನರಿಗೆ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು  ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅನುಮತಿ ನೀಡುವ ಮೂಲಕ, ಕಮ್ರ ತಮಾಷೆಯ ಗೆರೆಯನ್ನು ದಾಟಿದ್ದಾರೆ ಎಂದು ಹೇಳಿದ್ದಾರೆ.

“ಸುಪ್ರೀಂ ಕೋರ್ಟ್ ಮೇಲೆ ಅನ್ಯಾಯವಾಗಿ ಕೆಟ್ಟ ರೀತಿಯಲ್ಲಿ ದಾಳಿ ಮಾಡುವುದು ಶಿಕ್ಷೆಗೆ ಕಾರಣವಾಗುತ್ತದೆ ಎಂದು ಜನರು ಅರ್ಥಮಾಡಿಕೊಳ್ಳುವ ಸಮಯ ಇದು” ಎಂದು ಅಟಾರ್ನಿ ಜನರಲ್ ವೇಣುಗೋಪಾಲ್ ಅವರು  ಕಮ್ರ ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲು ತಮ್ಮ ಅನುಮತಿಯನ್ನು ಕೇಳಿದ ವಕೀಲರಿಗೆ ಉತ್ತರಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ, ಮುಂಬೈಯಿಂದ ಲಕ್ನೋಗೆ ಇಂಡಿಗೋ ವಿಮಾನದಲ್ಲಿ ಅರ್ನಾಬ್ ಗೋಸ್ವಾಮಿ ಅವರನ್ನು ಪ್ರಶ್ನಿಸಿದ ನಂತರ ಕಮ್ರ ಅವರನ್ನು ಹಲವಾರು ವಿಮಾನಯಾನ ಸಂಸ್ಥೆಗಳು ನಿಷೇಧಿಸಿವೆ.

ಇತ್ತ ಹಲವು ಸಾಮಾಜಿಕ ಹೋರಾಟಗಾರರು, ನೆಟ್ಟಿಗರು “ಕುನಾಲ್ ಕಮ್ರ ಟ್ವೀಟ್ ನಿಮಗೆ ಇಷ್ಟವಾಗದಿದ್ದರೆ ಅದನ್ನು ಓದಬೇಡಿ ಅಷ್ಟೇ” ಅವರ ಮೇಲೆಕೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುತ್ತೀರಿ ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನಿಸುತ್ತಿದ್ದಾರೆ.


ಇದನ್ನೂ ಓದಿ: ಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...