Homeಮುಖಪುಟ'ಸಂಸತ್ತೇ ಪರಮೋಚ್ಛ': ನ್ಯಾಯಾಂಗದ ಬಗ್ಗೆ ಜಗದೀಪ್ ಧನ್ಕರ್ ಮತ್ತೆ ಅಸಮಾಧಾನ

‘ಸಂಸತ್ತೇ ಪರಮೋಚ್ಛ’: ನ್ಯಾಯಾಂಗದ ಬಗ್ಗೆ ಜಗದೀಪ್ ಧನ್ಕರ್ ಮತ್ತೆ ಅಸಮಾಧಾನ

- Advertisement -
- Advertisement -

“ಸಂಸತ್ತೇ (ಶಾಸಕಾಂಗ) ಪರಮೋಚ್ಛ’ ಮತ್ತು ‘ಚುನಾಯಿತ ಪ್ರತಿನಿಧಿಗಳು’ (ಸಂಸತ್ತಿನ ಸದಸ್ಯರು) ಸಂವಿಧಾನ ಹೇಗಿರುತ್ತದೆ ಎಂಬುದರ ಅಂತಿಮ ನಿರ್ಧಾರ ತೆಗೆದುಕೊಳ್ಳುವವರಾಗಿರುತ್ತಾರೆ ಮತ್ತು ಅದರ ಮೇಲೆ ಯಾವುದೇ ಅಧಿಕಾರವಿರುವುದಿಲ್ಲ” ಎಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹೇಳಿದ್ದಾರೆ. ಈ ಮೂಲಕ ನ್ಯಾಯಾಂಗದ ಬಗ್ಗೆ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ (ಏ.22) ದೆಹಲಿ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಮಾತನಾಡಿದ ಧನ್ಕರ್ ಅವರು, “ನ್ಯಾಯಾಂಗದ ಕುರಿತ ತನ್ನ ಹಿಂದಿನ ಹೇಳಿಕೆಗಳನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದು,
“ಸಾಂವಿಧಾನಿಕ ಹುದ್ದೆಯಲ್ಲಿರುವವರು ಮಾತನಾಡುವ ಪ್ರತಿಯೊಂದು ಪದವೂ ಅತ್ಯುನ್ನತ ರಾಷ್ಟ್ರೀಯ ಹಿತಾಸಕ್ತಿಯಿಂದ ಮಾರ್ಗದರ್ಶಿಸಲ್ಪಡುತ್ತದೆ” ಎಂದಿದ್ದಾರೆ.

ಸುಪ್ರೀಂ ಕೋರ್ಟ್‌ನ ಎರಡು ವಿರೋಧಾತ್ಮಕ ಹೇಳಿಕೆಗಳನ್ನು ಉಪರಾಷ್ಟ್ರಪತಿ ಉಲ್ಲೇಖಿಸಿದ್ದು, “ಒಂದು ಪ್ರಕರಣದಲ್ಲಿ, ಸುಪ್ರೀಂ ಕೋರ್ಟ್ ಪೀಠಿಕೆ ಸಂವಿಧಾನದ ಭಾಗವಲ್ಲ ಎಂದು ಹೇಳುತ್ತದೆ (ಐಸಿ ಗೋಲಕ್‌ನಾಥ್ ಪ್ರಕರಣ) ಮತ್ತು ಇನ್ನೊಂದು ಪ್ರಕರಣದಲ್ಲಿ ಅದು ಸಂವಿಧಾನದ ಭಾಗವಾಗಿದೆ (ಕೇಶವಾನಂದ ಭಾರತಿ) ಎಂದು ಹೇಳುತ್ತದೆ” ಎಂದಿದ್ದಾರೆ. ಇಂದಿರಾ ಗಾಂಧಿ 1975ರಲ್ಲಿ ತುರ್ತು ಪರಿಸ್ಥಿತಿ ಹೇರಿದಾಗ ನ್ಯಾಯಾಲಯ ವಹಿಸಿದ ಪಾತ್ರವನ್ನು ಪ್ರಶ್ನಿಸಿದ್ದಾರೆ.

“ಪ್ರಜಾಪ್ರಭುತ್ವ ಇತಿಹಾಸದಲ್ಲಿ ಅತ್ಯಂತ ಕರಾಳ ಹಂತವಾದ” ತುರ್ತು ಪರಿಸ್ಥಿತಿ ಹೇರಿಕೆ ಮತ್ತು ಮೂಲಭೂತ ಹಕ್ಕುಗಳ ಅಮಾನತು ಕುರಿತು ಒಂಬತ್ತು ಹೈಕೋರ್ಟ್‌ಗಳು ನೀಡಿದ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನಾನು ‘ಕರಾಳ’ ಎಂದೇ ಹೇಳುತ್ತೇನೆ. ಏಕೆಂದರೆ, ದೇಶದ ಅತ್ಯುನ್ನತ ನ್ಯಾಯಾಲಯವು ಒಂಬತ್ತು ಹೈಕೋರ್ಟ್‌ಗಳ ತೀರ್ಪುಗಳನ್ನು ನಿರ್ಲಕ್ಷಿಸಿದೆ. ಪ್ರಜಾಪ್ರಭುತ್ವದಲ್ಲಿ ಮೂಲಭೂತ ಹಕ್ಕುಗಳನ್ನು ಎಂದಿಗೂ ತಡೆಹಿಡಿಯಲಾಗುವುದಿಲ್ಲ”

“ಆದರೆ ಅದು (ಆ ಹಕ್ಕುಗಳ ಅಮಾನತು) ಮಾಡಲಾಯಿತು. ಸುಪ್ರೀಂ ಕೋರ್ಟ್ ತನ್ನನ್ನು ಮೂಲಭೂತ ಹಕ್ಕುಗಳ ಏಕೈಕ ತೀರ್ಪುಗಾರ ಎಂದು ಪರಿಗಣಿಸಿದೆ. ಅದು ಎಷ್ಟು ಸಮಯದವರೆಗೆ ಬೇಕಾದರೂ ಅಮಾನತುಗೊಳಿಸಬಹುದು” ಎಂದು ಜಗದೀಪ್ ಧನ್ಕರ್ ಟೀಕಿಸಿದ್ದಾರೆ.

“ಆದರೆ ತುರ್ತು ಪರಿಸ್ಥಿತಿ ಹೇರಿದ ಪ್ರಧಾನಿಯನ್ನು (ಇಂದಿರಾ ಗಾಂಧಿಯನ್ನು ಉಲ್ಲೇಖಿಸಿ) 1977 ರಲ್ಲಿ ಹೊಣೆಗಾರರನ್ನಾಗಿ ಮಾಡಲಾಯಿತು. ಆಗ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸಾರ್ವತ್ರಿಕ ಚುನಾವಣೆಯಲ್ಲಿ ಸೋತಿತು. ಆದ್ದರಿಂದ, ಸಂವಿಧಾನದ ಬಗ್ಗೆ ಯಾವುದೇ ಸಂದೇಹ ಬೇಡ. ಸಂವಿಧಾನವು ಜನರಿಗಾಗಿ ಮತ್ತು ಅದು ಅದನ್ನು ರಕ್ಷಿಸುವ ‘ಭಂಡಾರ’ ಎಂದು ಧನ್ಕರ್ ಹೇಳಿದ್ದಾರೆ.

‘ಶರಬತ್ ಜಿಹಾದ್’ ಹೇಳಿಕೆ ಆಘಾತಕಾರಿ: ಪತಂಜಲಿಯ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...