Homeಮುಖಪುಟಧರ್ಮ, ಜಾತಿ ಆಧಾರದಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

ಧರ್ಮ, ಜಾತಿ ಆಧಾರದಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

- Advertisement -
- Advertisement -

ಲೋಕಸಭೆ ಚುನಾವಣೆಗೆ ಮುನ್ನ, ಜಾತಿ, ಧರ್ಮ ಮತ್ತು ಭಾಷೆಯ ಆಧಾರದ ಮೇಲೆ ಮತ ಕೇಳುವುದನ್ನು ತಪ್ಪಿಸಬೇಕು ಮತ್ತು ಭಕ್ತ(ಜನರ ನಂಬಿಕೆ)- ದೇವರು ಸಂಬಂಧವನ್ನು ಅವಮಾನಿಸದಂತೆ ಚುನಾವಣಾ ಆಯೋಗವು ಪಕ್ಷಗಳು ಮತ್ತು ಅವರ ರಾಜಕೀಯ ಪಕ್ಷದ ನಾಯಕರಿಗೆ ತಿಳಿಸಿದ್ದಾರೆ.

ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಪಕ್ಷಗಳು, ಅಭ್ಯರ್ಥಿಗಳು ಮತ್ತು ಸ್ಟಾರ್ ಪ್ರಚಾರಕರಿಗೆ ಕಠಿಣ ಕ್ರಮದ ಎಚ್ಚರಿಕೆಯನ್ನು ಚುನಾವಣಾ ಆಯೋಗವು ನೀಡಿದ್ದು, ದೇವಾಲಯಗಳು, ಚರ್ಚ್‌ಗಳು, ಗುರುದ್ವಾರಗಳು ಅಥವಾ ಯಾವುದೇ ಇತರ ಪೂಜಾ ಸ್ಥಳಗಳನ್ನು  ಚುನಾವಣಾ ಪ್ರಚಾರಕ್ಕಾಗಿ ಬಳಸಬಾರದು ಎಂದು ಹೇಳಿದ್ದಾರೆ.

ಈ ಹಿಂದೆ ನೋಟೀಸ್ ಪಡೆದಿರುವ ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳು ಮಾದರಿ ಸಂಹಿತೆಯನ್ನು ಮತ್ತೆ  ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗವು ಹೇಳಿದೆ. ಈ ತಿಂಗಳ ಕೊನೆಯಲ್ಲಿ ಲೋಕಸಭೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಘೋಷಣೆಯ ನಿರೀಕ್ಷೆಯ ಮಧ್ಯೆಯೇ ಬೆಳವಣಿಗೆ ನಡೆದಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಈ ಬಗ್ಗೆ ಮಾತನಾಡಿ, ರಾಜಕೀಯ ಪಕ್ಷಗಳು ಗೌರವಯುತವಾಗಿ ರಾಜಕೀಯ ವಿಚಾರಗಳನ್ನು ಪ್ರಸ್ತಾಪಿಸಬೇಕು ಅಥವಾ ಭಾಷಣವನ್ನು ಮಾಡಬೇಕು, ಅದು ವಿಭಜನೆಯ ಬದಲು ಜನರನ್ನು ಸೂಕ್ತರನ್ನು ಆಯ್ಕೆ ಮಾಡಲು ಪ್ರೇರೇಪಿಸುವಂತಿರಬೇಕು, ವೈಯಕ್ತಿಕ ದಾಳಿಯ ಬದಲಿಗೆ ಜನರಿಗೆ ಆಲೋಚನೆ ಮಾಡಲು ಉತ್ತೇಜಿಸುವಂತಿರಬೇಕು ಎಂದು ಹೇಳಿದ್ದಾರೆ.

ಸಾರ್ವಜನಿಕ ಪ್ರಚಾರದಲ್ಲಿ ಸೌಜನ್ಯವನ್ನು ಕಾಪಾಡಿಕೊಳ್ಳಲು ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ವಿಶೇಷವಾಗಿ ಈ ಹಿಂದೆ ನೋಟಿಸ್ ನೀಡದವರಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಪ್ರಚಾರ ಮಾಡುವಾಗ ವಿಷಯಾಧಾರಿತವಾಗಿ  ಚುನಾವಣಾ ಚರ್ಚೆ ಮಾಡುವಂತೆ ಪಕ್ಷಗಳನ್ನು ಕೇಳಿದೆ ಮತ್ತು ಪಕ್ಷಗಳು ಮತ್ತು ಅವುಗಳ ನಾಯಕರು ವಾಸ್ತವದ ಆಧಾರವಿಲ್ಲದೆ, ಮತದಾರರನ್ನು ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನೀಡಬಾರದು ಎಂದು ಚುನಾವಣಾ ಆಯೋಗ ಹೇಳಿದೆ. ಪ್ರತಿಸ್ಪರ್ಧಿಗಳನ್ನು ನಿಂದಿಸುವ ಅಥವಾ ಅವಮಾನಿಸುವ ಪೋಸ್ಟ್‌ಗಳು, ಕೆಟ್ಟ ಅಭಿರುಚಿಯ ಅಥವಾ ಘನತೆಗೆ ಧಕ್ಕೆ ತರುವ ಪೋಸ್ಟ್‌ಗಳನ್ನು ಮಾಡಬಾರದು ಅಥವಾ ಹಂಚಿಕೊಳ್ಳಬಾರದು ಎಂದು ಕೂಡ ಚುನಾವಣಾ ಆಯೋಗ ತಿಳಿಸಿದೆ.

ಇದನ್ನು ಓದಿ: ನಿತಿನ್ ಗಡ್ಕರಿ ಕುರಿತ ವಿಡಿಯೋ ಹಂಚಿಕೊಂಡ ಖರ್ಗೆ, ಜೈರಾಮ್ ರಮೇಶ್‌ಗೆ ನೊಟೀಸ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...