Homeಮುಖಪುಟ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

- Advertisement -
- Advertisement -

ಅಲೋಪತಿ ಮತ್ತು ಅಲೋಪತಿ ವೈದ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಟೀಕೆಗೆ ಗುರಿಯಾಗಿದ್ದ ಬಾಬಾ ರಾಮ್‌ದೇವ್ ಮತ್ತೆ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಹೇಳಿಕೆಗಳ ಬಗ್ಗೆ ವಿಚಾರಣೆಗೆ ನೋಟಿಸ್, ಬಂಧನದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ರಾಮ್‌ದೇವ್ ನನ್ನನ್ನು ಬಂಧಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ.

ಬುಧವಾರ ಸಾಮಾಜಿಕ ಜಾಲತತಾಣಗಳಲ್ಲಿ ವಿಡಿಯೊ ಓಡಾಡುತ್ತಿದ್ದು, ಅದರಲ್ಲಿ ನನ್ನನ್ನು ಬಂಧಿಸಲು ಅವರಲ್ಲ, ಅವರ ಅಪ್ಪನಿಂದಲೂ ಸ್ವಾಮಿ ಬಾಬಾ ರಾಮ್‌ವೇವ್ ಅವರನ್ನು ಬಂಧಿಸಲು ಸಾಧ್ಯವಿಲ್ಲ   (‘ಅರೆಸ್ಟ್ ತೋ ಉನ್ಕಾ ಬಾಪ್ ಭೀ ನಹಿ ಕರ್ ಸಕ್ತ ಸ್ವಾಮಿ ರಾಮದೇವ್ ಕೊ) ಎಂದು ವ್ಯಂಗ್ಯವಾಡುತ್ತಾ ನಗುತ್ತಿದ್ದಾರೆ.

’ಅವರು ಕೇವಲ ಸದ್ದು ಮಾಡುತ್ತಾರೆ. ಬಂಧಿಸಲು ಸಾಧ್ಯವಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ದಿನ ಒಂದೊಂದು ಹ್ಯಾಟ್‌ಟ್ಯಾಗ್ ಟ್ರೆಂಡ್ ಮಾಡುತ್ತಾರೆ. ಅವರು ಸದ್ದು ಮಾಡಲಿ ಬಿಡಿ’ ಎಂದಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಮಂದಿ ಹಂಚಿಕೊಂಡು ಟೀಕಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನರಿಗೆ ಒಮ್ಮೆ ಕೋವ್ಯಾಕ್ಸಿನ್, ಒಮ್ಮೆ ಕೋವಿಶೀಲ್ಡ್ ಲಸಿಕೆ ನೀಡಿದ ಅಧಿಕಾರಿಗಳು!

 

ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಭಾರತೀಯ ವೈದ್ಯಕೀಯ ಸಂಘ (IMA) ರಾಮದೇವ್ ವಿರುದ್ಧ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿ, 15 ದಿನಗಳಲ್ಲಿ ರಾಮದೇವ್ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ. ಬಾಬಾ ರಾಮ್‌ದೇವ್ ಕ್ಷಮೆ ಕೇಳದಿದ್ದರೇ ಯೋಗ ಗುರುಗಳಿಂದ 1,000 ಕೋಟಿ ರೂಪಾಯಿ ಮಾನನಷ್ಟ ಪರಿಹಾರ ಕೋರಿ ಮೊಕದ್ದಮೆ ನೋಟಿಸ್ ನೀಡಿದೆ.

ಐಎಂಎ (ಉತ್ತರಾಖಂಡ) ಕಾರ್ಯದರ್ಶಿ ಅಜಯ್ ಖನ್ನಾ ಅವರ ಪರವಾಗಿ ನೀಡಲಾದ ಆರು ಪುಟಗಳ ನೋಟೀಸ್‌ನಲ್ಲಿ, ’ರಾಮದೇವ್ ಹೇಳಿಕೆಗಳಿಂದ ಅಲೋಪತಿ ವೈದ್ಯಕೀಯ ಕ್ಷೇತ್ರದ ಗೌರವ ಮತ್ತು ಘನತೆಗೆ ಹಾನಿಯಾಗಿದೆ. ಜೊತೆಗೆ ಈ ಕ್ಷೇತ್ರದ ಸುಮಾರು 2 ಸಾವಿರ ವೈದ್ಯರಿಗೆ ಅಪಮಾನವಾಗಿದೆ ಎಂದು ದೂರಿದ್ದಾರೆ.

ಜೊತೆಗೆ ದೇಶದ್ರೋಹ ಕಾನೂನಿನಡಿಯಲ್ಲಿ ಬಾಬಾ ರಾಮ್‌ದೇವ್ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದೆ.


ಇದನ್ನೂ ಓದಿ: ಬಾಬಾ ರಾಮದೇವ್ ವಿರುದ್ಧ 1,000 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...