Homeಅಂತರಾಷ್ಟ್ರೀಯಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

- Advertisement -
- Advertisement -

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ.

ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದೊಂದಿಗಿನ ವ್ಯಾಪಾರ ಒಪ್ಪಂದವು ಮುಂದುವರಿಯಲಿದೆ. ಅದರಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಹೇಳಿದ್ದಾರೆ.

“ಈ ಒಪ್ಪಂದದ ಅಡಿಯಲ್ಲಿ ಭಾರತವು ಸುಂಕಗಳನ್ನು ಪಾವತಿಸುವುದನ್ನು ಮುಂದುವರಿಸುತ್ತದೆ, ಆದರೆ ಅಮೆರಿಕವು ಸುಂಕಗಳನ್ನು ಪಾವತಿಸುವುದಿಲ್ಲ” ಎಂದು ಭಾರತದೊಂದಿಗೆ ಅಂತಿಮ ಹಂತದಲ್ಲಿರುವ ಒಪ್ಪಂದದ ಮೇಲೆ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಭಾವದ ಕುರಿತು ಕೇಳಲಾದ ಪ್ರಶ್ನೆಗೆ ಟ್ರಂಪ್ ಉತ್ತರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಸಂಬಂಧವು ಅತ್ಯುತ್ತಮವಾಗಿದ್ದು, ಭಾರತವು ತನ್ನ ಮನವಿಯ ಮೇರೆಗೆ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ಗಣನೀಯವಾಗಿ ಕಡಿಮೆ ಮಾಡಿದೆ ಎಂದು ಟ್ರಂಪ್ ಇದೇ ಸಂದರ್ಭದಲ್ಲಿ ಶ್ಲಾಘಿಸಿದ್ದಾರೆ.

ಅಮೆರಿಕದ ಸುಪ್ರೀಂ ಕೋರ್ಟ್ ಅಧ್ಯಕ್ಷರ ತುರ್ತು ಅಧಿಕಾರ ಬಳಸಿ ವಿಧಿಸಲಾಗಿದ್ದ ಸುಂಕಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ಬೆನ್ನಲ್ಲೇ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು 6-3 ಬಹುಮತದೊಂದಿಗೆ ಈ ಮಹತ್ವದ ತೀರ್ಪನ್ನು ನೀಡಿದೆ. 1977ರ ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆಯಡಿ (ಐಇಇಪಿಎ) ಟ್ರಂಪ್ ವಿಧಿಸಿದ್ದ ಜಾಗತಿಕ ಸುಂಕಗಳು ಅಸಿಂಧು ಎಂದು ಕೋರ್ಟ್ ಘೋಷಿಸಿದೆ. ಅಧ್ಯಕ್ಷರಿಗೆ ಸುಂಕಗಳನ್ನು ವಿಧಿಸಲು ಈ ಕಾನೂನು ಅಧಿಕಾರ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

“ನಮ್ಮ ಇಂದಿನ ಕಾರ್ಯವು ಕೇವಲ ಐಇಇಪಿಎ ಅಡಿಯಲ್ಲಿ ಅಧ್ಯಕ್ಷರಿಗೆ ನೀಡಲಾದ ‘ಆಮದನ್ನು ನಿಯಂತ್ರಿಸುವ’ ಅಧಿಕಾರವು ಸುಂಕಗಳನ್ನು ವಿಧಿಸುವ ಅಧಿಕಾರವನ್ನು ಒಳಗೊಂಡಿದೆಯೇ ಎಂದು ನಿರ್ಧರಿಸುವುದು ಮಾತ್ರ. ಅದು ಒಳಗೊಂಡಿಲ್ಲ” ಎಂದು ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ತಮ್ಮ ತೀರ್ಪಿನಲ್ಲಿ ಬರೆದಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರ ಈ ನಿರ್ಣಾಯಕ ಹೇಳಿಕೆಯು ಅಧ್ಯಕ್ಷರ ಆರ್ಥಿಕ ಅಧಿಕಾರ ವ್ಯಾಪ್ತಿಯನ್ನು ಸ್ಪಷ್ಟಪಡಿಸಿದೆ.

ಸುಪ್ರೀಂ ಕೋರ್ಟ್ ತೀರ್ಪಿನಿಂದ ಕುಪಿತಗೊಂಡ ಟ್ರಂಪ್, ಆ ತೀರ್ಪಿಗೆ ಸೆಡ್ಡು ಹೊಡೆದು ಹೊಸ ಕ್ರಮಗಳನ್ನು ಘೋಷಿಸಿದ್ದಾರೆ.

ಸುಪ್ರೀಂ ಕೋರ್ಟ್ ತನ್ನ ಹಳೆಯ ಸುಂಕದ ನೀತಿಯನ್ನು ರದ್ದುಗೊಳಿಸಿದ ಬೆನ್ನಲ್ಲೇ, ಟ್ರಂಪ್ 1974ರ ವ್ಯಾಪಾರ ಕಾಯ್ದೆಯ 122ನೇ ವಿಧಿಯ ಅಡಿಯಲ್ಲಿ ಹೊಸದಾಗಿ ಶೇ. 10 ರಷ್ಟು ಜಾಗತಿಕ ಸುಂಕವನ್ನು ಘೋಷಿಸಿದ್ದಾರೆ.

ಈ ಹೊಸ ಜಾಗತಿಕ ಸುಂಕದ ಹೊರತಾಗಿಯೂ, ಭಾರತದೊಂದಿಗೆ ಈ ತಿಂಗಳ ಆರಂಭದಲ್ಲಿ ಮಾಡಿಕೊಂಡ ವ್ಯಾಪಾರ ಒಪ್ಪಂದವು ಹಾಗೆಯೇ ಮುಂದುವರಿಯಲಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಟ್ರಂಪ್ ಅವರ ಈ ಹೊಸ ಆದೇಶವು ಫೆಬ್ರವರಿ 24 ರಿಂದ ಜಾರಿಗೆ ಬರಲಿದ್ದು, ಆರಂಭದಲ್ಲಿ 150 ದಿನಗಳ ಕಾಲ ಜಾರಿಯಲ್ಲಿರುತ್ತದೆ.

ಹೊಸದಾಗಿ ಘೋಷಿಸಲಾದ ಶೇ. 10 ರಷ್ಟು ಜಾಗತಿಕ ಸುಂಕವು ಭಾರತಕ್ಕೂ ಅನ್ವಯಿಸಲಿದೆ. ಮತ್ತೊಂದು ಕಾನೂನುಬದ್ಧ ಅಧಿಕಾರ ಅಥವಾ ಒಪ್ಪಂದ ಜಾರಿಗೆ ಬರುವವರೆಗೆ ಈ ಸುಂಕವು ಚಾಲ್ತಿಯಲ್ಲಿರುತ್ತದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟ್ರಂಪ್ ಹೇಳಿಕೆಯ ಹೊರತಾಗಿಯೂ, ಈ ಶೇ. 10ರಷ್ಟು ಸುಂಕವು ಸದ್ಯಕ್ಕೆ ಭಾರತದ ರಫ್ತುಗಳ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...