Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಸಂಬಂಧ ನಮ್ಮ ವಿವಿಯಲ್ಲಿ ಯಾವ ಗಲಾಟೆಯೂ ನಡೆದಿಲ್ಲ: ಜಾಮಿಯಾ ಕುಲಪತಿ ಸ್ಪಷ್ಟನೆ

ಬಿಬಿಸಿ ಸಾಕ್ಷ್ಯಚಿತ್ರ ಸಂಬಂಧ ನಮ್ಮ ವಿವಿಯಲ್ಲಿ ಯಾವ ಗಲಾಟೆಯೂ ನಡೆದಿಲ್ಲ: ಜಾಮಿಯಾ ಕುಲಪತಿ ಸ್ಪಷ್ಟನೆ

- Advertisement -
- Advertisement -

ಕ್ಯಾಂಪಸ್‌ನಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ವಿಚಾರಕ್ಕೆ ಗಲಾಟೆ ನಡೆದಿರುವ ವರದಿಗಳನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಗುರುವಾರ ಮಧ್ಯಾಹ್ನ ತಿರಸ್ಕರಿಸಿದೆ.

ಈ ಬಗ್ಗೆ ವಿಶ್ವವಿದ್ಯಾನಿಲಯದ ಉಪಕುಲಪತಿ ನಜ್ಮಾ ಅಖ್ತರ್ ಅವರು ಸುದ್ದಿ ಸಂಸ್ಥೆ ANI ಜೊತೆ ಮಾತನಾಡಿದ್ದು, “ನಮ್ಮ ವಿಶ್ವವಿದ್ಯಾನಿಲಯದಲ್ಲಿ ಯಾವ ಗಲಾಟೆಯೂ ಆಗಲಿಲ್ಲ, ಗಲಾಟೆ ಮಾಡುವ ಪ್ರಯತ್ನ ಮಾಡಲಾಯಿತು ಆದರೆ ಅದನ್ನು ಸಂಪೂರ್ಣವಾಗಿ ವಿಫಲಗೊಳಿಸಲಾಯಿತು.” “ಏನೇ ಆಗಲಿ, ಬೀದಿಗಳಲ್ಲಿ ನಡೆದ ಸಣ್ಣ ಘಟನೆಯನ್ನು ಗಾಳಿಗೆ ತೂರಲಾಗಿದೆ. ನಮ್ಮ ಕ್ಯಾಂಪಸ್‌ನಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಚೆನ್ನಾಗಿವೆ” ಎಂದು ಹೇಳಿದ್ದಾರೆ.

ಬುಧವಾರ ದೆಹಲಿಯ ಓಖ್ಲಾ ಪ್ರದೇಶದಲ್ಲಿ ಬಿಬಿಸಿ ಆಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ವಿಶ್ವವಿದ್ಯಾನಿಲಯದ ಹೊರಗೆ ಗಲಾಟೆ ನಡೆಯಿತು. ಆಗ ಮೊದಲು ನಾಲ್ವರು ಎಸ್‌ಎಫ್‌ಐ ಸದಸ್ಯರನ್ನು ಬಂಧಿಸಲಾಯಿತು. ಆಗೆ ಅಲ್ಲಿ ಹಲವಾರು ವಿದ್ಯಾರ್ಥಿಗಳು ಜಮಾಯಿಸಿದರು. ನಂತರದ ಗೊಂದಲದಲ್ಲಿ ಹತ್ತಾರು ಮಂದಿಯನ್ನು ಪೊಲೀಸರು ಬಂಧಿಸಿದರು. ಹೆಚ್ಚಿನವರನ್ನು ನಂತರ ಬಿಡುಗಡೆ ಮಾಡಲಾಯಿತು ಆದರೆ ಕನಿಷ್ಠ 13 ಜನರು ಇಂದು ಬೆಳಿಗ್ಗೆ ಬಂಧನದಲ್ಲಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

ಬಂಧಿತ 13 ಜನರಲ್ಲಿ ಕನಿಷ್ಠ ನಾಲ್ವರು ಜಾಮಿಯಾದ ವಿದ್ಯಾರ್ಥಿಗಳಾಗಿದ್ದು, ಎಸ್‌ಎಫ್‌ಐ ಜಾಮಿಯಾ ಕಾರ್ಯದರ್ಶಿ ಅಜೀಜ್, ಎಸ್‌ಎಫ್‌ಐ ದಕ್ಷಿಣ ದೆಹಲಿ ಉಪಾಧ್ಯಕ್ಷ ನಿವೇದ್ಯ ಮತ್ತು ಎಸ್‌ಎಫ್‌ಐ ಸದಸ್ಯರಾದ ಅಭಿರಾಮ್ ಮತ್ತು ತೇಜಸ್ ಎಂದು ತಿಳಿದುಬಂದಿದೆ.

