Homeಚಳವಳಿಸರ್ಕಾರದೊಂದಿಗೆ ಚರ್ಚಿಸಲು ಯಾವುದೇ ಸಮಿತಿ ರಚಿಸಿಲ್ಲ - ರೈತ ಮುಖಂಡರು

ಸರ್ಕಾರದೊಂದಿಗೆ ಚರ್ಚಿಸಲು ಯಾವುದೇ ಸಮಿತಿ ರಚಿಸಿಲ್ಲ – ರೈತ ಮುಖಂಡರು

ಮಹಿಳಾ ದಿನದಂದು ದೆಹಲಿ ವಿಶ್ವವಿದ್ಯಾಲಯಕ್ಕೆ ಹೋಗಿದ್ದ ಹೋರಾಟಗಾರ್ತಿ ನೋದೀಪ್ ಕೌರ್ ಮೇಲೆ ಎಬಿವಿಪಿ ನಡೆಸಿದ ದಾಳಿಯನ್ನು ಎಸ್‌ಕೆಎಂ ಖಂಡಿಸಿದೆ.

- Advertisement -
- Advertisement -

ಸರ್ಕಾರದೊಂದಿಗೆ ಮಾತುಕತೆಗಾಗಿ 9 ಸದಸ್ಯರ ಸಮಿತಿಯನ್ನು ರಚಿಸಲಾಗುತ್ತಿದೆ ಎಂಬ ಹೇಳಿಕೆಗಳು ಸುಳ್ಳು ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸ್ಪಷ್ಟಪಡಿಸಿದೆ. ಸರ್ಕಾರದೊಂದಿಗೆ ಮಾತನಾಡಲು ಅಂತಹ ಯಾವುದೇ ಸಮಿತಿಯನ್ನು ರಚಿಸಲಾಗಿಲ್ಲ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಒಕ್ಕೂಟ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿರುವ ರೈತರು, ರೈತ ವಿರೋಧಿ ಬಿಜೆಪಿಗೆ ಮತ ಚಲಾಯಿಸದಂತೆ ಅಲ್ಲಿನ ಮತದಾರರನ್ನು ಮನವಿ ಮಾಡಲು ಎಸ್‌ಕೆಎಂ ನಾಯಕರ ತಂಡ ಪಶ್ಚಿಮ ಬಂಗಾಳ ಮತ್ತು ಅಸ್ಸಾಂಗೆ ಹೋಗಲಿದೆ ಎಂದು ತಿಳಿಸಿದ್ದಾರೆ. ಈ ಕಾರ್ಯಕ್ರಮವು ಮಾರ್ಚ್ 12 ರಂದು ಪಶ್ಚಿಮ ಬಂಗಾಳದಿಂದ ಪ್ರಾರಂಭವಾಗಿ ಮೂರು ದಿನಗಳು ಈ ರಾಜ್ಯಗಳಲ್ಲಿ ನಡೆಯಲಿದೆ ಎಂದು ಎಸ್‌ಕೆಎಂ ಪತ್ರಿಕಾ ಪ್ರಕಟಣೆ ತಿಳಿಸಿದೆ.

ರೈತ ಆಂದೋಲನದಲ್ಲಿ ಈವರೆಗೆ ಪ್ರಾಣ ತ್ಯಾಗ ಮಾಡಿರುವ ರೈತರ ಸಂಖ್ಯೆ 280 ದಾಟಿದೆ ಎಂದು ಮಾಹಿತಿ ನೀಡಿದ್ದಾರೆ. ಇಂದು (ಬುಧವಾರ) ಹರಿಯಾಣದ ಜಿಂದ್ ಜಿಲ್ಲೆಯ 50 ವರ್ಷದ ರೈತ ರಾಧೇಶ್ಯಾಮ್ ಟಿಕ್ರಿ ಗಡಿಯಲ್ಲಿ ಹುತಾತ್ಮರಾಗಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣದ ನಂತರ ವೃದ್ದರನ್ನು ದರ್ಶನಕ್ಕಾಗಿ ಕಳುಹಿಸುತ್ತೇವೆ: ಕೇಜ್ರಿವಾಲ್

ಕಿಸಾನ್ ಮಜ್ದೂರ್ ಜಾಗೃತಿ ಯಾತ್ರೆಯು ಉತ್ತರ ಪ್ರದೇಶದ ಬಿಜ್ನೋರ್ ದಾಟಿ, ನಿನ್ನೆ ಉತ್ತರಾಖಂಡದ ಜಸ್ಪುರಕ್ಕೆ ಪ್ರವೇಶಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಯಾತ್ರೆ 300 ಕಿಲೋಮೀಟರ್‌ಗಿಂತಲೂ ಹೆಚ್ಚು ದೂರ ಮತ್ತು ಇದುವರೆಗೆ 200 ಕ್ಕೂ ಹೆಚ್ಚು ಹಳ್ಳಿಗಳು, ಪಟ್ಟಣಗಳನ್ನು ತಲುಪಿದೆ. ಇಂದು ರಾತ್ರಿ ದಿನೇಶಪುರವನ್ನು ತಲುಪುವ ನಿರೀಕ್ಷೆಯಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇನ್ನು, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ದೆಹಲಿ ವಿಶ್ವವಿದ್ಯಾಲಯಕ್ಕೆ ಹೋಗಿದ್ದ ಹೋರಾಟಗಾರ್ತಿ ನೋದೀಪ್ ಕೌರ್ ಮೇಲೆ ಎಬಿವಿಪಿ ನಡೆಸಿದ ದಾಳಿಯನ್ನು ಎಸ್‌ಕೆಎಂ ಖಂಡಿಸಿದೆ.

ಇತ್ತ, “ರೈತರು ಮೋದಿ ಸರ್ಕಾರದ ಉಳಿದ ಮೂರೂವರೆ ವರ್ಷ ಅವಧಿಯುದ್ದಕ್ಕೂ ತಮ್ಮ ಹೋರಾಟ ಮುಂದುವರಿಸಲು ಸಿದ್ಧವಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲಿ ಪ್ರಯತ್ನಿಸಿದರೂ ಈ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ರೈತ ಮುಖಂಡ ನರೇಂದ್ರ ಟಿಕಾಯತ್ ಹೇಳಿದ್ದಾರೆ.


ಇದನ್ನೂ  ಓದಿ: ಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...