ಕೊರೋನಾ ಸಾಂಕ್ರಾಮಿಕದ ಕಾರಣದಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಿತ್ತು. ಅದೇ ಸಂದರ್ಭದಲ್ಲಿ SSLC ಪರೀಕ್ಷೆಗಳನ್ನು ರದ್ದು ಮಾಡಬೇಕೆಂಬ ಕೂಗು ಕೇಳಿಬಂದಿತ್ತು. ಪರಿಸ್ಥಿತಿಯನ್ನು ನೋಡಿ ನಿರ್ಧಾರ ಕೈಗೊಳ್ಳಲಾಗುವದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಂದು ತಿಳಿಸಿದ್ದರು. ಶಿಕ್ಷಣ ಇಲಾಖೆ ಜುಲೈ 19 ಮತ್ತು 22 ರಂದು ಎರಡು ದಿನಗಳಲ್ಲಿ ಪರೀಕ್ಷೆಗಳನ್ನು ನಡೆಸುವುದಾಗಿ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು SSLC ಪರೀಕ್ಷೆಯ ಕುರಿತಾಗಿನ ಎಲ್ಲಾ ಅನುಮಾನಗಳಿಗೆ ತೆರೆ ಎಳೆದಿದ್ದಾರೆ. 2021 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡುವ, ಮುಂದೂಡುವುದಿಲ್ಲ. ನಿಗಧಿಯಂತೆ ಪರೀಕ್ಷೆ ನಡೆಯಲಿದೆ ಎಂದು ಸರೇಶ್ ಕುಮಾರ್ ತಿಳಿಸಿದ್ದಾರೆ.
ನಿಗದಿತ ವೇಳಾಪಟ್ಟಿಯಂತೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಯ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಪರೀಕ್ಷಾ ವಿಧಾನದಲ್ಲಿಯೂ ಬದಲಾವಣೆಗಳಿಲ್ಲ. ಈ ಹಿಂದೆ ಹೇಳಿದ ರೀತಿಯಲ್ಲಿಯೇ SSLC ಪರೀಕ್ಷೆಗಳನ್ನು ನಡೆಸಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಯಾವುದೇ ಆತಂಕಬೇಡ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಜುಲೈ 19 ಮತ್ತು 22 ರಂದು ಎರಡು ದಿನಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಶಿಕ್ಷಣ ಇಲಾಖೆ ಇಂದು ಮಹತ್ವದ ಸಭೆ ನಡೆಸಿ ನಿರ್ಧಾರ ಕೈಗೊಂಡಿದೆ. ಜುಲೈ ತಿಂಗಳ ಮೂರನೇ ವಾರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಇಂದು (ಜೂನ್ 28) ನಡೆದ ಸಭೆಯಲ್ಲಿ ಅಂತಿಮಗೊಳಿಸಲಾಗಿದ್ದು, ಜುಲೈ 19 ರಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಬೆಳಗ್ಗೆ 10.30ರಿಂದ 1.30ರ ತನಕ ಹಾಗೂ ಭಾಷಾ ವಿಷಯಗಳ ಪರೀಕ್ಷೆ 22ರಂದು ಬೆಳಗ್ಗೆ 10.30ರಿಂದ 1.30ರ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದಾರೆ.
ಸುರಕ್ಷಿತ ವಾತಾವರಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಜಿಲ್ಲಾಧಿಕಾರಿಗಳು, ಸಿಇಒ, ಎಸ್‌ಪಿ, ಡಿಎಚ್‌ಒಗಳು ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ರಾಜ್ಯದ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಪಾಲ್ಗೊಂಡಿದ್ದರು.
ಇದನ್ನೂ ಓದಿ : ಜಮ್ಮು ಸೇನಾನೆಲೆಯ ಬಳಿ ಕಾಣಿಸಿಕೊಂಡ ಡ್ರೋಣ್‌ಗಳು: ಸೇನೆಯಿಂದ ಫೈರಿಂಗ್