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ರದ್ದುಗೊಂಡ ನಂತರ ಕೆಲವು ವಿದ್ಯಾರ್ಥಿಗಳು ಕ್ಯಾಂಪಸ್‌ನ ಹೊರಗೆ ಗಲಾಟೆ ಮಾಡುತ್ತಿದ್ದಾರೆ ಎಂದು ಜಾಮಿಯಾ ಅಧಿಕಾರಿಗಳು ಹೇಳಿದರು. ಆ ನಂತರ ಕ್ರಮ ಕೈಗೊಂಡಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಬುಧವಾರ ಸಂಜೆ 6 ಗಂಟೆಗೆ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಆದರೆ ಅನುಮತಿಯಿಲ್ಲದೆ ಯಾವುದೇ ಪ್ರದರ್ಶನಕ್ಕೆ ಅನುಮತಿಸುವುದಿಲ್ಲ ಎಂದು ಜಾಮಿಯಾ ಆಡಳಿತವು ಹೇಳಿದೆ.

“ವಿದ್ಯಾರ್ಥಿಗಳ ಯಾವುದೇ ಸಭೆ ಅಥವಾ ಯಾವುದೇ ಚಲನಚಿತ್ರದ ಪ್ರದರ್ಶನವನ್ನು ಅನುಮತಿಯಿಲ್ಲದೆ ಕ್ಯಾಂಪಸ್‌ನಲ್ಲಿ ನಡೆಸುವಂತಿಲ್ಲ ಎಂದು ವಿಶ್ವವಿದ್ಯಾಲಯವು ಪುನರುಚ್ಚರಿಸುತ್ತದೆ” ಎನ್ನುವ ಅಧಿಸೂಚನೆಯನ್ನು ಓದಲಾಗಿದೆ.

“ಇಲ್ಲಿನ ಶಾಂತಿಯುತ ಶೈಕ್ಷಣಿಕ ವಾತಾವರಣವನ್ನು ನಾಶಮಾಡಲು ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಜನರು/ಸಂಸ್ಥೆಗಳನ್ನು ತಡೆಗಟ್ಟಲು ವಿಶ್ವವಿದ್ಯಾನಿಲಯವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.”

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿನ ಘಟನೆ ನಂತರ ಜಾಮಿಯಾದಲ್ಲಿ ಕೋಲಾಹಲವು ಸಂಭವಿಸಿದೆ, ಅಲ್ಲಿ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸುತ್ತಿದ್ದಾಗ ಕಲ್ಲಿನಿಂದ ದಾಳಿ ನಡೆಸಲಾಗಿತ್ತು.ಜೆಎನ್‌ಯು ಆಡಳಿತ ಕೂಡ ಪ್ರದರ್ಶನಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸೈದ್ಧಾಂತಿಕ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಬಲಿತ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ – ತಮ್ಮ ಮೇಲೆ ಕಲ್ಲಿನಿಂದ ದಾಳಿ ನಡೆಸಿದೆ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಮುಖ್ಯಸ್ಥೆ ಐಶೆ ಘೋಷ್ ಆರೋಪಿಸಿದ್ದಾರೆ.

ಕೋಲ್ಕತ್ತಾದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಎಸ್‌ಎಫ್‌ಐ ಘಟಕವು ಶುಕ್ರವಾರ ಸಂಜೆ 4 ಗಂಟೆಗೆ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಅಧಿಕಾರಿಗಳಿಂದ ಅನುಮತಿ ಕೋರಿದೆ.

ಬಿಬಿಸಿಯ ವಿವಾದಾತ್ಮಕ ಎರಡು ಭಾಗಗಳ ಸಾಕ್ಷ್ಯಚಿತ್ರವು ಹಿಂದೂ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ರೈಲಿಗೆ ಬೆಂಕಿ ಹಚ್ಚಿದ ನಂತರದ ಹಿಂಸಾಚಾರದಲ್ಲಿ 1,000 ಕ್ಕೂ ಹೆಚ್ಚು ಜನರ – ಹೆಚ್ಚಾಗಿ ಮುಸ್ಲಿಮರನ್ನು ಬಲಿತೆಗೆದುಕೊಂಡಾಗ ಭಾರತೀಯ ಮುಸ್ಲಿಮರೊಂದಿಗಿನ ಮೋದಿಯವರ ಸಂಬಂಧ ಮತ್ತು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಸಮಯವನ್ನು ಇವುಗಳಲ್ಲಿ ಟೀಕಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...