Homeಮುಖಪುಟಉತ್ತರಪ್ರದೇಶ: ಬಿಜೆಪಿ ಮಾಜಿ ಸಂಸದರ ಪುತ್ರ ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ಸಾವು

ಉತ್ತರಪ್ರದೇಶ: ಬಿಜೆಪಿ ಮಾಜಿ ಸಂಸದರ ಪುತ್ರ ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ಸಾವು

- Advertisement -
- Advertisement -

ಉತ್ತರಪ್ರದೇಶದ ಲಕ್ನೋದಲ್ಲಿನ ಆಸ್ಪತ್ರೆಯಲ್ಲಿ ಬಿಜೆಪಿಯ ಮಾಜಿ ಸಂಸದರೋರ್ವರ ಪುತ್ರನಿಗೆ ಬೆಡ್‌ ಖಾಲಿ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ದಾಖಲಿಸಲು ನಿರಾಕರಿಸಿದ್ದು, ಗಂಭೀರವಸ್ಥೆಯಲ್ಲಿದ್ದ ಅವರು ಸೂಕ್ತ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ.

ಸಂಜಯ್‌ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪುತ್ರ ನಿಧನರಾದ ಬಳಿಕ ಬಂಡಾ ಕ್ಷೇತ್ರದ ಮಾಜಿ ಸಂಸದ ಭೈರೋನ್‌ ಪ್ರಸಾದ್‌ ಮಿಶ್ರಾ ಅವರು ಆಸ್ಪತ್ರೆಯಲ್ಲಿ ಧರಣಿ ಕುಳಿತಿದ್ದರು. ಯಾವುದೇ ತುರ್ತು ಹಾಸಿಗೆಗಳು ಲಭ್ಯವಿಲ್ಲ ಎಂದು ಕರ್ತವ್ಯ ನಿರತ ಅಧಿಕಾರಿಗಳು ಹೇಳಿ ಸಂಸದರ ಮಗ ಪ್ರಕಾಶ್ ಮಿಶ್ರಾಗೆ ದಾಖಲಿಸಲು ನಿರಾಕರಿಸಿದ ಕಾರಣ ಅವರ ಸಾವು ಸಂಭವಿಸಿದೆ.

ಮಾಜಿ ಸಂಸದರು ತಮ್ಮ ಮಗ 40 ವರ್ಷದ ಪ್ರಕಾಶ್ ಮಿಶ್ರಾ ಅವರನ್ನು ಶನಿವಾರ ರಾತ್ರಿ 11 ಗಂಟೆಗೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಅವರು ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ

ಹಿರಿಯ ಅಧಿಕಾರಿಗಳು ಬಂದು ಅವರನ್ನು ಭೇಟಿಯಾದ ಬಳಿಕ ಭೈರೋನ್ ಪ್ರಸಾದ್ ಅವರು ಬೆಳಿಗ್ಗೆ 4 ಗಂಟೆಗೆ ಧರಣಿಯನ್ನು ಕೊನೆಗೊಳಿಸಿದ್ದಾರೆ.

ಭೈರೋನ್ ಪ್ರಸಾದ್ ಅವರು 2014 ಮತ್ತು 2019ರ ನಡುವೆ ಬಂಡಾ ಕ್ಷೇತ್ರದ ಸಂಸದರಾಗಿದ್ದರು. 2019ರಲ್ಲಿ ಅವರಿಗೆ ಟಿಕೆಟ್ ನಿರಾಕರಿಸಿದಾಗ ಅವರು ಬಿಜೆಪಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದರು.

ಸೋಮವಾರ ಲಕ್ನೋ ಜಿಲ್ಲಾಡಳಿತವು ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಸೂಚಿಸಿದೆ. ಪ್ರಾಥಮಿಕ ತನಿಖೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿರುವ ಸಂಬಂಧಪಟ್ಟ ವೈದ್ಯರನ್ನು ಸಂಸ್ಥೆಯಿಂದ ಬಿಡುಗಡೆಗೊಳಿಸಲಾಗುತ್ತಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಪಿಜಿಐ ನಿರ್ದೇಶಕರಿಗೆ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ಉತ್ತರಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಹೇಳಿದ್ದಾರೆ.

ಸರ್ಕಾರದ ತನಿಖೆಗೆ ಆದೇಶ ನೀಡುವ ಮೊದಲು ಪಿಜಿಐ ನಿರ್ದೇಶಕ ಪ್ರೊಫೆಸರ್ ಆರ್.ಕೆ. ಧೀಮನ್  ತನಿಖೆಗೆ ಆದೇಶಿಸಿದ್ದರು ಎಂದು ವರದಿ ತಿಳಿಸಿದೆ.

ಈ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ ಬಿಜೆಪಿ ನೇತೃತ್ವದ ಯುಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿಯ ಮಾಜಿ ಸಂಸದರೊಬ್ಬರ ಮಗನಿಗೂ ಚಿಕಿತ್ಸೆ ಸಿಗುತ್ತಿಲ್ಲ ಎಂದಾದರೆ ಜನಸಾಮಾನ್ಯರ ಬಗ್ಗೆ ಏನು ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಹೊರ ರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಮುಗಿದ ಬಳಿಕ ಉತ್ತರಪ್ರದೇಶದ ಬಿಜೆಪಿ ಮಂತ್ರಿಗಳು ಇದನ್ನು ಅರಿಯುತ್ತಾರೆ, ಏಕೆಂದರೆ ಈಗ ಚುನಾವಣೆಗಳು ನಡೆಯುತ್ತಿದೆ ಅವರಿಗೆ ಚುನಾವಣೆ ಯಾರದ್ದೋ ಜೀವನಕ್ಕಿಂತ ಮುಖ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ಮೊರ್ಬಿ ಸೇತುವೆ ದುರಂತಕ್ಕೆ 1ವರ್ಷ: ಸಂತ್ರಸ್ತರ ಕುಟುಂಬಸ್ಥರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಸಾವು; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...