Homeಕರ್ನಾಟಕSSLC ಪರೀಕ್ಷೆಗಳು: ವೇಳಾಪಟ್ಟಿಯಲ್ಲಿ ಬದಲಾವಣೆಯಿಲ್ಲ ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್

SSLC ಪರೀಕ್ಷೆಗಳು: ವೇಳಾಪಟ್ಟಿಯಲ್ಲಿ ಬದಲಾವಣೆಯಿಲ್ಲ ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್

- Advertisement -
- Advertisement -

ಕೊರೋನಾ ಸಾಂಕ್ರಾಮಿಕದ ಕಾರಣದಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಿತ್ತು. ಅದೇ ಸಂದರ್ಭದಲ್ಲಿ SSLC ಪರೀಕ್ಷೆಗಳನ್ನು ರದ್ದು ಮಾಡಬೇಕೆಂಬ ಕೂಗು ಕೇಳಿಬಂದಿತ್ತು. ಪರಿಸ್ಥಿತಿಯನ್ನು ನೋಡಿ ನಿರ್ಧಾರ ಕೈಗೊಳ್ಳಲಾಗುವದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಂದು ತಿಳಿಸಿದ್ದರು. ಶಿಕ್ಷಣ ಇಲಾಖೆ ಜುಲೈ 19 ಮತ್ತು 22 ರಂದು ಎರಡು ದಿನಗಳಲ್ಲಿ ಪರೀಕ್ಷೆಗಳನ್ನು ನಡೆಸುವುದಾಗಿ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್‌ ಅವರು SSLC ಪರೀಕ್ಷೆಯ ಕುರಿತಾಗಿನ ಎಲ್ಲಾ ಅನುಮಾನಗಳಿಗೆ ತೆರೆ ಎಳೆದಿದ್ದಾರೆ. 2021 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡುವ, ಮುಂದೂಡುವುದಿಲ್ಲ. ನಿಗಧಿಯಂತೆ ಪರೀಕ್ಷೆ ನಡೆಯಲಿದೆ ಎಂದು ಸರೇಶ್ ಕುಮಾರ್ ತಿಳಿಸಿದ್ದಾರೆ.

ನಿಗದಿತ ವೇಳಾಪಟ್ಟಿಯಂತೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಯ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಪರೀಕ್ಷಾ ವಿಧಾನದಲ್ಲಿಯೂ ಬದಲಾವಣೆಗಳಿಲ್ಲ. ಈ ಹಿಂದೆ ಹೇಳಿದ ರೀತಿಯಲ್ಲಿಯೇ SSLC ಪರೀಕ್ಷೆಗಳನ್ನು ನಡೆಸಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಯಾವುದೇ ಆತಂಕಬೇಡ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಜುಲೈ 19 ಮತ್ತು 22 ರಂದು ಎರಡು ದಿನಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಶಿಕ್ಷಣ ಇಲಾಖೆ ಇಂದು ಮಹತ್ವದ ಸಭೆ ನಡೆಸಿ ನಿರ್ಧಾರ ಕೈಗೊಂಡಿದೆ. ಜುಲೈ ತಿಂಗಳ ಮೂರನೇ ವಾರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಇಂದು (ಜೂನ್ 28) ನಡೆದ ಸಭೆಯಲ್ಲಿ ಅಂತಿಮಗೊಳಿಸಲಾಗಿದ್ದು, ಜುಲೈ 19 ರಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಬೆಳಗ್ಗೆ 10.30ರಿಂದ 1.30ರ ತನಕ ಹಾಗೂ ಭಾಷಾ ವಿಷಯಗಳ ಪರೀಕ್ಷೆ 22ರಂದು ಬೆಳಗ್ಗೆ 10.30ರಿಂದ 1.30ರ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದಾರೆ.

ಸುರಕ್ಷಿತ ವಾತಾವರಣದಲ್ಲಿ ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಜಿಲ್ಲಾಧಿಕಾರಿಗಳು, ಸಿಇಒ, ಎಸ್​ಪಿ, ಡಿಎಚ್‌ಒಗಳು ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ರಾಜ್ಯದ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಪಾಲ್ಗೊಂಡಿದ್ದರು.


ಇದನ್ನೂ ಓದಿ : ಜಮ್ಮು ಸೇನಾನೆಲೆಯ ಬಳಿ ಕಾಣಿಸಿಕೊಂಡ ಡ್ರೋಣ್‌ಗಳು: ಸೇನೆಯಿಂದ ಫೈರಿಂಗ್

ಸೂಕ್ತ ಸುರಕ್ಷತಾ ಕ್ರಮಗಳ ಅಳವಡಿಕೆ 
ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಆಶಾ ಕಾರ್ಯಕರ್ತೆಯರು ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿಯನ್ನು ನೇಮಿಸಲಾಗುವುದು. ಒಂದು ಕೊಠಡಿಯಲ್ಲಿ ಕೇವಲ 12 ಬೆಂಚುಗಳಿಗೆ ಮಾತ್ರ ಅವಕಾಶವನ್ನು ನೀಡಲಾಗಿದ್ದು ಪ್ರತಿ ಬೆಂಚ್‌ಗೆ ಒಬ್ಬ ವಿದ್ಯಾರ್ಥಿಗೆ ಮಾತ್ರ ಅವಕಾಶ ನೀಡಲಾಗುವುದು. ಕೊರೋನಾ ಸೋಂಕಿತ ವಿದ್ಯಾರ್ಥಿಗಳು ಬಯಸಿದರೆ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. 8,76,581 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಯನ್ನು ಬರೆಯಲಿದ್ದು 73,066 ಸೆಂಟರ್‌ಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಆರೋಗ್ಯ ಇಲಾಕೆ SOP ಬಿಡುಗಡೆ ಮಾಡಿದ್ದು ಆರೋಗ್ಯ ಇಲಾಖೆಯ ಮಾರ್ಗಸೂಚಿಗಳ ಅನುಸಾರವೇ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ.

ಪ್ರಶ್ನೆ ಪತ್ರಿಕೆ ಅತ್ಯಂತ ಸುಲಭವಾಗಿರಲಿದ್ದು ಸಂಪೂರ್ಣ ಬಹುಆಯ್ಕೆ ಪ್ರಶ್ನೆಗಳನ್ನೇ ಒಳಗೊಂಡಿರಲಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿಗೆ ವ್ಯಾಕ್ಸಿನ್ ತೆಗೆದುಕೊಳ್ಳುವುದು ಕಡ್ಡಾಯವಾಗಿದೆ. ಪರೀಕ್ಷಾ ವಲಯದಲ್ಲಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದು ಖಡ್ಡಾಯವಾಗಿರಲಿದ್ದು ನಿಯಮ ಉಲ್ಲಂಘನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಪೋಷಕರು ಬೆಳಿಗ್ಗೆ 8 ಗಂಟೆ ವೇಳೆಗೆ ಪರೀಕ್ಷಾ ಕೇಂದ್ರಗಳಿಗೆ ಬರಬಹುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...