Homeಕರ್ನಾಟಕ'ಕೇಂದ್ರ ಮತ್ತು ರಾಜ್ಯಗಳ ನಡುವೆ ಸ್ಪರ್ಧೆ ಬೇಡ..'; ಕಳವಳ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್‌

‘ಕೇಂದ್ರ ಮತ್ತು ರಾಜ್ಯಗಳ ನಡುವೆ ಸ್ಪರ್ಧೆ ಬೇಡ..’; ಕಳವಳ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ಕೇಂದ್ರದ ವಿರುದ್ಧ ನಿರ್ದೇಶನಗಳನ್ನು ಕೋರಿ ರಾಜ್ಯ ಸರ್ಕಾರಗಳು ತನ್ನನ್ನು ಸಂಪರ್ಕಿಸಿರುವ ಇತ್ತೀಚಿನ ನಿದರ್ಶನಗಳ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕಳವಳ ವ್ಯಕ್ತಪಡಿಸಿದೆ. ತಿಕ್ಕಾಟದ ಬದಲಿಗೆ ಪರಸ್ಪರ ಸಹಕರಿಸಲು ಎರಡೂ ಕಡೆಯವರಿಗೆ ಸುಪ್ರೀಂ ಕರೆ ನೀಡಿತು. ಕೇಂದ್ರದಿಂದ ಬರ ಪರಿಹಾರ ಧನ ಬಿಡುಗಡೆಗೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, “ಕೇಂದ್ರ ಮತ್ತು ರಾಜ್ಯಗಳ ನಡುವೆ ಸ್ಪರ್ಧೆ ಬೇಡ” ಎಂದು ಸಲಹೆ ನೀಡಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಕೇಂದ್ರವು ಕರ್ನಾಟಕ ಸರ್ಕಾರಕ್ಕೆ ಆರ್ಥಿಕ ನೆರವು ನೀಡಿಲ್ಲ; ಹಣ ನೀಡದ ಕಾರಣ ದಕ್ಷಿಣದ ಜನರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿರುವುದರಿಂದ ನ್ಯಾಯಾಲಯದ ಮೊರೆ ಹೋಗುವುದನ್ನು ನಿರ್ಬಂಧಿಸಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಬರ ಸಂಬಂಧಿತ ಅನಾಹುತದ ಕುರಿತು ಅಂತರ-ಸಚಿವಾಲಯದ ತಂಡದ ವರದಿಯ ಮೇಲೆ ಕೇಂದ್ರವು ಸುಮಾರು ಆರು ತಿಂಗಳವರೆಗೆ (ಅದನ್ನು ಅಕ್ಟೋಬರ್‌ನಲ್ಲಿ ಸಲ್ಲಿಸಲಾಗಿದೆ) ಮತ್ತು “ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು) ನಿಧಿ ತಡೆಹಿಡಿಯುವ ಕಾರಣದಿಂದ ಪರಿಸ್ಥಿತಿ ಉಲ್ಬಣಗೊಂಡಿದೆ” ಎಂದು ರಾಜ್ಯವು ವಾದಿಸಿತು.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ವರದಿ ಸಲ್ಲಿಸಿದ ಒಂದು ತಿಂಗಳೊಳಗೆ ಕೇಂದ್ರವು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರ ಪೀಠವು, ಕೇಂದ್ರದ ಪರವಾಗಿ ಅಟಾರ್ನಿ ಜನರಲ್ ಆರ್ ವೆಂಕಟ್ರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಎರಡು ವಾರಗಳ ಕಾಲಾವಕಾಶ ನೀಡಿದೆ.

ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರದ ವಿರುದ್ಧ ದಕ್ಷಿಣದ ರಾಜ್ಯಗಳ ಕೋರ್ಟ್‌ ಮೊರೆ ಹೋಗಿವೆ. ವಿಶೇಷವಾಗಿ ದಕ್ಷಿಣದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು ಮತ್ತು ಕೇರಳ ಸರ್ಕಾರಗಳು ನಿಧಿ ವಿತರಣೆ ಮತ್ತು ತೆರಿಗೆಗಳ ವಿಕೇಂದ್ರೀಕರಣದ ಬಗ್ಗೆ ಕೇಂದ್ರವನ್ನ ಪ್ರಶ್ನಿಸಿವೆ. ಪ್ರವಾಹ ಪೀಡಿತ ಜಿಲ್ಲೆಗಳಿಗೆ ಮಧ್ಯಂತರ ಪರಿಹಾರ ಪ್ಯಾಕೇಜ್‌ನ ಭಾಗವಾಗಿ ₹2,000 ಕೋಟಿ ಬಿಡುಗಡೆ ಮಾಡಲು ತಮಿಳುನಾಡು ಕೇಂದ್ರಕ್ಕೆ ಆದೇಶವನ್ನು ಕೋರಿ ಕೆಲವು ದಿನಗಳ ನಂತರ ಕರ್ನಾಟಕದಿಂದ ಬರ ಪರಿಹಾರಕ್ಕೆ ಆಗ್ರಹಿಸಿ ಮನವಿ ಸಲ್ಲಿಕೆಯಾಗಿದೆ.

ವಿಪತ್ತು ಪರಿಹಾರಕ್ಕಾಗಿ ಅಥವಾ ತೆರಿಗೆ ಹಂಚಿಕೆಯಿಂದ ಬಾಕಿ ವಿಚಾರವಾಗಿ ದಕ್ಷಿಣದ ರಾಜ್ಯಗಳಿಗೆ ಹಣ ಬಿಡುಗಡೆಯ ಹೋರಾಟವು ಫೆಬ್ರವರಿಯಲ್ಲಿ ಸಂಸತ್ತಿನಲ್ಲಿ ಪ್ರಸ್ತಾಪವಾಯಿತು. ಅಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ನಡುವೆ ಮಾತಿನ ಚಕಮಕಿ ನಡೆಯಿತು. ‘ಬಿಜೆಪಿಯೇತರ ರಾಜ್ಯ ಸರ್ಕಾರಗಳು (ಆರ್ಥಿಕ) ಬಾಕಿಗಳಿಂದ ವಂಚಿತವಾಗಿವೆ’ ಎಂದು ಹೇಳಿದ್ದರು.

ಇದಕ್ಕೆ ಕೆರಳಿದ ಸಚಿವೆ ನಿರ್ಮಲಾ, “ತೆರಿಗೆಗಳ ವಿಕೇಂದ್ರೀಕರಣ ( ಕೇಂದ್ರ ಮತ್ತು ರಾಜ್ಯಗಳ ನಡುವೆ ಹಣ ಹಂಚಿಕೆ)… ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ ನಡೆಯುತ್ತದೆ” ಎಂದು ಹೇಳು ಮೂಲಕ ಜಾರಿಕೊಂಡಿದ್ದರು. ಕೇಂದ್ರದ ನಡೆ ವಿರೋಧಿಸಿ ಫೆಬ್ರವರಿಯಲ್ಲಿ ದಕ್ಷಿಣದ ಮೂರು ರಾಜ್ಯಗಳು ದೆಹಲಿಯಲ್ಲಿ ಬೀದಿಗಿಳಿದಿದ್ದವು.

ಇದನ್ನೂ ಓದಿ; ಕೇಜ್ರಿವಾಲ್ ಬಂಧನಕ್ಕೆ ನಿಮ್ಮ ವೋಟಿನ ಮೂಲಕ ಪ್ರತಿಕ್ರಿಯಿಸಿ: ದೆಹಲಿ ಮತದಾರರಲ್ಲಿ ಎಎಪಿ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...